ಬೆಂಗಳೂರು: ಲೋಕಸಭಾ ಕಾರ್ಯಾಲಯದ ಜಂಟಿ ಸಂಸದೀಯ ಸಮಿತಿಯು ಇಂದು ನಗರದ ತಾಜ್ ವೆಸ್ಟ್ ಎಂಡ್ ಗೆ ಭೇಟಿ ನೀಡಿತ್ತು. ಒಂದು ದೇಶ ಒಂದೇ ಚುನಾವಣೆ ಕುರಿತ ಸಾಂವಿಧಾನಿಕ ತಿದ್ದುಪಡಿ ವಿಚಾರದಲ್ಲಿ ರಾಜಕೀಯ ಪಕ್ಷಗಳ ಜೊತೆ ಸಮಿತಿಯು ಚರ್ಚೆ ನಡೆಸಿತು. ‘ಒಂದು ದೇಶ ಒಂದೇ ಚುನಾವಣೆ’ ಜಾರಿಗೆ ತರುವಂತೆ ಬಿಜೆಪಿ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಕುರಿತ ಚರ್ಚೆಯಲ್ಲಿ ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ಮಾಜಿ ಡಿಸಿಎಂ ಮತ್ತು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಗೋಪಿನಾಥ್ ರೆಡ್ಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು

