ಪ್ರಧಾನಿ ನರೇಂದ್ರ ಮೋದಿ–ಪೇಜಾವರ ಶ್ರೀ ಭೇಟಿ

ಶ್ರೀ ವಿಶ್ವೇಶತೀರ್ಥರ ಜನ್ಮಶತಮಾನೋತ್ಸವ ಪಂಚವಾರ್ಷಿಕ ಯೋಜನೆಗಳ ಲಾಂಛನ (Logo) ಅನಾವರಣ (Launched) ಪೇಜಾವರ ಮಠದ (Pejawar Mutt) ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು (Sri Vishwesha Thirtha Sreepada) ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಭೇಟಿ ಮಂಗಳವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮಶತಮಾನೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಪಂಚವಾರ್ಷಿಕ ಯೋಜನೆಗಳ ಲಾಂಛನವನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಭೇಟಿಯ ಸಂದರ್ಭದಲ್ಲಿ ಶ್ರೀ ವಿಶ್ವಪ್ರಸನ್ನತೀರ್ಥರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಕ್ಷಗಾನದ ರಾಜಕಿರೀಟ ತೊಡಿಸಿ, ಶಾಲು ಹೊದಿಸಿ ಗೌರವಿಸಿದರು. ಸ್ವರ್ಣಲೇಪಿತ ಕಾಲೀಯ ಕೃಷ್ಣನ ಪ್ರತಿಮೆ, ಫಲ ಹಾಗೂ ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಅವರ ಶ್ರೇಯಸ್ಸಿಗಾಗಿ ಪೇಜಾವರ ಮಠದ ವೇದವ್ಯಾಸ ಗುರುಕುಲದಲ್ಲಿ ಪೂರ್ಣ ನವಗ್ರಹ ಹೋಮ ಹಾಗೂ ರಾಷ್ಟ್ರಸೂಕ್ತ ಹೋಮಗಳನ್ನು ನೆರವೇರಿಸಲಾಗಿತ್ತು. ಈ ಹೋಮಗಳ ಪ್ರಸಾದವನ್ನು ಪ್ರಧಾನಿಯವರಿಗೆ ನೀಡಿ ಶ್ರೀಗಳು ಶುಭ ಹಾರೈಸಿದರು.

ದೇಶದ ಪ್ರಗತಿಗೆ ಪ್ರಧಾನಿಯವರ ಕೊಡುಗೆ ಶ್ಲಾಘನೀಯ: ಪೇಜಾವರ ಶ್ರೀ

ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಜನ್ಮಶತಮಾನೋತ್ಸವದ ಪಂಚವಾರ್ಷಿಕ ಯೋಜನೆಗಳ ಲಾಂಛನವನ್ನು ಪ್ರಧಾನಿಯವರಿಂದ ಅನಾವರಣಗೊಳಿಸಿರುವುದು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಶ್ರೀ ವಿಶ್ವಪ್ರಸನ್ನತೀರ್ಥರು ತಿಳಿಸಿದರು.

ದೇಶ ಮತ್ತು ಧರ್ಮದ ಒಳಿತಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ಭಾರತದ ಹಾಗೂ ಭಾರತೀಯರ ಗೌರವವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವ ಪ್ರಧಾನಿಯವರು ಇನ್ನೂ ಬಹುಕಾಲ ಯಶಸ್ವಿಯಾಗಿ ದೇಶವನ್ನು ಮುನ್ನಡೆಸುವಂತಾಗಲಿ ಎಂದು ಶ್ರೀಗಳು ಹಾರೈಸಿದರು.

ಉಡುಪಿ–ದ್ವಾರಕಾ ಸಂಬಂಧ: ಜನ್ಮಶತಮಾನೋತ್ಸವ ಯೋಜನೆಯಲ್ಲಿ ದ್ವಾರಕೆಯನ್ನೂ ಸೇರಿಸಲು ಮೋದಿ ಸಲಹೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ಶ್ರೀ ವಿಶ್ವೇಶತೀರ್ಥರು ಹಾಗೂ ಶ್ರೀ ವಿಶ್ವಪ್ರಸನ್ನತೀರ್ಥರು ಪೇಜಾವರ ಮಠದ ಮೂಲಕ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳು ಸದಾ ಪ್ರೇರಣಾದಾಯಕವಾಗಿವೆ ಎಂದು ಹೇಳಿದರು.

ಜನಸಂಘದ ಕಾಲದಿಂದಲೂ ಉಡುಪಿ ನೀಡಿರುವ ಕೊಡುಗೆಗಳು ಸ್ಮರಣೀಯವಾಗಿವೆ. ಶ್ರೀ ವಿಶ್ವೇಶತೀರ್ಥರ ಜನ್ಮಶತಮಾನೋತ್ಸವದ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಂಡು ಸಮಾಜ ಹಾಗೂ ದೇಶಕ್ಕೆ ಮತ್ತಷ್ಟು ಬಲ ನೀಡುವಂತಾಗಲಿ ಎಂದು ಆಶಿಸಿದರು.

ಉಡುಪಿ ಮತ್ತು ದ್ವಾರಕೆಯ ನಡುವೆ ಇರುವ ಗಾಢವಾದ ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಸಂಬಂಧವನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಜನ್ಮಶತಮಾನೋತ್ಸವದ ಯೋಜನೆಗಳಲ್ಲಿ ದ್ವಾರಕೆಯನ್ನೂ ಒಳಗೊಂಡಂತೆ ವಿಶೇಷ ಯೋಜನೆಯೊಂದನ್ನು ರೂಪಿಸುವಂತೆ ಸಲಹೆ ನೀಡಿದರು.

ಗಣ್ಯರ ಉಪಸ್ಥಿತಿ 

ಅಖಿಲ ಭಾರತ ಮಾಧ್ವ ಮಹಾಮಂಡಲದ ಅಧ್ಯಕ್ಷ ಗೌತಮ್, ಚೆನ್ನೈ ಉಡುಪಿ ಹೋಮ್ಸ್ ಮಾಲೀಕ ಪಿ. ರಾಮ್ ಪ್ರಸಾದ್, ಎಂಆರ್‌ಜಿ ಗ್ರೂಪ್ ಮುಖ್ಯಸ್ಥ ಹಾಗೂ ಉದ್ಯಮಿ ಕೆ. ಪ್ರಕಾಶ್ ಶೆಟ್ಟಿ, ಕೊಯಮತ್ತೂರಿನ ಉದ್ಯಮಿ ರವಿ ಶ್ಯಾಮ್, ನವದೆಹಲಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶ್ರೀನಿವಾಸ ವರಖೇಡಿ, ಬೆಂಗಳೂರಿನ ಕೈಗಾರಿಕೋದ್ಯಮಿ ಹರೀಶ್ ರಾಯಸ್, ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಚ್. ವಾಸುದೇವ ಭಟ್, ಬದರಿ ನಾರಾಯಣ ಲಡ್ಡಾ, ಶ್ರೀನಿವಾಸ ಪ್ರಸಾದ್ (ಮೈಸೂರು), ಡಿ.ಪಿ. ಅನಂತ ಆಚಾರ್ಯ, ವೇದವ್ಯಾಸ ಗುರುಕುಲದ ಪ್ರಾಚಾರ್ಯ ಡಾ. ವಿಠೋಬಾಚಾರ್ಯ ಹಾಗೂ ಶ್ರೀಗಳ ಕಾರ್ಯದರ್ಶಿ ಕೃಷ್ಣಮೂರ್ತಿ ಭಟ್ ಉಪಸ್ಥಿತರಿದ್ದರು.

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles