ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್:-

ಚಾಮರಾಜನಗರ: ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್.(Puttanna Kangal)ಇವರ ಚಿಂತನೆ, ದೂರದೃಷ್ಟಿ, ಸೃಜನಶೀಲತೆ,ಹೊಸ ರೂಪದ ಯೋಚನೆ, ವಿಶ್ವ ಶ್ರೇಷ್ಠ ನಿರ್ದೇಶಕರನ್ನಾಗಿ ಮಾಡಿ ಕನ್ನಡಿಗರು ಹೆಮ್ಮೆಪಡುವಂತೆ ಮಾಡಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಂಸ್ಕೃತಿ ಚಿಂತಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.
ಅವರು ಕನ್ನಡ ಸಾಹಿತ್ಯ ಪರಿಷತ್ತು ಸಂಸ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಚಿತ್ರ ಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ಕೊಡುಗೆಗಳು ಕುರಿತು ಮಾತನಾಡುತ್ತಾ ಪುಟ್ಟಣ್ಣ ಕಣಗಾಲ್ ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ಮಿಸಿ ವಿಶೇಷ ಶೈಲಿಯ ಮೂಲಕ ನಿರ್ದೇಶನ ನೀಡಿದವರು.

ಇವರ ಚಿತ್ರಗಳಲ್ಲಿ ಕಲೆ,ಸಾಹಿತ್ಯ,ಭಾವನಾತ್ಮಕತೆ, ಮಾನವೀಯ ಸಂಬಂಧಗಳು, ಸಾಮಾಜಿಕ ಕಾಳಜಿ,ಆಳವಾದ ಮಹಿಳಾ ಪ್ರಾಧಾನ್ಯತೆ ಮುಂತಾದ ದೃಷ್ಟಿಕೋನದ ಮೂಲಕ ಕನ್ನಡ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗ ಶಾಶ್ವತವಾಗಿ ಉಳಿಯುವಂತೆ ಮಾಡಿದವರು. ಇವರ ಚಿತ್ರಗಳಾದ ಬೆಳ್ಳಿಮೋಡ, ಗೆಜ್ಜೆಪೂಜೆ, ನಾಗರಹಾವು, ಶರಪಂಜರ,ಶುಭ ಮಂಗಳ, ಸಾಕ್ಷಾತ್ಕಾರ, ಅಮೃತಘಳಿಗೆ, ಮಸಣದ ಹೂವು ಚಿತ್ರಗಳು ಕಣಗಾಲ್ ರವರನ್ನು ವಿಶ್ವಖ್ಯಾತಿ ತಂದುಕೊಟ್ಟವು. ಕನ್ನಡದಲ್ಲಿ 24 ಚಿತ್ರಗಳ ನಿರ್ದೇಶನ ಮಾಡಿ ಹಿಂದಿ ಮತ್ತು(Famouse by Directing Filmas in Both Hindi and Malyalam ) ಮಲಯಾಳಂ ಗಳಲ್ಲೂ ನಿರ್ದೇಶನ ಮಾಡಿ ಪ್ರಸಿದ್ಧರಾದವರು. ಇವರ ಪ್ರತಿ ಚಿತ್ರದಲ್ಲೂ ಮಹಿಳಾ ಪ್ರಾಧಾನ್ಯತೆಗೆ ಹೆಚ್ಚು ಒತ್ತು ನೀಡಲಾಗಿದೆ.ಕನ್ನಡ ಚಿತ್ರರಂಗಕ್ಕೆ ಅಪಾರ ನಟರನ್ನು ನೀಡಿದ ಕೀರ್ತಿ ಪುಟ್ಟಣ್ಣ ಕಣಗಾಲ್ ರವರಿಗೆ ಸಲ್ಲುತ್ತದೆ. ಕನ್ನಡ ಚಿತ್ರರಂಗದ ದಿಗ್ಗಜರಾದ ವಿಷ್ಣುವರ್ಧನ್, ಅಂಬರೀಷ್,ಶ್ರೀನಾಥ್, ರಾಮಕೃಷ್ಣ, ಶ್ರೀಧರ್, ಜೈ ಜಗದೀಶ್ ಹಾಗೂ ಕಲ್ಪನಾ,ಆರತಿ, ಪದ್ಮಾವಾಸಂತಿ, ಅಪರ್ಣ ಮುಂತಾದ ನಟರನ್ನು ಚಿತ್ರರಂಗದ ಮೂಲಕ ಕನ್ನಡ ಚಿತ್ರರಂಗಕ್ಕೆ ನೀಡಿದ ಶಿಲ್ಪಿ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಗ್ರಾಮದಲ್ಲಿ ಜನಿಸಿದ ಪುಟ್ಟಣ್ಣನವರ ಸ್ಮಾರಕವನ್ನು ನಿರ್ಮಿಸುವ ನಿರ್ಧಾರ ಕೈಗೊಂಡಿರುವ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಎಲ್ ಸುರೇಶ್ ಮಾತನಾಡಿ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಸಾಕ್ಷಾತ್ಕಾರ ಚಿತ್ರವನ್ನು ನಿರ್ಮಾಣ ಮಾಡಿದವರುಕೃಷ್ಣ ಚಿತ್ರಮಂದಿರದ ಮಾಲೀಕರಾಗಿದ್ದ ಮಲ್ಲಿಕ್ ರವರು ಚಾಮರಾಜನಗರದವರುಎಂಬುದು ಸಂತೋಷವಾದುದು.ಪುಟ್ಟಣ್ಣ ಕಣಗಾಲ್ ರವರನ್ನು ನಿರ್ದೇಶಕರ ಬ್ರಹ್ಮ ಎಂದು ಕರೆಯಲಾಗಿದೆ.ಅವರ ಪ್ರತಿ ಚಿತ್ರಗಳಲ್ಲೂ ಕಲಾವಿದರಿಂದ ಶ್ರೇಷ್ಠ ಮಟ್ಟದ ನಟನೆಯನ್ನು ಹೊರ ತರುವ ಮೂಲಕ ಶಾಶ್ವತವಾದ ನಟರನ್ನು ರೂಪಿಸಿದ ಕೀರ್ತಿ ಪುಟ್ಟಣ್ಣ ಕಣಗಾಲ್ ರವರಿಗೆ ಸಲ್ಲುತ್ತದೆ.ಅವರ ರಂಗನಾಯಕಿ ಚಿತ್ರದಲ್ಲಿ ಅಪೂರ್ವವಾದ ಪಾತ್ರಗಳ ಸೃಷ್ಟಿಯ ಜೊತೆಗೆ ಮಸಣದ ಹೂವು,ಶರಪಂಜರ,ಎಡಕಲ್ಲು ಗುಡ್ಡದಮೇಲೆ ಚಿತ್ರಗಳು ಕನ್ನಡಿಗರ ಮನದಲ್ಲಿ ಶಾಶ್ವತವಾಗಿ ಉಳಿದಿದೆ. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ನೂರಾರು ಕಾರ್ಯಕ್ರಮಗಳನ್ನು ರೂಪಿಸಿ ಪ್ರತಿಯೊಬ್ಬ ಸಾಹಿತಿಗಳು ಕಲಾವಿದರು, ನಟರು, ರಾಷ್ಟ್ರಪುರುಷರು,ನಿರ್ದೇಶಕರು ಖಳನಟರು, ಕವಿಗಳನ್ನು ಪರಿಚಯಿಸುವ ಕಾರ್ಯ ಮಾಡುತ್ತಿರುವುದು ಹೆಮ್ಮೆಯಾಗಿದೆ. ಅಧ್ಯಕ್ಷರಾದ ಋಗ್ವೇದಿ ಅವರಿಗೆ ವಿಶೇಷವಾದ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ತಿಳಿಸಿದರು.

ಪ್ರಾಸ್ತಾವಿಕವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ಬಿಕೆ ಆರಾಧ್ಯ ಪುಟ್ಟಣ್ಣ ಕಣಗಾಲ್ ರವರ ಜೀವನ ಪ್ರಶಸ್ತಿ ಗೌರವ ಹಾಗೂ ಅವರ ಸಾಧನೆಗಳ ಕುರಿತು ಪರಿಚಯ ಮಾಡಿಕೊಟ್ಟರು.
ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ಎಲ್ ಶಿವಲಿಂಗ ಮೂರ್ತಿ ರವರು ಪುಟ್ಟಣ್ಣ ಕಣಗಾಲ್ ನಿರ್ದೇಶನದ ಚಿತ್ರಗಳ ಗೀತೆಗಳನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸರಸ್ವತಿ, ಉಮೇಶ್,ರಾಜೇಶ್,ಹನುಮಂತ ನಾಯಕ, ಮಂಜುನಾಥ್, ವೆಂಕಟೇಶ್, ರಘು ಮುಂತಾದವರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles