ವಿಪ್ರ ಫೋಟೋ ಮತ್ತು ವೀಡಿಯೋಗ್ರಾಫರ್ಸ್ ಅಸೋಸಿಯೇಷನ್‌ ನೂತನ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ಕರ್ನಾಟಕ ರಾಜ್ಯ ವಿಪ್ರ (Vipra Photographers) ಫೋಟೋ ಮತ್ತು ವೀಡಿಯೋಗ್ರಾಫರ್ಸ್ ಅಸೋಸಿಯೇಷನ್‌ನ (Videographers Assocation) ವಾರ್ಷಿಕ ಸರ್ವ ಸದಸ್ಯರ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (AKBMS) ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು.

ಸಭೆಯ ನಂತರ 2026–27ನೇ ಸಾಲಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಚುನಾವಣೆಯು ಚುನಾವಣಾಧಿಕಾರಿ ಶ್ರೀ ಬಾಬು ಜಿ.ಎಸ್. ಅವರ ಸಮ್ಮುಖದಲ್ಲಿ ಮತದಾನದ ಮೂಲಕ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಶ್ರೀ ರಮೇಶ್ ಬಿ.ಕೆ. ಅವರು ಆಯ್ಕೆಯಾದರು. ಕಾರ್ಯದರ್ಶಿಯಾಗಿ ಶ್ರೀ ಪ್ರದೀಪ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಹ ಕಾರ್ಯದರ್ಶಿಯಾಗಿ ಶ್ರೀ ಸುಧೀರ್ ಹೆಬ್ಬಾರ್ ಹಾಗೂ ಖಜಾಂಚಿಯಾಗಿ ಶ್ರೀ ಪ್ರಸನ್ನ ಕುಲಕರ್ಣಿ ಅವರು ಆಯ್ಕೆಯಾದರು.

ಸಂಘದ ನಿರ್ದೇಶಕರಾಗಿ ಆರ್.ಜಿ. ಭಟ್, ಪ್ರಸನ್ನ ಎನ್.ಎಸ್., ಕಾಶಿ ಸುಬ್ರಮಣ್ಯ, ಚಂದ್ರಶೇಖರ ಎಸ್.ಆರ್., ಜೂಪಿಟರ್ ಮಂಜುನಾಥ್, ರಮೇಶ್ ಭಟ್, ಸತ್ಯಪ್ರಕಾಶ್, ರಾಘವೇಂದ್ರ ರಾವ್, ಶ್ರೀನಿವಾಸ್ ವೈ.ಕೆ., ಆರ್. ಕೃಷ್ಣ ಹಾಗೂ ಲಕ್ಷ್ಮಿಕಾಂತ್ ಆರ್. ಅವರನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಜಿಲ್ಲೆಗಳ ವಿಪ್ರ ಛಾಯಾಗ್ರಾಹಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್. ರಘುನಾಥ್ ಅವರು ಪ್ರಶಸ್ತಿಗಳನ್ನು ವಿತರಿಸಿ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಅವರ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಛಾಯಾಗ್ರಾಹಕರ ಸಂಘಟನೆ ಮತ್ತು ಮಹಾಸಭೆಯ ನಡುವೆ ದೀರ್ಘಕಾಲದ ಆತ್ಮೀಯ ಸಂಬಂಧವಿದ್ದು, ಸಂಘದ ಚಟುವಟಿಕೆಗಳಿಗೆ ಮಹಾಸಭೆ ನಿರಂತರವಾಗಿ ಸಹಕಾರ ನೀಡುತ್ತಾ ಬಂದಿದೆ. ಮುಂದೆಯೂ ಎಲ್ಲ ರೀತಿಯ ಬೆಂಬಲ ಮತ್ತು ಸಹಕಾರವನ್ನು ನೀಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.

ನೂತನ ಅಧ್ಯಕ್ಷರಾದ ಶ್ರೀ ರಮೇಶ್ ಬಿ.ಕೆ. ಅವರು ಮಾತನಾಡಿ, ರಾಜ್ಯದಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಿಪ್ರ ಛಾಯಾಗ್ರಾಹಕರು ಹಾಗೂ ವೀಡಿಯೋಗ್ರಾಫರ್ಸ್‌ಗಳು ಸಂಘದ ಸದಸ್ಯರಾಗಿ ಸೇರ್ಪಡೆಗೊಂಡು ಸಂಘಟನೆಯ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. ಸಂಘಟನೆಯ ಮೂಲಕ ವೃತ್ತಿಪರರ ಹಿತಾಸಕ್ತಿ ಕಾಪಾಡುವ ಜೊತೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಳ್ಳುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಛಾಯಾಗ್ರಾಹಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles