ದೇಶದಲ್ಲಿ  5.2 ಕೋಟಿ ಪ್ರಕರಣಗಳು ಬಾಕಿ ಇದ್ದು, ತ್ವರಿತ ನ್ಯಾಯದಾನ ವಕೀಲರ ಮೂಲಭೂತ ಕರ್ತವ್ಯವಾಗಬೇಕು

BENGALURU : ಜೀವನದ ಎಲ್ಲಾ ಹಂತಗಳಲ್ಲೂ ನೈತಿಕತೆಯನ್ನು ಅಳವಡಿಸಿಕೊಂಡಲ್ಲಿ ಬದುಕು, ವೃತ್ತಿಯಲ್ಲಿ ಯಶಸ್ವಿಯಾಗಬಹುದು ಎಂದು ನಿವೃತ್ತ ಮುಖ್ಯನ್ಯಾಯಮೂರ್ತಿ (Retd. Chief Justice) ಪಿ.ಎಸ್. ದಿನೇಶ್ ಕುಮಾರ್ (P.S.Dineshkumar) ಹೇಳಿದ್ದಾರೆ.
ದೇವಾಂಗ ಸಂಘ ಕಾಲೇಜ್ ಆಫ್ ಲಾ ಹಾಗೂ ಯುವ ವಕೀಲರ ಸ್ನೇಹ ಬಳಗದಿಂದ ದೇವಾಂಗ ಸಂಘದ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ “ಫೋಕ್ಸ್ ಕಾಯ್ದೆ” ಕುರಿತು ಶ್ರೀಪತಿಯಪ್ಪ ಸ್ಮರಣಾರ್ಥ ಅಖಿಲ ಕರ್ನಾಟಕ ಪ್ರಥಮ ಕನ್ನಡ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ನೈತಿಕತೆ ಎಂದರೆ ಉತ್ತಮ ಗುಣಮಟ್ಟದ ನೈತಿಕತೆಯನ್ನು ಅಳವಡಿಸಿಕೊಳ್ಳಬೇಕು. ಉತ್ತಮ ಅಭ್ಯಾಸಗಳಿಂದ ನ್ಯಾಯಾಂಗ ವ್ಯವಸ್ಥೆ ಉತ್ತಮಗೊಳ್ಳಲಿದೆ. ದೇಶದಲ್ಲಿ 5.2 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ. ತ್ವರಿತ ನ್ಯಾಯದಾನ ವಕೀಲರ ಮೂಲಭೂತ ಕರ್ತವ್ಯವಾಗಬೇಕು. ಆಸ್ತಿ ವಿಭಾಗ ಕುರಿತ ವ್ಯಾಜ್ಯ 60 ವರ್ಷಗಳಿಂದ ಇತ್ಯರ್ಥವಾಗಿಲ್ಲ ಎಂದರೆ ನ್ಯಾಯದಾನ ವ್ಯವಸ್ಥೆ ಹೇಗಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಿ ಎಂದರು.
ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಂ.ಜಿ. ಉಮಾ ಮಾತನಾಡಿ, ನ್ಯಾಯಾಲಯದಲ್ಲಿನ ವಾದ, ಪ್ರತಿವಾದ ಮಾತೃಭಾಷೆಯಲ್ಲಿದ್ದರೆ ಕಕ್ಷಿದಾರನಿಗೆ ಅರ್ಥವಾಗುತ್ತದೆ. ಜಿಲ್ಲಾ ನ್ಯಾಯಾಲಯಗಳಲ್ಲಿ ಮಾತೃಭಾಷೆಯಲ್ಲಿ ತೀರ್ಪು ನೀಡುತ್ತಿರುವುದು ಉತ್ತಮ ಬೆಳವಣಿಗೆ. ವಕೀಲರು ಉನ್ನತ ನ್ಯಾಯಾಲಯಗಳಲ್ಲಿ ಇಂಗ್ಲಿಷ್ ನಲ್ಲಿ ವ್ಯವಹರಿಸಬೇಕು. ಆದ್ದರಿಂದ ಇಂಗ್ಲಿಷ್ ಭಾಷಾ ಪ್ರೌಢಿಮೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆಯ ನಿರ್ದೇಶಕರಾದ ಪ್ರೊ.ಸಿ.ಎಸ್. ಪಾಟೀಲ್, ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಸಿ.ಕೆ. ವಿರೇಶ್ ಕುಮಾರ್. ಹುಬ್ಬಳ್ಳಿಯ ಕೆ.ಎಸ್.ಎಲ್.ಯು ವಿದ್ಯಾವಿಷಯಕ ಪರಿಷತ್ ಸದಸ್ಯ ಡಾ. ಶಾರದಾ ನಿರ್ವಾಣಿ, ದೇವಾಂಗ ಸಂಘದ ಅಧ್ಯಕ್ಷ ಡಾ. ಜಿ. ರಮೇಶ್,  ದೇವಾಂಗ ಸಂಘದ ಉಪಾಧ್ಯಕ್ಷರಾದ ಎ.ವಿಜಯ್ ಕುಮಾರ್, ಪಾರ್ವತಿ, ದೇವಾಂಗ ಸಂಘ ಕಾಲೇಜ್ ಆಫ್ ಲಾ ಹಾಗೂ ಯುವ ವಕೀಲರ ಸ್ನೇಹ ಬಳಗದ ಅಧ್ಯಕ್ಷ ಅನಿಲ್ ರೆಡ್ಡಿ, ಮತ್ತು ಪ್ರಾಂಶುಪಾಲರಾದ ಡಾ. ಶಿಲ್ಪ ಬಿ .ಪಿ ., ಸಂಘದ ಕಾರ್ಯದರ್ಶಿ ಆರ್. ಭಾಸ್ಕರ್, ಖಜಾಂಚಿ ಎಂ. ಲಕ್ಷ್ಮೀ ನಾರಾಯಣ, ಜಂಟಿ ಕಾರ್ಯದರ್ಶಿ ಊರುಕರೆ ಜಿ. ದಯಾನಂದ್ ಮತ್ತಿತರರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles