ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ಒತ್ತಾಯಿಸಿ, ಶಿಕ್ಷಣ ವ್ಯವಸ್ಥೆ ಸುಧಾರಣೆಗಾಗಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅಭಿಯಾನ

ಬೆಂಗಳೂರು: ಕೃಷಿ ತಂತ್ರಜ್ಞಾನ ಸಂಸ್ಥೆಯ ಸಭಾಂಗಣದಲ್ಲಿ ಭಾರತದ ಶಿಕ್ಷಣ (Indian Educaqtion) ವ್ಯವಸ್ಥೆಯ ಐಸಿಯುನಲ್ಲಿದೆ (Intensive Care Unit) ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳು ಧ್ವನಿಯಾಗಿ ಮಾಧ್ಯಮಗೋಷ್ಠಿ. ಸಂಸದರಾದ ಶ್ರೀಮತಿ ವರ್ಷಾ ಏಕನಾಥ್ ಗಾಯಕ್ವಾಡ್ (Smt. Varsha Ekanath Gaikwad) ರವರು, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ (KPCC) ರಾಜ್ಯಾಧ್ಯಕ್ಷರಾದ ಹೆಚ್.ಎಸ್.ಮಂಜುನಾಥ್ ಗೌಡರು (HS Manjunath Gowda) ಭಾಗವಹಿಸಿದ್ದರು. ಮಾಜಿ ವಿಧಾನಪರಿಷತ್ ಸದಸ್ಯರುಗಳಾದ ಆರ್.ವಿ.ವೆಂಕಟೇಶ್, ರಮೇಶ್ ಬಾಬು ರಾಜ್ಯ ಯುವ ಕಾಂಗ್ರೆಸ್ ಸಮಿತಿ ಉಸ್ತುವಾರಿ ಭಗವಾನ್ ರವರು ಉಪಸ್ಥಿತರಿದ್ದರು

ಶ್ರೀಮತಿ ವರ್ಷಾ ಏಕನಾಥ್ ಗಾಯಕ್ವಾಡ್ ರವರು ಮಾತನಾಡಿ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು, ಪಾರದರ್ಶಕವಾಗಿ ಪರೀಕ್ಷೆ ನಡೆಯಬೇಕು ಎಂದು ಪಾರ್ಲಿಮೆಂಟ್ ನಿಂದ ರಸ್ತೆವರಗೆ ಪ್ರತಿಭಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತ ಎಲ್ಲ ರಾಜ್ಯ 28ಪ್ರಮುಖ ನಗರದಲ್ಲಿ 40ದಿನಗಳ ಕಾಲ ಸತತ ಹೋರಾಟ ನಡೆಸಲಾಗುತ್ತಿದೆ ಆಗಸ್ಟ್ 9ರಂದು ನವದೆಹಲಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡಲಾಗುವುದು.

ಪರೀಕ್ಷೆ ಮತ್ತು ಉದ್ಯೋಗ ನೇಮಕಾತಿ ಕುರಿತು ದಿನಾಂಕಗಳನ್ನು ನಿಗದಿ ಮಾಡಬೇಕು. 10ವರ್ಷದಲ್ಲಿ 48ಪರೀಕ್ಷೆಗಳು , ಮರು ಪರೀಕ್ಷೆಗಳು ನಡೆದಿದೆ ಮತ್ತು ಹಲವಾರು ಪರೀಕ್ಷೆಗಳು ರದ್ದಾಗಿದೆ.

ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಿ ರಾಜೀನಾಮೆ ನೀಡಬೇಕು. ಪಾರದರ್ಶಕವಾಗಿ ಪರೀಕ್ಷೆ ನಡೆಯಬೇಕು ಹಾಗೂ ಉದ್ಯೋಗ ನೇಮಕಾತಿ ಸಮರ್ಪಕವಾಗಿ ಆಗಬೇಕು ಎಂಬುದು ನಮ್ಮ ಒತ್ತಾಯ. ಶಿಕ್ಷಣ, ಆರೋಗ್ಯ ಮುಖ್ಯ ಇದರಲ್ಲಿ ಅನ್ಯಾಯವಾಗಬಾರದು ಎಂದು ಹೇಳಿದರು.

ಹೆಚ್.ಎಸ್.ಮಂಜುನಾಥಗೌಡ ರವರು ಮಾತನಾಡಿ ವಿದ್ಯಾರ್ಥಿಗಳು ವರ್ಷಗಳ ಕಾಲ ಅಭ್ಯಾಸ ಮಾಡಿ ನೀಟ್ ಮತ್ತು ಯು.ಪಿ.ಎಸ್.ಸಿ. ಪರೀಕ್ಷೆಗಳ ಬರೆಯಲು ಸಾಕಷ್ಟು ಶ್ರಮವಹಿಸುತ್ತಾರೆ, ಲಕ್ಷಾಂತರ ರೂಪಾಯಿ ಟ್ಯೂಶನ್ ಫೀ ಬರಿಸುತ್ತಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸೌಲಭ್ಯ ಸೌವಲತ್ತು ಇಲ್ಲದಿದ್ದರು ಪರೀಕ್ಷೆ ಬರೆಯಲು ಕಷ್ಟಪಡುತ್ತಾರೆ.

ಪ್ರಶ್ನೆ ಪತ್ರಿಕೆ ಸೋರಿಕೆ ಆಗುವುದರಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಗತಿಯೇನು. ಮಾನಸಿಕ, ದೃಹಿಕವಾಗಿ ಕುಗ್ಗಿಹೋಗುತ್ತಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಕುಟುಂಬ ನಲುಗಿಹೋಗಿದೆ.
ನಮ್ಮ ಪಕ್ಷದ ಯುವ ನಾಯಕ ರಾಹುಲ್ ಗಾಂಧಿರವರು ಪರೀಕ್ಷೆಗಳು ಪಾರದರ್ಶಕವಾಗಿ ನಡೆಯಬೇಕು ಎಂಬ ಉದ್ದೇಶ ಇಟ್ಟುಕೊಂಡು ಬೃಹತ್ ಅಭಿಯಾನ ಹಮ್ಮಿಕೊಂಡಿದ್ದಾರೆ ಅವರ ಬೆಂಬಲವಾಗಿ ರಾಜ್ಯ ಯುವ ಕಾಂಗ್ರೆಸ್ ಸಮಿತಿ ಮತ್ತು ಹಲವಾರು ವಿದ್ಯಾರ್ಥಿಗಳ ಸಂಘಟನೆಯಲ್ಲಿ ಹೋರಾಟ ಮಾಡಲಾಗುತ್ತಿದೆ.

ಕೇಂದ್ರ ಸರ್ಕಾರ ಜಾತಿ, ಧರ್ಮದ ರಾಜಕೀಯ ರಾಜಕಾರಣ ಮಾಡುತ್ತಿದೆ. ಇದುವರಗೆ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗಿಲ್ಲ. ರಾಜ್ಯದ ಪ್ರತಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles