ಬೆಂಗಳೂರು: ರೈತ ವಿರೋಧಿ, ಜನವಿರೋಧಿ ಮತ್ತು ಭ್ರಷ್ಟ ಕಾಂಗ್ರೆಸ್ (Congress) ಸರಕಾರದ ವಿರುದ್ಧ ನಡೆಸುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಬೃಹತ್ ಸಮಾರೋಪ ಸಮಾರಂಭವು 10.09.2026ರ ಸಂಜೆ 5.00 ಗಂಟೆಗೆ (Bellary) ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ (Municipal College Ground) ನಡೆಯಲಿದೆ.
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಕರ್ನಾಟಕ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾಮೋಹನ್ ದಾಸ್ ಅಗ್ರವಾಲ್, ವಿಧಾನಸಭೆಯ ವಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ, ಮಾಜಿ ಮುಖ್ಯಮಂತ್ರಿಗಳು ಮತ್ತು ಸಂಸದರಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ್ ರೆಡ್ಡಿ, ಮಾಜಿ ಸಚಿವರಾದ ಬಿ. ಶ್ರೀರಾಮುಲು, ಮಾಜಿ ಸಚಿವರು ಮತ್ತು ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ, ಕೋರ್ ಕಮಿಟಿ ಸದಸ್ಯರು, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು, ಮಾಜಿ ಸಂಸದರು, ಮಾಜಿ ಶಾಸಕರು, ವಿಧಾನಪರಿಷತ್ ಮಾಜಿ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.
ನಾಳೆ ನಡೆಯುವ ಪಾದಯಾತ್ರೆ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ತಯಾರಿ..

