ಟೇಕ್ವಾಂಡೋ Taekwondo ಕ್ರೀಡಾಕೂಟ; ಸಮಗ್ರ ಪ್ರಶಸ್ತಿ ಚಿತ್ರದುರ್ಗ, ದ್ವಿತೀಯ ಸ್ಥಾನ ತುಮಕೂರು

ಬೆಂಗಳೂರು, ಆ.11; ಕರ್ನಾಟಕ ರಾಜ್ಯ ಟೇಕ್ವಾಂಡೋ ಸಂಸ್ಥೆಯಿಂದ ಚಿತ್ರದುರ್ಗದಲ್ಲಿ ನಡೆದ ಮೂರು ದಿನಗಳ 41ನೇ ರಾಜ್ಯ ಮಟ್ಟದ ಸಬ್ ಜೂನಿಯರ್, ಜೂನಿಯರ್, ಸೀನಿಯರ್, 10ನೇ ಕೆಡೆಟ್ ಕ್ಯೋರುಗಿ,14ನೇ ಪುಂಸೆ, 3ನೇ ಪ್ಯಾರಾ ಟೇಕ್ವಾಂಡೋ, 4ನೇ ಎಕ್ಸ್‌ಪೋ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆ ಪ್ರಥಮ, ದ್ವಿತೀಯ ಸಮಗ್ರ ಪ್ರಶಸ್ತಿಗಳಿಗೆ ಭಾಜನವಾಗಿವೆ.
14 ಜಿಲ್ಲೆಗಳಿಂದ 450  ಕ್ಕೂ ಹೆಚ್ಚು ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಟೇಕ್ವಾಂಡೋ ಸಂಸ್ಥೆಯ ಅಧ್ಯಕ್ಷರಾದ ತಿರುಮಾಲ್.ಜೆ   ಮತ್ತು ಚಿತ್ರದುರ್ಗ ಟೇಕ್ವಾಂಡೋ ಸಂಸ್ಥೆಯ ತರಬೇತದಾರರು, ರಾಜ್ಯಮಟ್ಟದ ಪಂದ್ಯಾವಳಿಯ ಆಯೋಜಕರಾದ ಎಂ.ಸುನೀತಾ ಪ್ರವೀಣ್ ಕುಮಾರ್ ಮತ್ತು  ಎಂ. ಅನಿತಾ ಮಾಂತೇಶ್ ನೇತೃತ್ವದಲ್ಲಿ ಪಂದ್ಯಾವಳಿ ಜರುಗಿತು.
ಈ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ತುಮಕೂರು ಜಿಲ್ಲೆ, ದ್ವಿತೀಯ ಸ್ಥಾನ ಚಿತ್ರದುರ್ಗ ಜಿಲ್ಲೆ, ಸಬ್ ಜೂನಿಯರ್ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಬೆಂಗಳೂರು, ದ್ವಿತೀಯ ಸ್ಥಾನ ತುಮಕೂರು, ಕೆಡೆಟ್ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಬೆಂಗಳೂರು, ದ್ವಿತೀಯ ಸ್ಥಾನ ತುಮಕೂರು, ಕೆಡೆಟ್ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಚಿತ್ರದುರ್ಗ, ದ್ವಿತೀಯ ಸ್ಥಾನ ಬೆಂಗಳೂರು, ಜೂನಿಯರ್ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಚಿತ್ರದುರ್ಗ, ದ್ವಿತೀಯ ಸ್ಥಾನ ಬೆಂಗಳೂರು,
ಜೂನಿಯರ್ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಬೆಂಗಳೂರು, ದ್ವಿತೀಯ ಸ್ಥಾನ ತುಮಕೂರು. ಸೀನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ತುಮಕೂರು ದ್ವಿತೀಯ ಸ್ಥಾನ ಬೆಂಗಳೂರು ಪಡೆದುಕೊಂಡಿತು.
ಸಮಗ್ರ ಪ್ರಶಸ್ತಿಯನ್ನು ಪ್ರಥಮ ಸ್ಥಾನ ಚಿತ್ರದುರ್ಗ ಪಡೆದರೆ, ದ್ವಿತೀಯ ಸ್ಥಾನ  ತುಮಕೂರು ಜಿಲ್ಲೆಯ ಪಾಲಾಯಿತು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles