ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

 

ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ (Sri Manjunatheshwara Swamy)ಸನ್ನಿಧಿಯಲ್ಲಿ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ ನಡೆದಿತ್ತು. ಹಿಂದೂಗಳ ಧಾರ್ಮಿಕ ಶ್ರದ್ಧೆಗೆ ಕೊಡಲಿ ಪೆಟ್ಟು ಕೊಡುವ ಷಡ್ಯಂತ್ರ ನಡೆದಿತ್ತು ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಹೇಳಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ (Jagannatha Bhavana) ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಯಾವುದನ್ನೂ ಪರಾಮರ್ಶೆ ಮಾಡದೇ ಯಾರೋ ಬೀದಿಯಲ್ಲಿ ಹೋಗುವವರು ಹೇಳಿದರೆಂದು ಎಸ್‍ಐಟಿ ತನಿಖೆಗೆ ಆದೇಶಿಸಿದ್ದು ಸಮರ್ಪಕ ನಿರ್ಧಾರ ಆಗಿರಲಿಲ್ಲ ಎಂದು ಆಕ್ಷೇಪಿಸಿದರು. ಧರ್ಮಸ್ಥಳದ ಪ್ರಕರಣದಲ್ಲಿ ಸಾಕಷ್ಟು ವಿಷಯಗಳು ಈಗ ಬೆಳಕಿಗೆ ಬಂದಿವೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಏಕಾಏಕಿ ಎಸ್‍ಐಟಿ ತನಿಖೆಗೆ ಆದೇಶಿಸಿದಾಗ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು ಎಂದು ನುಡಿದರು.
ಅಂದಿನ ಮುಖ್ಯಮಂತ್ರಿಗಳು ಒಂದು ದಿನ ಮುಂಚಿತವಾಗಿ ಯಾವುದೇ ತನಿಖೆಯ ಅವಶ್ಯಕತೆ ಇಲ್ಲ ಎಂದಿದ್ದರು. ಪಟ್ಟಭದ್ರ ಹಿತಾಸಕ್ತಿಗಳು ಅವರನ್ನು ಸ್ವಗೃಹದಲ್ಲಿ ಭೇಟಿ ಮಾಡಿದ ನಂತರ ಮುಖ್ಯಮಂತ್ರಿಗಳೇ ಎಸ್‍ಐಟಿ ತನಿಖೆಗೆ ಆದೇಶಿಸಿದ್ದರು ಎಂದು ಗಮನ ಸೆಳೆದರು. ಬಿಜೆಪಿ ಹಿಂದೆ ಧರ್ಮಸ್ಥಳ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು ಎಂದು ವಿವರಿಸಿದರು.
ಇದರಲ್ಲಿ ನೂರಾರು ಕೋಟಿ ಒಳಗೊಂಡದ್ದು ಈಗ ಗೊತ್ತಾಗುತ್ತಿದೆ. ನೂರಾರು ಕೋಟಿ ತೊಡಗಿಸಿಕೊಂಡ ಕಾರಣ ವಿದೇಶಿ ಶಕ್ತಿಗಳ ಕೈವಾಡದ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರವು ಇಂಥ ಷಡ್ಯಂತ್ರಗಳಿಗೆ ಶಕ್ತಿ ತುಂಬುವ ಕೆಲಸ ಮಾಡಿರುವುದು ನಮಗೆ ನೋವು ತಂದಿದೆ ಎಂದು ತಿಳಿಸಿದರು. ಯಾರ್ಯಾರು ಇದರ ಹಿಂದಿದ್ದರು? ಯಾರ್ಯಾರು ಬಂಡವಾಳ ಹಾಕಿದ್ದರು? ಅಂದಿನ ಸಿಎಂ ಯಾಕೆ ಕಣ್ಮುಚ್ಚಿ ಎಸ್‍ಐಟಿಗೆ ಕೊಟ್ಟರು- ಇವೆಲ್ಲವೂ ಸತ್ಯಾಸತ್ಯತೆ ಹೊರಕ್ಕೆ ಬರಬೇಕು ಎಂಬುದು ನಾಡಿನ ಜನರ ಮತ್ತು ಹಿಂದೂಗಳ ಅಪೇಕ್ಷೆ ಎಂದು ತಿಳಿಸಿದರು.
ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್‍ಐಆರ್ ಬಗ್ಗೆ ಚರ್ಚೆಗಳಾಗಿವೆ. ಕೇಂದ್ರ ಚುನಾವಣಾ ಆಯೋಗ ತೀರ್ಮಾನಿಸಿದ ಬಳಿಕ ಎಸ್‍ಐಆರ್ ನಡೆಯುತ್ತಿದ್ದು, ರಾಜ್ಯ ಸರಕಾರ ಇದಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದೆ ಎಂಬ ಅಭಿಪ್ರಾಯ ಎಲ್ಲ ಮುಖಂಡರಿಂದ ವ್ಯಕ್ತವಾಗಿದೆ ಎಂದು ಪ್ರಶ್ನೆಗೆ ಉತ್ತರಿಸಿದರು. ರಾಜ್ಯ ಸರಕಾರವು ಬಿಎಲ್‍ಒಗಳಿಗೆ ಸಮರ್ಪಕ ಆದೇಶ, ಮಾರ್ಗದರ್ಶನ ಮಾಡುತ್ತಿಲ್ಲ. ಡೂಪ್ಲಿಕೇಟ್ ಹೆಸರು, ಸತ್ತವರ ಹೆಸರು ಕೈಬಿಡುವ ಕೆಲಸ ನಡೆಯಬೇಕಿದೆ. ಬಿಎಲ್‍ಒಗಳನ್ನು ದುರುಪಯೋಗ ಪಡಿಸಿಕೊಂಡು, ಸ್ವಚ್ಛಗೊಳಿಸುವ ಕಾರ್ಯ ಕರ್ನಾಟಕದಲ್ಲಿ ಸಮರ್ಪಕವಾಗಿ ಆಗುತ್ತಿಲ್ಲ ಎಂಬ ಆಕ್ಷೇಪ ಇದೆ ಎಂದರು. ಮುಂದಿನ ದಿನಗಳಲ್ಲಿ ನಮ್ಮ ನಡೆ ಯಾವ ರೀತಿ ಇರಬೇಕೆಂಬ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ವಿವರ ನೀಡಿದರು.

Hot this week

ಗೋಸೇವೆಗಾಗಿ ಮಹೇಂದ್ರ ಮುಣೋತ್‌ ಕುಟುಂಬ 56 ಲಕ್ಷ ರೂ. ದೇಣಿಗೆ

ತಮ್ಮ ತಂದೆ ಮೋತಿಲಾಲ್ ಮುಣೋತ್ (Motilal Munnoth) ಅವರ ಸ್ಮರಣಾರ್ಥ ಅವರ...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗೌಶುಭಮ್ ಸಹಯೋಗ

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಾವಿದರಿಗೆ ಕರ್ನಾಟಕ ಕಲಾ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ(Hoovina Hadagali) ರಾಜ್ಯಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ...

ದೆಹಲಿಯ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಚೇರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ದೆಹಲಿಯಲ್ಲಿನ ರಾಷ್ಟ್ರೀಯ ಮಹಿಳಾ...

Topics

ಗೋಸೇವೆಗಾಗಿ ಮಹೇಂದ್ರ ಮುಣೋತ್‌ ಕುಟುಂಬ 56 ಲಕ್ಷ ರೂ. ದೇಣಿಗೆ

ತಮ್ಮ ತಂದೆ ಮೋತಿಲಾಲ್ ಮುಣೋತ್ (Motilal Munnoth) ಅವರ ಸ್ಮರಣಾರ್ಥ ಅವರ...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗೌಶುಭಮ್ ಸಹಯೋಗ

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಾವಿದರಿಗೆ ಕರ್ನಾಟಕ ಕಲಾ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ(Hoovina Hadagali) ರಾಜ್ಯಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ...

ದೆಹಲಿಯ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಚೇರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ದೆಹಲಿಯಲ್ಲಿನ ರಾಷ್ಟ್ರೀಯ ಮಹಿಳಾ...

ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ಕುರಿತು ಒಂದು ದಿನದ ಅಂತಾರಾಷ್ಟ್ರೀಯ ಕಾರ್ಯಗಾರ

ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ನಿರ್ವಹಣಾ...

ನಿತ್ಯ ಪಂಚಾಂಗ 13.06.2026 ಶನಿವಾರ SATURDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 13.06.2026 ಶನಿವಾರ SATURDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಂಗೀತ ಸೇವೆ

ಬೆಂಗಳೂರು ; ಶ್ರೀ ರಾಘವೇಂದ್ರ ಸ್ವಾಮಿಗಳ( Sri Raghavendra Swamy Mutt)...

Related Articles