ನಿವೃತ್ತ ಸಂಸ್ಕೃತ ಶಿಕ್ಷಕ ಎಸ್. ಶ್ರೀನಿವಾಸ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಬೆಂಗಳೂರು: ಶಿಕ್ಷಣ, ಸಂಸ್ಕೃತ, (Sanskrit) ವೇದಾಂತ ಹಾಗೂ ಆಗಮಶಾಸ್ತ್ರ ಕ್ಷೇತ್ರಗಳಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ ಬೆಂಗಳೂರಿನ ನಿವೃತ್ತ ಸಂಸ್ಕೃತ ಶಿಕ್ಷಕರಾದ ಎಸ್. ಶ್ರೀನಿವಾಸ (S. Srinivas) ಅವರಿಗೆ ತಮಿಳುನಾಡಿನ (Hosur) ಹೊಸೂರಿನ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ವಿಶ್ವವಿದ್ಯಾಲಯ (Asia International Culture Research University) ಗೌರವ ಡಾಕ್ಟರೇಟ್ (Doctorate) ಪದವಿ ಪ್ರದಾನ ಮಾಡಿದೆ.

ಹೊಸೂರಿನಲ್ಲಿ ನಡೆದ ಸಮಾರಂಭದಲ್ಲಿ ಡಾ. ಕೃಷ್ಣಮೂರ್ತಿ ಸ್ವಾಮೀಜಿ, ಪದ್ಮಶ್ರೀ ಡಾ. ಎಸ್. ಜಿ. ಸುಶೀಲಮ್ಮ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸುಮಾರು 37 ವರ್ಷಗಳ ಶೈಕ್ಷಣಿಕ ಸೇವೆ ಸಲ್ಲಿಸಿರುವ ಶ್ರೀನಿವಾಸ ಅವರು ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ೩೬ ವರ್ಷ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸುಮಾರು 5 ಕೋಟಿ ಮೌಲ್ಯದ ಕೊಡುಗೆ ನೀಡಿರುವ ಅವರು, ನಿವೃತ್ತಿಯ ಬಳಿಕವೂ ಸಂಸ್ಕೃತ, ವೇದಾಂತ, ಆಗಮಶಾಸ್ತ್ರ ಹಾಗೂ ಭಾರತೀಯ ಶಾಸ್ತ್ರಗಳ ಉಚಿತ ಬೋಧನೆಯ ಮೂಲಕ ಜ್ಞಾನಸೇವೆಯನ್ನು ಮುಂದುವರಿಸಿದ್ದಾರೆ.

ಅವರ ಸೇವೆಯನ್ನು ಗುರುತಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ (ಮೂರು ಬಾರಿ), ಡಿಎಸ್‌ಇಆರ್‌ಟಿ ವಿಜ್ಞಾನಗೋಷ್ಠಿ ಪ್ರಶಸ್ತಿ (ಮೂರು ಬಾರಿ), ಆಗಮ ಮಂಗಳಶಾಸನ ಸನ್ಮಾನ ಸೇರಿದಂತೆ ಹಲವು ಗೌರವಗಳು ಲಭಿಸಿವೆ. ಈಗ ಲಭಿಸಿರುವ ಗೌರವ ಡಾಕ್ಟರೇಟ್ ಅವರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸೇವೆಗೆ ಸಂದ ಮತ್ತೊಂದು ಮಹತ್ವದ ಗೌರವವಾಗಿದೆ.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles