ಯುವಕರ ಭವಿಷ್ಯದೊಂದಿಗೆ ಚೆಲ್ಲಾಟ ಸಹಿಸುವುದಿಲ್ಲ: ಪ್ರಿಯಾಂಕ್ ಖರ್ಗೆ

ಕೆ.ಪಿ.ಎಸ್.ಸಿ (KPSC) ಪರೀಕ್ಷಾ ಅಕ್ರಮದಲ್ಲಿ ಯಾರೇ ಭಾಗಿಯಾದರು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿದ್ಯಾರ್ಥಿಗಳ (Students) ಭವಿಷ್ಯದೊಂದಿಗೆ ಚೆಲ್ಲಾಟ ಸರ್ಕಾರ ಸಹಿಸುವುದಿಲ್ಲ ಎಂದು ರಾಜ್ಯದ ಗೃಹ, ಐ.ಟಿ-ಬಿ.ಟಿ, ಇ-ಆಡಳಿತ ಹಾಗೂ ಕಲಬುರಗಿ  (Kalburgi) ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyanka Kharge) ಅವರು ಹೇಳಿದರು.

ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷಾ ಅಕ್ರಮದಲ್ಲಿ ಬಾಗಿಯಾದವರು ಎಷ್ಟೇ ಬಲಿಷ್ಟವಾದರು, ಯಾವುದೇ ಪಕ್ಷದವರಾದರೂ ಸರಿ, ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಲು ಬದ್ಧ ಎಂದ ಅವರು, ತಾವೇ ರಾಜ್ಯದ ಗೃಹ ಸಚಿವರಿರುವಾಗ ಯಾವುದೇ ಸಾಕ್ಷಿ ದುರ್ಬಲಗೊಳಿಸಲು ಸಹ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಿಂದೆ ನಾನು ವಿರೋಧ ಪಕ್ಷದಲ್ಲಿ ಇದ್ದಾಗ ಪರೀಕ್ಷಾ ಅಕ್ರಮ ತಡೆಯಲು ಖಾಸಗಿ ಬಿಲ್ ಮಂಡಿಸಿದೆ. ಇದೀಗ ನಮ್ಮ ಸರ್ಕಾರದ ಅವಧಿಯಲ್ಲಿಯೇ ಪರೀಕ್ಷಾ ಅಕ್ರಮ ತಡೆಯಲು ಬಿಲ್ ತರಲಾಗಿದೆ. 70 ಸಾವಿರ ಹುದ್ದೆ ಭರ್ತಿಗೆ ಚಾಲನೆ ನೀಡಿದ್ದು, 35 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರೆಲ್ಲರ ಹಿತ ಕಾಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲೆಯ 5 ತಾಲೂಕುಗಳನ್ನು ಮಾತ್ರ ಬರ ಘೋಷಣೆ ಮಾಡಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಎನ್.ಡಿ.ಆರ್.ಎಫ್ ನಿಯಮಾವಳಿ ಪ್ರಕಾರ ಬರ ಘೋಷಣೆ ಮಾಡಬೇಕಾಗುತ್ತದೆ. ನಿಯಾಮಾವಳಿ ರಚಿಸಿದ್ದು ಕೇಂದ್ರ ಸರ್ಕಾರ. ವಿರೋಧ ಪಕ್ಷದವರು ಕಲಬುರಗಿಯಲ್ಲಿ ಪ್ರತಿಭಟನೆ ಮಾಡುವುದರ ಬದಲಾಗಿ ಕೇಂದ್ರ ಸರ್ಕಾರದ ಮುಂದೆ ಪ್ರತಿಭಟಿಸಬೇಕು ಎಂದರು.

ಕಾರಾಗೃಹ ಸುಧಾರಣೆ ವರದಿ ಸಲ್ಲಿಕೆ :

ಕರ್ನಾಟಕದ ಕಾರಾಗೃಹಗಳ (ಜೈಲುಗಳ) ಆಡಳಿತ, ಸುರಕ್ಷತೆ ಮತ್ತು ಸುಧಾರಣೆಗಳಿಗೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ಅವರ ನೇತೃತ್ವದಲ್ಲಿ ರಚಿಸಲಾದ ಉನ್ನತ ಮಟ್ಟದ ಸಮಿತಿಯೂ ಈಗಾಗಲೆ ವರದಿ ಸಲ್ಲಿಸಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅನುಷ್ಠನಕ್ಕೆ ತರಲಾಗುವುದು ಎಂದು ಸಚಿವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ ಇದ್ದರು.

ಸೂರಿಲ್ಲದವರಿಗೆ ಸೂರು ಒದಗಿಸಬೇಕು ಎಂಬುದು ನನ್ನ ಆಶಯ: ಡಾ. ಜಿ.ಪರಮೇಶ್ವರ

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

Related Articles