ಪ್ರೇಕ್ಷಕರ ಮನ ಸೆಳೆದ ಸುಷ್ಮಾ ಗಾಯನ

ಬೆಂಗಳೂರು : ತಿರುಮಲ ತಿರುಪತಿ (TTD) ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಸುಧೀಂದ್ರನಗರದ (Swiming Pool Mutt) ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 4 ರಿಂದ 7ರ ವರೆಗೆ ನಾಲ್ಕು ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳನ್ನು (Cultural Programmes) ಹಮ್ಮಿಕೊಂಡಿತ್ತು‌
ಮೊದಲ ಮೂರು ದಿನಗಳು ವಿವಿಧ ಭಜನಾ ಮಂಡಳಿಗಳಿಂದ ಭಜನೆ ಮತ್ತು ಪಂಡಿತ ಶ್ರೀ ಚಂದ್ರಶೇಖರ ಆಚಾರ್ಯರಿಂದ “ಶ್ರೀ ಜಯತೀರ್ಥರ ಜೀವನ ಮತ್ತು ಸಾಧನೆ” ವಿಷಯವಾಗಿ ಧಾರ್ಮಿಕ ಪ್ರವಚನ ನಡೆಯಿತು.
ಆಗಸ್ಟ್ 7 ರಂದು ಜರುಗಿದ “ಹರಿನಾಮ ಸಂಕೀರ್ತನೆ” ಕಾರ್ಯಕ್ರಮದಲ್ಲಿ ಸಿಂಧನೂರಿನ ಶ್ರೀಮತಿ ಸುಷ್ಮಾ ಜೋಯಿಸ್ ಅವರಿಂದ ಗಾಯನ ಕಾರ್ಯಕ್ರಮ ಜರುಗಿತು.
“ಗಜವದನ ಬೇಡುವೆ” ಎಂಬ ವಿಘ್ನೇಶ್ವನ ಕೃತಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದ ಸುಷ್ಮಾ “ತಂದೆ ವಿಜಯರಾಯ’, “ಭೋಯತಿ ವರದೇಂದ್ರ” “ನೋಡು ನೋಡು ಟೀಕಾರಾಯರ’, “ಶಂಭೋ ಸ್ವಯಂಭೋ”, “ಬಾರೇ ಭಾಗ್ಯದ ನಿಧಿಯೇ”, “ಜಾಣ ನೀನಹುದೋ”, “ರಾಮ ರಾಮ ಜಯರಾಮ” ಮುಂತಾದ ಅಪರೂಪದ ಕೃತಿಗಳನ್ನು ಸುಶ್ರಾವ್ಯವಾಗಿ ಹಾಡಿ ಪ್ರೇಕ್ಷಕರ ಮನ ಸೆಳೆದರು.
ಇವರ ಗಾಯನಕ್ಕೆ ಹಾರ್ಮೋನಿಯಂ ವಾದನದಲ್ಲಿ ಶ್ರೀ ಶ್ರೀ ರಾಮು ಕೊಡೇಕಲ್ ಮತ್ತು ತಬಲಾ ವಾದನದಲ್ಲಿ ಶ್ರೀ ಭೀಮಾಶಂಕರ್ ಸಾಥ್ ನೀಡಿದರು. ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಸ್ವಾಗತ ಮತ್ತು ವಂದನಾರ್ಪಣೆ ಮಾಡಿದರು.

Hot this week

ಕರ್ನಾಟಕದ ಸರ್ಕಾರಿ ಸೇವೆಗಳಿಗೆ ಬಹುಭಾಷಾ ಮತ್ತು ಧ್ವನಿ ಆಧಾರಿತ ಪ್ರವೇಶದ ಯೋಜನೆ

ಕರ್ನಾಟಕ ಸರ್ಕಾರವು ಸಾರ್ವಜನಿಕ ಸೇವೆಗಳನ್ನು ಜನರಿಗೆ ಅವರ ಆಯ್ಕೆಯ ಭಾಷೆಯಲ್ಲಿ ಸುಲಭವಾಗಿ...

ಕೆನಡಾದ ಲೇಖಕಿ ಆನ್ ಕಾರ್ಸನ್‌ಗೆ ಸಾಹಿತ್ಯ ನೊಬೆಲ್ ಪ್ರಶಸ್ತಿ

ಕೆನಡಾದ ಕವಯಿತ್ರಿ, ಪ್ರಬಂಧಕಾರ್ತಿ ಮತ್ತು ಅನುವಾದಕಿ ಆನ್ ಕಾರ್ಸನ್ ಅವರಿಗೆ ಸಾಹಿತ್ಯ...

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ

ಕರ್ನಾಟಕದಲ್ಲಿ ಬರ ಪರಿಹಾರದ ವೆಚ್ಚ ಹೆಚ್ಚಳ: ಸರ್ಕಾರದ ಹಣಕಾಸಿಗೆ ಒತ್ತಡ ಕರ್ನಾಟಕದಲ್ಲಿ ಬರ...

ಆಂಧ್ರಪ್ರದೇಶದಲ್ಲಿ ತೀವ್ರ ಬರ: 21 ಜಿಲ್ಲೆಗಳ 388 ಮಂಡಲಗಳು ಬಾಧಿತ

ಆಂಧ್ರಪ್ರದೇಶ ಸರ್ಕಾರವು 21 ಜಿಲ್ಲೆಗಳ 388 ಮಂಡಲಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ...

ಹಿರಿಯ ನಟ ನಾನಾ ಪಾಟೇಕರ್ ನಿಧನ: ಚಿತ್ರರಂಗದಲ್ಲಿ ಶೋಕ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ಸಾಂಸ್ಕೃತಿಕ ಐಕಾನ್...

Topics

ಜಿಎಸ್‌ಟಿ ಅಧಿಕಾರಿಗಳ ಬಂಧನಾಧಿಕಾರ ರದ್ದು; ಪ್ರಾಸಿಕ್ಯೂಷನ್ ಮಿತಿ ₹1 ಕೋಟಿಯಿಂದ ₹5 ಕೋಟಿಗೆ ಏರಿಕೆ!

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (GST) ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ...

ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.10.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA.. ಆಯಣ: ದಕ್ಷಿಣಾಯನ AYANA:...

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ (KSTA) ವತಿಯಿಂದ "ಆಹಾರ ಮತ್ತು...

Related Articles