ಮದರಸಾಗೆ ನೀಡಿರುವ 5 ಲಕ್ಷ ರೂ ಅನುದಾನ ವಾಪಸ್ ಪಡೆಯುವಂತೆ ಆದೇಶ

 ಶಿಕ್ಷಣ (Education) ಇಲಾಖೆಯಿಂದ ಮಾನ್ಯತೆ ರದ್ದಾಗಿರುವ  ಥಣಿಸಂದ್ರದ (Thanisandra) ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ (Islamic School) ನಡೆಸುತ್ತಿರುವ ಮದರಸಾಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ನೀಡಿರುವ ಐದು ಲಕ್ಷ ರೂಪಾಯಿ ಅನುದಾನ ವಾಪಸ್ ಪಡೆಯುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಹೈಕೋರ್ಟ್ ನ (High Court) ವಿಭಾಗೀಯ ಪೀಠ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ಆದೇಶಿಸಿದೆ.
ಮುಂದಿನ ವಿಚಾರಣೆ ಸಂದರ್ಭದಲ್ಲಿ ವಂಚನೆಯ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ವಿರುದ್ಧ ನಡೆಯುತ್ತಿರುವ ತನಿಖೆಯ ವಸ್ತುಸ್ಥಿತಿ ಮಾಹಿತಿ ಹಾಗೂ ಕೈಗೊಂಡಿರುವ ಕ್ರಮಗಳ ವರದಿಯನ್ನು ಸಲ್ಲಿಸಬೇಕು. ಅಲ್ಪ ಸಂಖ್ಯಾತರ ಇಲಾಖೆಯ ನಿರ್ದೇಶಕರು ಆರೋಪಗಳನ್ನು ರೂಪಿಸುವ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ ಖುದ್ದಾಗಿ ಹಾಜರಾಗಬೇಕು ಎಂದು ನಿರ್ದೇಶನ ನೀಡಿದೆ.
ಅಬ್ದುಲ್ ಹಮೀದ್ ಪಾಷ, ಪ್ರದೀಪ್ ಸಿಂಹ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಟಿ.ಎಂ. ನದಾಫ್ ನೇತೃತ್ವದ ವಿಭಾಗೀಯ ಪೀಠ ಎರಡನೇ ಬಾರಿಗೆ ಈ ಮಹತ್ವದ ಆದೇಶ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿದೆ.
ಇದಕ್ಕೂ ಮುನ್ನ ಮುಖ್ಯನ್ಯಾಯಮೂರ್ತಿ ವಿಭು ಭಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯಪೀಠ ಕಳೆದ ವರ್ಷದ ಸೆಪ್ಟೆಂಬರ್ ನಲ್ಲಿ ಈ ಕುರಿತಾದ ಅರ್ಜಿ ವಿಚಾರಣೆ ನಡೆಸಿ ಮದರಸಾಗೆ ನೀಡಿರುವ ಹಣದ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ತೆಗೆದುಕೊಳ್ಳುವಂತೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿತ್ತು.
ಇದೀಗ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎನ್. ಮೂಲಿಮನಿ ಅವರು ನ್ಯಾಯಪೀಠದ ಮುಂದೆ ಪ್ರಮಾಣ ಪತ್ರಸಲ್ಲಿಸಿ ಪ್ರತಿವಾದಿಗಳು ಬೆಂಗಳೂರಿನಲ್ಲಿ ವಿವಿಧ ಹೆಸರುಗಳಡಿ  ಶೈಕ್ಷಣಿಕ ಸಂಸ್ಥೆಗಳನ್ನು ನಡೆಸುತ್ತಿರುವುದನ್ನು ಶಿಕ್ಷಣ ಇಲಾಖೆ ಆಯುಕ್ತರು ತನಿಖೆ ನಡೆಸಿ ಶಿಕ್ಷಣ ಇಲಾಖೆಯ ಮಾನ್ಯತೆ ರದ್ದುಪಡಿಸಿದ್ದಾರೆ. ಇದನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿಯೂ ಸಹ ವಜಾ ಆಗಿದೆ.   ದೂರಿನಲ್ಲಿ ಮಾಡಲಾದ ಆರೋಪಗಳು ಪರಿಶೀಲನೆಯ ನಂತರ ಸತ್ಯವೆಂದು ಕಂಡುಬಂದಿರುವುದರಿಂದ, ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು, ಈಗಾಗಲೇ ಬಿಡುಗಡೆ ಮಾಡಲಾದ ರೂ.5 ಲಕ್ಷ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂತಿರುಗಿಸುವ ಕುರಿತು ಕ್ರಮ ಕೈಗೊಳ್ಳಲು ಅನುಮತಿ ಕೋರಿರುವುದನ್ನು ಸಹ ನ್ಯಾಯಪೀಠ ಗಮನಿಸಿ ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಖುದ್ಧಾಗಿ ವಿಚಾರಣೆಗೆ ಹಾಜರಾಗುವಂತೆ ಅಲ್ಪ ಸಂಖ್ಯಾತರ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿತು.

Hot this week

‘ಆಸ್ಟ್ರಲ್ ಪೇಜೆಂಟ್ಸ್’ 10ನೇ ಆವೃತ್ತಿ ಯಶಸ್ವಿ: ದಶಕದ ಸಂಭ್ರಮ

ಬೆಂಗಳೂರು : ಕಳೆದ ಒಂಬತ್ತು ವರ್ಷಗಳಿಂದ ವೈಶಿಷ್ಟ್ಯಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಯೋಜನೆಗೊಳ್ಳುತ್ತಾ...

“ಪ್ರೋಷ್ಟಪದಿ ಭಾಗವತ” ಧಾರ್ಮಿಕ ಪ್ರವಚನ

ಸುಧೀಂದ್ರನಗರ : ಶ್ರೀ ರಾಘವೇಂದ್ರ ಸೇವಾ ಸಮಿತಿಯ (Raghavendra Seva Samithi)...

ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಗಣೇಶೋತ್ಸವ

ಬೆಂಗಳೂರು : ನಾಗರಬಾವಿ (Nagarabhavi) ಮುಖ್ಯರಸ್ತೆಯಲ್ಲಿರುವ ಕೆನರಾ ಬ್ಯಾಂಕ್ (Canara Bank...

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ನಿಷೇಧಿತ ಮೊಬೈಲ್ ಬಳಕೆ: 9 ಆರೋಪಿಗಳ ಬಂಧನ

ಪರಪ್ಪನ ಅಗ್ರಹಾರ (Parappana Agrahara) ಠಾಣೆಯಲ್ಲಿ (Station) 13/01/2026 ರಂದು ಬೆಂಗಳೂರು...

20 ಮಂದಿಗೆ ಉಚಿತ ಕಾಶಿ–ಪ್ರಯಾಗ್ ಯಾತ್ರೆ : ಉಚಿತ ವಿಮಾನ ಪ್ರಯಾಣದ ಸೌಭಾಗ್ಯ

ಬೆಂಗಳೂರು, ಸೆ. 10: ಮಹಾ ಶಿವರಾತ್ರಿ  (Shivarathri) ಅಂಗವಾಗಿ ವಿಜಯನಗರದಲ್ಲಿ ಆಯೋಜಿಸಲಾಗಿದ್ದ...

Topics

ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 11.09.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ರಾಜಕೀಯ ರಂಗದಲ್ಲಿ ಆಧುನಿಕತೆ ಮತ್ತು ಹೋರಾಟಕ್ಕೆ ಇನ್ನೊಂದು ಹೆಸರೇ ಡಿ.ಕೆ.ಶಿವಕುಮಾರ್ : DCM ಜಿ. ಪರಮೇಶ್ವರ

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್(CM D.K.Shivakumar) ಅವರ ನೇತೃತ್ವದ ರಾಜ್ಯ...

“ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ಸರಿಯಾದ ಹಾದಿಯಲ್ಲಿ ನಡೆಯುತ್ತಿದೆ” : ಮಾಜಿ ಸಿ ಎಂ ಸಿದ್ದರಾಮಯ್ಯ ಪ್ರಶಂಸೆ.

ಬೆಂಗಳೂರು: ನಮ್ಮ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುತ್ತಿರುವುದರ ಜೊತೆಗೆ,...

Related Articles