ರಾಹುಲ್ ಗಾಂಧಿಯವರ ಮನಸ್ಥಿತಿಯನ್ನು ಖರ್ಗೆಯವರು ಬಿಚ್ಚಿಟ್ಟ ಹಾಗಿದೆ : ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಉಸ್ತುವಾರಿಗಳಾದ ಹರೀಶ್ ದ್ವಿವೇದಿ (Harish Dwivedi) ಅವರು ನವೆಂಬರ್ 2, 3 ಮತ್ತು 4 ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ನವೆಂಬರ್ 2 ರಂದು ಬೆಂಗಳೂರಿನಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ಬಿಜೆಪಿ (BJP President) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ತಿಳಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ದ್ವಿವೇದಿ ಅವರು ಕೋರ್ ಕಮಿಟಿ ಸದಸ್ಯರು ಹಾಗೂ ಹಿರಿಯ ಮುಖಂಡರನ್ನು ಭೇಟಿ ಮಾಡಲಿದ್ದಾರೆ ಎಂದು ವಿವರಿಸಿದರು. ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರು ಕೋಲಾರ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ನಿರ್ಮಾಣವಾಗುತ್ತಿದೆ. ಖಾಸಗಿ ಸಮೀಕ್ಷೆಯೊಂದು ಬಿಜೆಪಿ 115 ಸ್ಥಾನಗಳನ್ನು ಗೆಲ್ಲಲಿದೆ ಎಂದು ತಿಳಿಸಿದೆ ಎಂದು ಗಮನ ಸೆಳೆದರು. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಇಚ್ಛಾಶಕ್ತಿಯ ಕೊರತೆಯಿದೆ ಎಂದು ಆರೋಪಿಸಿದರು. ಮೀಸಲಾತಿ ವರ್ಗೀಕರಣದಲ್ಲಿ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸಿ, ನ್ಯಾಯಾಲಯದ ಮೂಲಕ ತಡೆಯಾಜ್ಞೆ ತರುವ ಷಡ್ಯಂತ್ರ ನಡೆಯುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿದರು. ಬಿಜೆಪಿ ಈ ಚುನಾವಣೆಗಳನ್ನು ಎದುರಿಸಲು ಸಂಪೂರ್ಣ ಸಿದ್ಧವಾಗಿದೆ ಎಂದು ತಿಳಿಸಿದರು.

ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರದ ವೈಫಲ್ಯ
ತೀವ್ರ ಬರಗಾಲದ ಸಂದರ್ಭದಲ್ಲೂ ಕಾವೇರಿ ಕೊಳ್ಳದ ರೈತರ ಹಿತಾಸಕ್ತಿ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು. ಸುಪ್ರೀಂ ಕೋರ್ಟ್ ಹಾಗೂ ಟ್ರಿಬ್ಯೂನಲ್ ಮುಂದೆ ರಾಜ್ಯದ ಪರಿಸ್ಥಿತಿಯನ್ನು ಸರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ಎಡವಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತೀವ್ರ ಆಕ್ಷೇಪ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಹಾಗೂ ಅವರ ತಂದೆಯವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಖಂಡಿಸಿದರು. ಇದು ರಾಹುಲ್ ಗಾಂಧಿ ಅವರ ಮನಸ್ಥಿತಿ ಹಾಗೂ ಕಾಂಗ್ರೆಸ್ ಪಕ್ಷದ ಹತಾಶೆಯನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವುದನ್ನು ಮತ್ತು ಅವರ ಜನಪ್ರಿಯತೆಯನ್ನು ಕಾಂಗ್ರೆಸ್‍ಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಖರ್ಗೆ ಅವರು ಬಹಿರಂಗ ಕ್ಷಮೆ ಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.

ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಲಿ ಕಾಂಗ್ರೆಸ್ ಸರ್ವನಾಶಕ್ಕೆ ಅಪ್ಪ-ಮಗ ಸಾಕು: ಆರ್.ಅಶೋಕ್

Hot this week

’ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ‘ಪಾಂಚಜನ್ಯ ಗುರುಶ್ರೇಷ್ಠ ಪುರಸ್ಕಾರ–2026′

ಎರಡು ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ; ನಾಮನಿರ್ದೇಶನ ಸಲ್ಲಿಸಲು ನವೆಂಬರ್ 20 ಕೊನೆಯ...

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ (Kannada Sahitya Academy) ಮಾಜಿ ಸದಸ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

Topics

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

Related Articles