ಇಂದು ದಿನಾಂಕ:01-07-2026 ರಂದು ಪುನಃ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಆಂಧ್ರಪ್ರದೇಶಕ್ಕೆ ತೆರಳಿ ಕೇಂದ್ರೀಯ ಬುಡಕಟ್ಟು ವಿಶ್ವವಿದ್ಯಾಲಯದ ಮೊದಲ ಘಟಿಕೋತ್ಸವದಲ್ಲಿ ಭಾಗವಹಿಸಿ ಮರಳಿ ಬೆಂಗಳೂರಿಗೆ ಆಗಮಿಸಿ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣಿಸಿದರು.
ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಭೈರತಿ ಸುರೇಶ್, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಏರ್ ವೈಸ್ ಮಾರ್ಷಲ್ ಡಿ.ಎಸ್. ಡಂಗಿ, ಮೇಜರ್ ಜನರಲ್ ಮೋಹಿತ್ ಮಹೇಂದ್ರೂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್. ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

