ಟಿಕೆಟ್ ರಹಿತ ಪ್ರಯಾಣಿಕರಿಂದ ರೂ.8.94 ಲಕ್ಷ ದಂಡ ವಸೂಲಿ

Bengaluru : ಮೇ 2026ರ ಒಂದೇ ತಿಂಗಳಿನಲ್ಲಿ ಟಿಕೆಟ್ ಪಡೆಯದೆ ಕೆಎಸ್‍ಆರ್‍ಟಿಸಿ (KSRTC) ಬಸ್‍ಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರ ತಪಾಸಣೆಯ ವೇಳೆ, ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಸಾವಿರಾರು ಪ್ರಯಾಣಿಕರಿಗೆ ದಂಡ ವಿಧಿಸಿದ್ದು, ನಿಯಮ ಉಲ್ಲಂಘಟಿಸಿದ ಪ್ರಯಾಣಿಕರಿಂದ ಒಟ್ಟು ರೂ. 8,94,109/- ರೂ.ಗಳನ್ನು ದಂಡದ ರೂಪ(Fine) ದಲ್ಲಿ ವಸೂಲಿ ಮಾಡಲಾಗಿದೆ.

ಕೆಎಸ್‍ಆರ್‍ಟಿಸಿಯ ತನಿಖಾ ತಂಡಗಳು ರಾಜ್ಯ ಹಾಗೂ ನೆರೆರಾಜ್ಯಗಳಲ್ಲಿ ಸಂಚರಿಸುವ ಒಟ್ಟು 42,518 ಬಸ್‍ಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿವೆ. ತಪಾಸಣೆ ವೇಳೆ ಒಟ್ಟು 4,353 ಆದಾಯ ಸೋರಿಕೆ ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ. ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 4,476 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ. ಸಂಸ್ಥೆಯ ಆದಾಯಕ್ಕೆ ನಷ್ಟ ಉಂಟುಮಾಡುತ್ತಿದ್ದ ರೂ. 1,52,843/- ರೂ.ಗಳ ಸೋರಿಕೆಯನ್ನು ತನಿಖಾಧಿಕಾರಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿದ್ದಾರೆ.

ಆದಾಯ ಸೋರಿಕೆಗೆ ಕಾರಣರಾದ ಹಾಗೂ ಕರ್ತವ್ಯ ಲೋಪ ಎಸಗಿದ ಸಂಸ್ಥೆಯ ತಪ್ಪಿತಸ್ಥ ಸಿಬ್ಬಂದಿಗಳ ವಿರುದ್ಧವೂ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮಗಳನ್ನು ಜರುಗಿಸಲಾಗಿದೆ ಎಂದು ನಿಗಮ ತಿಳಿಸಿದೆ.

ಕೆಎಸ್‍ಆರ್‍ಟಿಸಿ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಲ್ಲಿ ವಿಶೇಷ ಮನವಿ ಮಾಡಿದ್ದು, ಬಸ್ಸುಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಸರಿಯಾದ ಹಾಗೂ ಸಿಂಧುವಾದ ಟಿಕೆಟ್ ಅಥವಾ ಪಾಸ್‍ಗಳನ್ನು ಪಡೆದೇ ಪ್ರಯಾಣಿಸಬೇಕು. ಆ ಮೂಲಕ ಸಂಸ್ಥೆಯೊಂದಿಗೆ ಸಹಕರಿಸಬೇಕಾಗಿ ಕೋರಿದೆ. ಮುಂಬರುವ ದಿನಗಳಲ್ಲೂ ಈ ತಪಾಸಣಾ ಕಾರ್ಯ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾಚರಣೆ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles