ನಾಡಪ್ರಭು ಕೆಂಪೇಗೌಡ ಜಯಂತಿ, ಶೋಭಯಾತ್ರೆ-ಗೋವಿಂದರಾಜನಗರ ಮಂಡಲ ಬಿಜೆಪಿ

ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮಂಡಲ ಬಿಜೆಪಿ ಕಛೇರಿಯಲ್ಲಿ ಅದ್ದೂರಿ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮ. ಪರಮಪೂಜ್ಯ ಬಿಜಿಎಸ್ ಆಟದ ಮೈದಾನದಿಂದ ನಾಗರಬಾವಿ ವೃತ್ತದವರೆಗೆ ಬೃಹತ್ ಶೋಭಾ ಯಾತ್ರೆ.

ದಕ್ಷಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು, ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಕೆ.ಉಮೇಶ್ ಶೆಟ್ಟಿರವರು ನಾಡಪ್ರಭು ಕೆಂಪೇಗೌಡರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ವೀರಗಾಸೆ, ಕಂಸಾಳೆ, ತಮಟೆವಾದ್ಯ ವಿವಿಧ ಸಾಂಸ್ಕೃತಿಕ ಕಲಾತಂಡಗಳ ಜೊತೆಯಲ್ಲಿ ಸಾವಿರಾರು ಜನರು ಶೋಭಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಕೆ.ಉಮೇಶ್ ಶೆಟ್ಟಿರವರು ಮಾತನಾಡಿ ನಾಡಪ್ರಭು ಕೆಂಪೇಗೌಡರು ಚಿಂತಕ, ಜಾತ್ಯತೀತ ನಾಯಕ , ಪರಿಸರ ವಾದಿ ಮತ್ತು ಜನಪರ ಆಡಳಿತ ನೀಡಿದ ಮಹಾನ್ ನಾಯಕ.

ಬೆಂಗಳೂರುನಗರದಲ್ಲಿ ನಾಲ್ಕು ದಿಕ್ಕುಗಳಲ್ಲಿ ಗಡಿಗೋಪುರ ನಿರ್ಮಾಣ ಮಾಡಿದರು. ಬೆಂಗಳೂರುನಗರದಲ್ಲಿ ನೂರಾರು ಕೆರೆ ಕಟ್ಟೆಗಳನ್ನು ನಿರ್ಮಿಸಿದರು. ಪರಿಸರ ಉಳಿಸಲು ಸಸಿಗಳನ್ನು ನೆಟ್ಟು ಹಸಿರುಮಯ ನಗರ ಮಾಡಿದರು. ಹಲವಾರು ದೇವಾಲಯಗಳನ್ನು ಕಟ್ಟಿಸಿದರು

ಗಾಣಿಗರ ಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ಮಾಮೂಲ್ ಪೇಟೆ ಅಕ್ಕಪೇಟೆ ಉದ್ಯೋಗ ತಕ್ಕಂತೆ, ಸಮುದಾಯಗಳಿಗೆ ಪೇಟೆಗಳನ್ನು ನಿರ್ಮಿಸಿದರು. ಇಂದು ವಿಶ್ವಖ್ಯಾತಿ ನಗರವಾಗಿದೆ ಬೆಂಗಳೂರು. ಐ.ಟಿ. ಮತ್ತು ಬಿ.ಟಿ. ವಿಜ್ಞಾನ, ತಂತ್ರಜ್ಞಾನ, ಕೈಗಾರಿಕೆ, ಹೋಟೆಲ್ ಉದ್ಯಮ ಎಲ್ಲವು ಯಶಸ್ಸಿಯಾಗಿ ನಡೆಯುತ್ತಿದೆ. ಬೆಂಗಳೂರುನಗರದ ನಿವಾಸಿ ಎಂದರೆ ಹೆಮ್ಮೆಪಡುವ ಸಂಗತಿಯಾಗಿದೆ. ಬೆಂಗಳೂರುನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜೀವನ ಆದರ್ಶ ಅವರ ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲರು ಸಾಗೋಣ ಎಂದು ಹೇಳಿದರು.

ಮಂಡಲ ಅಧ್ಯಕ್ಷರಾದ ಎನ್.ಬಿ.ಮಂಜುನಾಥ್ ರವರು,ರಾಮಪ್ಪ, ಕ್ರಾಂತಿರಾಜು ಎಸ್.ರಾಜು, ದೊಡ್ಡವೀರಯ್ಯ, ಮಾಜಿ ಪಾಲಿಕೆ ಸದಸ್ಯರುಗಳು, ಬಿಜೆಪಿ ಪಕ್ಷದ ಪ್ರಮುಖರು ಶೋಭಯಾತ್ರೆಯಲ್ಲಿ ಭಾಗವಹಿಸಿದ್ದರು.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles