ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ 

ಪೊಲೀಸ್ ಅಧಿಕಾರಿಯ ಹೇಳಿಕೆ ಸರ್ಕಾರದ ಧೋರಣೆಯ ಪ್ರತಿಬಿಂಬ; ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಸರ್ಕಾರವೇ ಹೊಣೆ

ಬೆಂಗಳೂರು: ಗಣೇಶೋತ್ಸವ (Ganeshotsava) ಸಂದರ್ಭದಲ್ಲಿ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂಬ ಪೊಲೀಸರ ಕ್ರಮವನ್ನು ಯಾರೂ ವಿರೋಧಿಸುವುದಿಲ್ಲ. ಆದರೆ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕ ರಸ್ತೆಗಳಲ್ಲೂ ಪಟಾಕಿ (Crackers) ಸಿಡಿಸಬಾರದು ಎಂದು ನಿರ್ಬಂಧಿಸುವ ರೀತಿಯ ಹೇಳಿಕೆಗಳು ಸ್ವೀಕಾರಾರ್ಹವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ  (BY Vijayendra) ಹೇಳಿದ್ದಾರೆ.

ಗಣೇಶೋತ್ಸವ ಕೇವಲ ಒಂದು ಧಾರ್ಮಿಕ ಆಚರಣೆಯಲ್ಲ. ಇದು ಹಿಂದೂ ಸಮಾಜದಲ್ಲಿ ಜಾಗೃತಿ, ಐಕ್ಯತೆ ಮತ್ತು ಸಾಮಾಜಿಕ ಬಾಂಧವ್ಯವನ್ನು ಮೂಡಿಸುವ ಪ್ರಮುಖ ಹಬ್ಬ. ಇಂತಹ ಹಬ್ಬವನ್ನು ಆಚರಿಸುವುದಕ್ಕೂ ಸರ್ಕಾರ ಅನುಮತಿ, ನಿರ್ಬಂಧ, ವಿವಿಧ ನೆಪಗಳ ಮೂಲಕ ಅಡ್ಡಿಪಡಿಸುವುದು ಏಕೆ ಎಂದು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದ್ದಾರೆ.

ಮಸೀದಿ ಒಳಗೆ ಪ್ರವೇಶಿಸಿ ಪಟಾಕಿ ಸಿಡಿಸುವುದು ಕಾನೂನುಬಾಹಿರವಾದರೆ, ಅದಕ್ಕೆ ಯಾರೂ ಅವಕಾಶ ನೀಡಬಾರದು. ಆದರೆ ಅದೇ ಕಾರಣವನ್ನು ಮುಂದಿಟ್ಟುಕೊಂಡು ಸಾರ್ವಜನಿಕ ರಸ್ತೆಗಳಲ್ಲೂ ಪಟಾಕಿ ಸಿಡಿಸಬಾರದು ಎಂದು ಹೇಳುವುದು ಅತಿರೇಕದ ಕ್ರಮ. “ನಾವು ನಮ್ಮ ಕಾರ್ಯಕರ್ತರಿಗೂ ಕಾನೂನು ಉಲ್ಲಂಘಿಸಬೇಡಿ ಎಂದು ಹೇಳುತ್ತೇವೆ. ಆದರೆ ಹಬ್ಬ ಆಚರಿಸುವುದಕ್ಕೂ ನಿರ್ಬಂಧ ಹೇರುವ ಪರಿಸ್ಥಿತಿ ಬಂದರೆ ನಾವು ಪಾಕಿಸ್ತಾನದಲ್ಲಿದ್ದೇವೆಯೇ?” ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಪೊಲೀಸ್ ಅಧಿಕಾರಿಯ ಹೇಳಿಕೆ ಸರ್ಕಾರದ ಧೋರಣೆಯೇ?

ಒಬ್ಬ ಪೊಲೀಸ್ ಇನ್ಸ್‌ಪೆಕ್ಟರ್ ಈ ರೀತಿಯ ಹೇಳಿಕೆ ನೀಡಿರುವುದನ್ನು ಕೇವಲ ಅಧಿಕಾರಿಯ ವೈಯಕ್ತಿಕ ಹೇಳಿಕೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಆಡಳಿತ ಪಕ್ಷದ ಧೋರಣೆಯೇ ಅಧಿಕಾರಿಗಳ ಮೂಲಕ ಹೊರಬರುತ್ತಿದೆಯೇ ಎಂಬ ಅನುಮಾನ ಜನರಲ್ಲಿ ಮೂಡಿದೆ. ಸರ್ಕಾರ ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈಗಾಗಲೇ ವಂದೇ ಮಾತರಂ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರದ ಗೊಂದಲಕಾರಿ ಮತ್ತು ಎಡಬಿಡಂಗಿ ನಿರ್ಧಾರಗಳನ್ನು ರಾಜ್ಯದ ಜನತೆ ನೋಡಿದ್ದಾರೆ. ಇದೀಗ ಗಣೇಶೋತ್ಸವಕ್ಕೂ ನಿರ್ಬಂಧಗಳನ್ನು ಹೇರುವ ಮೂಲಕ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಒಂದು ಕಡೆ ಅಲ್ಪಸಂಖ್ಯಾತರ ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದು, ಮತ್ತೊಂದು ಕಡೆ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಸರ್ಕಾರಕ್ಕೆ ಹಿಂದೂಗಳ ಮತ ಬೇಡವೆಂದು ನಿರ್ಧರಿಸಿದ್ದರೆ ಅದನ್ನು ಬಹಿರಂಗವಾಗಿ ಹೇಳಲಿ. ಆದರೆ ಈ ರೀತಿಯ ಉದ್ದಟತನದ ಹೇಳಿಕೆಗಳ ಮೂಲಕ ಸಮಾಜದಲ್ಲಿ ಅಸಮಾಧಾನ ಸೃಷ್ಟಿಸುವುದು ಸರಿಯಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಸರ್ಕಾರವೇ ಹೊಣೆ

ಹಿಂದೂ ಸಮಾಜ ಅತ್ಯಂತ ಶಾಂತಿ ಮತ್ತು ಸಂಯಮದಿಂದ ಹಬ್ಬಗಳನ್ನು ಆಚರಿಸುತ್ತಿದೆ. ಅವರ ತಾಳ್ಮೆಯನ್ನು ಪರೀಕ್ಷಿಸುವಂತಹ ಕ್ರಮಗಳನ್ನು ಸರ್ಕಾರ ಕೈಗೊಳ್ಳಬಾರದು. ಧಾರ್ಮಿಕ ಆಚರಣೆಗಳಿಗೆ ಅನಗತ್ಯ ಅಡ್ಡಿ, ಬೆದರಿಕೆ ಅಥವಾ ನಿರ್ಬಂಧ ಹೇರುವ ಮೂಲಕ ಪರಿಸ್ಥಿತಿ ಉದ್ವಿಗ್ನಗೊಂಡು ಮುಂದೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಮತ್ತು ಗೃಹ ಸಚಿವರೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಪೊಲೀಸ್ ಅಧಿಕಾರಿಯ ಹೇಳಿಕೆಯ ಕುರಿತು ಗೃಹ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಗಮನಹರಿಸಬೇಕು. ಕಾನೂನಿನ ಮಿತಿಯನ್ನು ಮೀರಿ ಬೆದರಿಕೆಯ ರೀತಿಯಲ್ಲಿ ಮಾತನಾಡಿರುವುದು ಸಾಬೀತಾದರೆ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ಮುಂದಿನ ಹೋರಾಟಗಳ ಬಗ್ಗೆ ಶೀಘ್ರದಲ್ಲೇ ನಿರ್ಧಾರ

‘ಬಳ್ಳಾರಿ ಚಲೋ’ ಪಾದಯಾತ್ರೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮುಂದಿನ ಹೋರಾಟಗಳು ಮತ್ತು ರಾಜ್ಯ ಪ್ರವಾಸದ ಕುರಿತು ಪಕ್ಷದ ಹಿರಿಯ ನಾಯಕರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ರೂಪುರೇಷೆ ಪ್ರಕಟಿಸಲಾಗುವುದು ಎಂದು ವಿಜಯೇಂದ್ರ ಹೇಳಿದರು.

ಸೆಪ್ಟೆಂಬರ್ 15ರಂದು ಪಕ್ಷದ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಸಾಧನೆಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ದೇಶಾದ್ಯಂತ ನಡೆಯುತ್ತಿರುವ ‘ಸೇವಾ ಸಂಕಲ್ಪ ಅಭಿಯಾನ’ದ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ರೈತರ ಸಂಕಷ್ಟದ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ

ರಾಜ್ಯದಲ್ಲಿ ಬರಗಾಲ ತೀವ್ರವಾಗಿದ್ದರೂ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಗಂಭೀರವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ರಾಜ್ಯದ ಹಲವು ಭಾಗಗಳಲ್ಲಿ ರೈತರಿಗೆ ಸಮರ್ಪಕವಾಗಿ ಮೂರು ಹಂತದ ವಿದ್ಯುತ್ ಪೂರೈಕೆ ಮಾಡಲು ಸರ್ಕಾರ ವಿಫಲವಾಗಿದೆ. ಆರು-ಏಳು ಗಂಟೆಗಳ ವಿದ್ಯುತ್ ಕೂಡ ಸಿಗದೆ ಬೋರ್‌ವೆಲ್ ಅವಲಂಬಿತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿಕಾರಿಪುರ ಸೇರಿದಂತೆ ರಾಜ್ಯದ ಅನೇಕ ತಾಲೂಕುಗಳಲ್ಲಿ ರೈತರು ವಿದ್ಯುತ್ ಸಮಸ್ಯೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೀಕರ ಬರಗಾಲ ಎದುರಾದಾಗಲೂ ರೈತರ ಹಿತದೃಷ್ಟಿಯಿಂದ ಹೊರರಾಜ್ಯಗಳಿಂದ ವಿದ್ಯುತ್ ಖರೀದಿಸಿ ಪೂರೈಕೆ ಮಾಡಲಾಗಿತ್ತು. ಆದರೆ ಈಗಿನ ಸರ್ಕಾರ ಮಾತ್ರ ನಿರ್ಧಾರ ಕೈಗೊಳ್ಳದೆ ಮೀನಾಮೇಷ ಎಣಿಸುತ್ತಿದೆ. ರೈತರ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಮತ್ತು ಸರ್ಕಾರಕ್ಕೆ ಕಾಳಜಿಯೇ ಇಲ್ಲ ಎಂದು ಅವರು ಟೀಕಿಸಿದರು.

ಮೋಡ ಬಿತ್ತನೆ ವಿಫಲ: 28 ಕೋಟಿ ಖರ್ಚಿನ ಲೆಕ್ಕ ನೀಡಲಿ

ರೈತರು ಬರಗಾಲದಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಮೋಡ ಬಿತ್ತನೆ ಯೋಜನೆಯೂ ನಿರೀಕ್ಷಿತ ಫಲ ನೀಡಿಲ್ಲ. ಯೋಜನೆ ವಿಫಲವಾಗಿದೆ ಎಂಬುದನ್ನು ಸರ್ಕಾರದ ಸಚಿವರೇ ಒಪ್ಪಿಕೊಂಡಿದ್ದಾರೆ. ಹಾಗಿದ್ದರೆ ಈ ಯೋಜನೆಗೆ ಖರ್ಚು ಮಾಡಿದ ಸುಮಾರು Rs. 28 ಕೋಟಿಯ ಹಣವನ್ನು ಯಾರಿಗೆ, ಯಾವ ಉದ್ದೇಶಕ್ಕೆ ನೀಡಲಾಗಿದೆ ಎಂಬ ಸಂಪೂರ್ಣ ಲೆಕ್ಕವನ್ನು ಸರ್ಕಾರ ವಿಧಾನಸಭೆಯಲ್ಲಿ ರಾಜ್ಯದ ಜನರ ಮುಂದೆ ಇಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಅಧಿವೇಶನದಲ್ಲಿ ರೈತರ ಪರ ಬಿಜೆಪಿ ಧ್ವನಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣದಂತಹ ವಿಚಾರಗಳಿಂದಾಗಿ ಇಡೀ ಅಧಿವೇಶನದ ಸಮಯ ವ್ಯರ್ಥವಾಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ಇಂದು ರಾಜ್ಯದ ರೈತರು ಎದುರಿಸುತ್ತಿರುವ ಬರ, ವಿದ್ಯುತ್ ಕೊರತೆ ಮತ್ತು ಬೆಳೆ ನಷ್ಟದಂತಹ ಗಂಭೀರ ಸಮಸ್ಯೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು.

ಬರಗಾಲ, ರೈತರ ವಿದ್ಯುತ್ ಸಮಸ್ಯೆ, ಮೋಡ ಬಿತ್ತನೆ ವೈಫಲ್ಯ ಸೇರಿದಂತೆ ಜನರ ಬದುಕಿಗೆ ನೇರವಾಗಿ ಸಂಬಂಧಿಸಿದ ಎಲ್ಲ ವಿಚಾರಗಳನ್ನು ವಿಧಾನಸಭೆಯಲ್ಲಿ ಬಿಜೆಪಿ ಬಲವಾಗಿ ಪ್ರಸ್ತಾಪಿಸಲಿದೆ. ರೈತರ ಹಿತಾಸಕ್ತಿಗೆ ವಿರುದ್ಧವಾಗಿ ಸರ್ಕಾರ ಯಾವುದೇ ನಿರ್ಲಕ್ಷ್ಯ ಮುಂದುವರಿಸಿದರೂ ಬಿಜೆಪಿ ಸುಮ್ಮನಿರುವುದಿಲ್ಲ ಎಂದು ಬಿ.ವೈ. ವಿಜಯೇಂದ್ರ ಎಚ್ಚರಿಸಿದರು.

ಸರ್ಕಾರದ ವಿರುದ್ಧ ಪ್ರತಿಭಟನಾ ಮೆರವಣಿಗೆ: ಗಣೇಶ ಚೌತಿ ಪೊಲೀಸರ ಹಬ್ಬವಾಗಬಾರದು: ಆರ್‌.ಅಶೋಕ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles