ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ತೇಜಸ್ವಿ ಸೂರ್ಯ

ಬೆಂಗಳೂರು: ದೇಶದಲ್ಲೇ ಉತ್ತಮ ಹವಾಮಾನ ಹೊಂದಿರುವ ಉದ್ಯಾನ ನಗರಿ ಬೆಂಗಳೂರನ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ (Tejasvi Surya)ಕರೆ ನೀಡಿದ್ದಾರೆ.
ಬಿಎನ್ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (B.M.S.Institute of Technology and Management)ಮತ್ತು ವಿಕಸನ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೆಂಗಳೂರು ಹೆರಿಟೇಜ್ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದರು.
ಗಾಳಿ, ಮಳೆ, ಬಿಸಿಲು ಸೇರಿದಂತೆ ಎಲ್ಲಾ ರೀತಿಯ ಹವಾಮಾನ ಸಮತೋಲನವಿರುವ ಬೆಂಗಳೂರು ನಗರ ನಮ್ಮ ಹೆಮ್ಮೆಯ ಊರು. ಮುಂದಿನ ಪೀಳಿಗೆಗೆ ಶುದ್ಧ ಪರಿಸರ ಉಳಿಸಿ ಹೋಗುವುದು ನಮ್ಮ ಜವಾಬ್ದಾರಿ ಎಂದು ಅಭಿಪ್ರಾಯಪಟ್ಟರು.
ಪರಿಸರ ಮತ್ತು ಆರೋಗ್ಯ ಜಾಗೃತಿ ವಿಷಯದಲ್ಲಿ ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಕಾಳಜಿಗೆ ತೇಜಸ್ವಿ ಸೂರ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಸಕರಾದ ಉದಯ ಗರುಡಾಚಾರ, ಟಿ ಎ ಶರವಣ, ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ಕ್ಯಾನ್ಸರ್ ಸೊಸೈಟಿ ಅಧ್ಯಕ್ಷ ಡಾ. ಸಿ ಎ ಕಿಶೋರ್, ಗರುಡ ಪ್ರತಿಷ್ಠಾನದ ಅಧ್ಯಕ್ಷೆ ಮೇದಿನಿ ಗರುಡಾಚಾರ, ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ಅಧ್ಯಕ್ಷ ನಾರಾಯಣ ರಾವ್ ಮಾನೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮ್ಯಾರಥಾನ್ ಓಟ, ಯೋಗ ಪ್ರದರ್ಶನ, ಮಲ್ಲಕಂಬ, ಸೈಕ್ಲಿಂಗ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಬಿ ಎನ್ ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳ ಸಾವಿರಾರು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles