ಕರ್ನಾಟಕ ರಾಜ್ಯ ಮುಕ್ತ ವಿ.ವಿ.ಯಲ್ಲಿ ವಿವಿಧ ಕೋರ್ಸುಗಳ ಪ್ರವೇಶಾತಿ ಆರಂಭ

ಯುಜಿಸಿ (UGC) ಅನುಮೋದಿತ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (Open University) ಪ್ರಸಕ್ತ 2026-27ನೇ  ಶೈಕ್ಷಣಿಕ ಸಾಲಿಗೆ ಜುಲೈ ಆವೃತ್ತಿ  ಕೋರ್ಸ್‍ಗಳ (Course) ಪ್ರವೇಶಾತಿಗೆ ಆನ್‍ಲೈನ್ (Online) ಮೂಲಕ ಅರ್ಜಿ ಆಹ್ವಾನಿಸಿದೆ.

ಸ್ನಾತಕ ಕೋರ್ಸ್‍ಗಳಾದ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್.ಸಿ, ಸ್ನಾತಕೋತ್ತರ ಕೋರ್ಸ್‍ಗಳಾದ ಎಂ.ಎ, ಎಂ.ಕಾಂ., ಎಂ.ಎಸ್.ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್.ಸಿ, ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ,  ಸರ್ಟಿಫಿಕೇಟ್,  ಡಿಪ್ಲೋಮಾ,  ಮತ್ತು ಸ್ನಾತಕ ಪೂರ್ವ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಜೂನ್ 30 ರಿಂದ ಪ್ರವೇಶಾತಿ ಪ್ರಾರಂಭಿಸಲಾಗಿದ್ದು, ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ.

ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಅಥವಾ ಮಾಜಿ ಸೈನಿಕ ವಿದ್ಯಾರ್ಥಿಗಳು, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಹಾಗೂ ಕೆಎಸ್‍ಆರ್‍ಟಿಸಿ, ಬಿಎಂಟಿಸಿ, ಎನ್‍ಡಬ್ಲ್ಯೂಕೆಆರ್‍ಟಿಸಿ, ಕೆಕೆಆರ್‍ಟಿಸಿ  ನೌಕರರುಗಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಸೌಲಭ್ಯವಿರುತ್ತದೆ. ಕೋವಿಡ್‍ನಿಂದ ಮೃತರಾದ ಪೋಷಕರ ಮಕ್ಕಳಿಗೆ, ದೃಷ್ಟಿ ದೋಷವುಳ್ಳ ವಿದ್ಯಾರ್ಥಿಗಳಿಗೆ (ಬಿ.ಎಡ್ ಮತ್ತು ಎಂ.ಬಿ.ಎ. ಕೋರ್ಸ್‍ಗಳನ್ನು ಹೊರತುಪಡಿಸಿ) ಹಾಗೂ ತೃತೀಯ ಲಿಂಗಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.ksoumysuru.ac.in ನಲ್ಲಿ  KSOU Admission Portal ಮೂಲಕ ಈ ಪದವಿಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯನ್ನು ಪರಿಶೀಲಿಸಿದ ನಂತರ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ, ಡಾ.ಪಿ.ಹರೀಶ, ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ-04,   ನಂ. 121, 2ನೇ ಮಹಡಿ, ಹೊಸೂರು ಮುಖ್ಯ ರಸ್ತೆ, ಮಡಿವಾಳ, ಬೆಂಗಳೂರು – 560068 ಅಥವಾ  ದೂರವಾಣಿ ಸಂಖ್ಯೆಗಳಾದ 080-23158888, 8904036090, 6363390600  ಅನ್ನು ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles