ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಚಾಲನೆ, ಸಿಎಂ ಡಿ.ಕೆ. ಶಿ. ಜೊತೆ ಮೆಟ್ರೋ ಪ್ರಯಾಣ

ಬೆಂಗಳೂರು: ಸಿಲಿಕಾನ್ ಸಿಟಿ (Silicon City Benglauru)_ ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಮತ್ತೊಂದು ಮಹತ್ವದ ಸೇರ್ಪಡೆಯಾಗಿದೆ. ಬಹುನಿರೀಕ್ಷಿತ ನಮ್ಮ ಮೆಟ್ರೋದ (Metro Pink Line) ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modiji) ಅವರು ಶುಕ್ರವಾರ (ನವೆಂಬರ್ 13) ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪ್ರಧಾನಿ ಮೋದಿ ಮೆಟ್ರೋದಲ್ಲಿ ಪ್ರಯಾಣಿಸಿ, ಹೊಸ ಮಾರ್ಗದ ಸೌಲಭ್ಯಗಳನ್ನು ವೀಕ್ಷಿಸಿದರು.

₹3,470 ಕೋಟಿ ವೆಚ್ಚದ ಯೋಜನೆ

ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಿಸಲಾಗಿರುವ ಪಿಂಕ್ ಲೈನ್ ಮೆಟ್ರೋ ಯೋಜನೆಗೆ ಸುಮಾರು ₹3,470 ಕೋಟಿ ವೆಚ್ಚ ಮಾಡಲಾಗಿದೆ. ಒಟ್ಟು 21.25 ಕಿಲೋಮೀಟರ್ ಉದ್ದದ ಈ ಮಾರ್ಗದಲ್ಲಿ 18 ನಿಲ್ದಾಣಗಳಿವೆ. ಇದರಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ಮಾರ್ಗ ಹಾಗೂ 13.75 ಕಿಲೋಮೀಟರ್ ಭೂಗತ ಮಾರ್ಗ ಸೇರಿವೆ.

ಪ್ರಧಾನಿ ಮೋದಿ ಅವರು ಶುಕ್ರವಾರ ಉದ್ಘಾಟಿಸಿರುವುದು ಎಲಿವೇಟೆಡ್ ಮಾರ್ಗದ ಮೊದಲ ಹಂತವಾಗಿದೆ. ಉಳಿದ ಭೂಗತ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದೆ.

ಮೆಟ್ರೋ ಟಿಕೆಟ್ ಖರೀದಿಸಿದ ಪ್ರಧಾನಿ ಮೋದಿ

ಪಿಂಕ್ ಲೈನ್ ಉದ್ಘಾಟನಾ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೆಟ್ರೋ ನಿಲ್ದಾಣದ ಕೌಂಟರ್‌ನಲ್ಲಿ ಟಿಕೆಟ್ ಖರೀದಿಸಿದರು. ಬಳಿಕ ಇಬ್ಬರೂ ನಾಯಕರು ಒಟ್ಟಿಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು.

ಪ್ರಯಾಣದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಡಬಲ್ ಡೆಕ್ಕರ್ ಮೇಲ್ಸೇತುವೆ ಯೋಜನೆಯ ವಿಶೇಷತೆಗಳು ಹಾಗೂ ಮೆಟ್ರೋ ಸಂಪರ್ಕದಿಂದ ನಗರದ ಸಂಚಾರ ವ್ಯವಸ್ಥೆಗೆ ಆಗುವ ಅನುಕೂಲಗಳ ಬಗ್ಗೆ ಪ್ರಧಾನಿಗೆ ವಿವರಿಸಿದರು.

ರಾಜ್ಯಪಾಲರಾದ ಸುಧಾ ಯಾದವ್, ಸಂಸದ ತೇಜಸ್ವಿ ಸೂರ್ಯ ಹಾಗೂ ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಯಾವೆಲ್ಲಾ ಮೆಟ್ರೋ ನಿಲ್ದಾಣಗಳಿಗೆ ಸಂಪರ್ಕ?

ಹೊಸದಾಗಿ ಉದ್ಘಾಟನೆಯಾಗಿರುವ 7.5 ಕಿಲೋಮೀಟರ್ ಎಲಿವೇಟೆಡ್ ಮಾರ್ಗದಲ್ಲಿ ಒಟ್ಟು ಆರು ನಿಲ್ದಾಣಗಳಿವೆ.

  1. ಕಾಳೇನ ಅಗ್ರಹಾರ

  2. ಹುಳಿಮಾವು

  3. ಐಐಎಂಬಿ (IIMB)

  4. ಜೆ.ಪಿ. ನಗರ 4ನೇ ಹಂತ

  5. ಜಯದೇವ ಆಸ್ಪತ್ರೆ

  6. ತಾವರೆಕೆರೆ

ಈ ಮಾರ್ಗವು ಬನ್ನೇರುಘಟ್ಟ ರಸ್ತೆ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ವಿಶೇಷವಾಗಿ ಜಯದೇವ ಆಸ್ಪತ್ರೆ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗದೊಂದಿಗೆ ಸಂಪರ್ಕ ಕಲ್ಪಿಸುವುದರಿಂದ ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಪ್ರದೇಶಗಳಿಗೆ ಪ್ರಯಾಣ ಸುಲಭವಾಗಲಿದೆ.

ನವೆಂಬರ್ 14ರಿಂದ ಸಾರ್ವಜನಿಕರಿಗೆ ಮೆಟ್ರೋ ಸೇವೆ

ಪ್ರಧಾನಿ ಮೋದಿ ಅವರು ಉದ್ಘಾಟಿಸಿರುವ ಪಿಂಕ್ ಲೈನ್‌ನ ಎಲಿವೇಟೆಡ್ ಮಾರ್ಗದಲ್ಲಿ ಸಾರ್ವಜನಿಕರಿಗಾಗಿ ಮೆಟ್ರೋ ಸಂಚಾರ ನವೆಂಬರ್ 14ರ ಶನಿವಾರ ಬೆಳಗ್ಗೆ 6 ಗಂಟೆಯಿಂದ ಆರಂಭವಾಗಲಿದೆ. ಆರಂಭಿಕ ಹಂತದಲ್ಲಿ ಪ್ರತಿ ಎಂಟು ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುವ ನಿರೀಕ್ಷೆಯಿದೆ.

ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಸಿಗುತ್ತಾ?

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬನ್ನೇರುಘಟ್ಟ ರಸ್ತೆ, ಜಯದೇವ ಆಸ್ಪತ್ರೆ, ಜೆ.ಪಿ. ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಹನ ದಟ್ಟಣೆ ದೊಡ್ಡ ಸಮಸ್ಯೆಯಾಗಿದೆ.

ಈ ಹಿನ್ನೆಲೆಯಲ್ಲಿ ಪಿಂಕ್ ಲೈನ್ ಮೆಟ್ರೋ ಆರಂಭವಾಗುತ್ತಿರುವುದು ಸಾವಿರಾರು ಉದ್ಯೋಗಿಗಳು, ವಿದ್ಯಾರ್ಥಿಗಳು ಹಾಗೂ ನಿತ್ಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಖಾಸಗಿ ವಾಹನಗಳ ಬಳಕೆ ಕಡಿಮೆಯಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಬಳಕೆ ಹೆಚ್ಚಾಗುವ ನಿರೀಕ್ಷೆಯಿದೆ.

ಒಟ್ಟಿನಲ್ಲಿ, ಪಿಂಕ್ ಲೈನ್ ಮೆಟ್ರೋ ಕಾರ್ಯಾರಂಭವು ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿದ್ದು, ಉಳಿದ ಭೂಗತ ಮಾರ್ಗವೂ ಪೂರ್ಣಗೊಂಡರೆ ನಗರದ ಹಲವು ಪ್ರಮುಖ ಪ್ರದೇಶಗಳ ನಡುವಿನ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ.

 

Hot this week

ಕಂಟೋನ್ಮೆಂಟ್ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವರಾದ ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ

ಬೆಂಗಳೂರು: ಬೆಂಗಳೂರಿನ(Bangalore) ಕಂಟೋನ್ಮೆಂಟ್‌ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ಪಶುಸಂಗೋಪನೆ...

ಬೆಂಗಳೂರು: ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು(Finance Department, Government of Karnataka)...

ಮೆಟ್ರೋ ಯೋಜನೆಗಳ ವೆಚ್ಚದಲ್ಲಿ ಕೇಂದ್ರ-ರಾಜ್ಯಗಳ ನಡುವೆ ಸಮಾನ ಹೊಣೆಗಾರಿಕೆ ಅಗತ್ಯ: ಪ್ರಧಾನಿ ಮೋದಿಗೆ ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಮೆಟ್ರೋ ರೈಲು ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ...

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

ಬೆಂಗಳೂರು: ಬೆಂಗಳೂರು(Bangalore) ಮತ್ತು ಮೈಸೂರಿನ(Mysore) ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಗಿ ಭಾರತದ ಗೌರವಾನ್ವಿತ...

Topics

ಕಂಟೋನ್ಮೆಂಟ್ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವರಾದ ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ

ಬೆಂಗಳೂರು: ಬೆಂಗಳೂರಿನ(Bangalore) ಕಂಟೋನ್ಮೆಂಟ್‌ನಲ್ಲಿರುವ ಪಶು ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ  ಪಶುಸಂಗೋಪನೆ...

ಬೆಂಗಳೂರು: ಕರ್ನಾಟಕ ಸರ್ಕಾರದ ಆರ್ಥಿಕ ಇಲಾಖೆಯು(Finance Department, Government of Karnataka)...

ಬೆಂಗಳೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

ಬೆಂಗಳೂರು: ಬೆಂಗಳೂರು(Bangalore) ಮತ್ತು ಮೈಸೂರಿನ(Mysore) ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಗಿ ಭಾರತದ ಗೌರವಾನ್ವಿತ...

ಗಮನ ಸೆಳೆದ ‘ಮೋದಿ ಕಹಿ ನಹೀ ಜಾಯೇಗಾ’ ಫಲಕಗಳು

ಬೆಂಗಳೂರು: ರಾಜ್ಯಕ್ಕೆ ಇಂದು ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರನ್ನು...

ಗುರು ವಿದುಷಿ ಶಿಲ್ಪಾ ಅರುಣ್‌ಕುಮಾರ್ ಅವರ ಕಲಾತ್ಮಕ ದೃಷ್ಟಿಕೋನದಲ್ಲಿ ಅರಳಿದ ಭರತನಾಟ್ಯ

ಶಾಸ್ತ್ರೀಯ ಪರಂಪರೆ, ನವೀನ ನೃತ್ಯ ಸಂಯೋಜನೆ ಮತ್ತು ಭಾವಪೂರ್ಣ ಕಥನದ ಸುಂದರ...

Related Articles