ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 27 (ಕರ್ನಾಟಕ ವಾರ್ತೆ): ಅಲ್ಪಸಂಖ‍್ಯಾಂತರ ಅಭಿವೃದ್ದಿ ನಿಗಮ (ನಿ) ವತಿಯಿಂದ 2026-27 ನೇ ಸಾಲಿನಲ್ಲಿ  ಸ್ವಾವಲಂಬಿ ಸಾರಥಿ ಯೋಜನೆ ಫಾಸ್ಟ್ ಪುಡ್ ಟ್ರಕ್ / ಟೈಲರ ಕಿಚನ್ ಫುಡ್ (ಕಿಯೋಸ್ಟ್) (KEOSK) ಯೋಜನೆ , ಅಲ್ಪಸಂಖ್ಯಾಂತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗ ಪ್ರೋತ್ಸಹ ಯೋಜನೆ, ಸಿಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕೆ ಪ್ರೋತ್ಸಹಾ ಯೋಜನೆ, ಸಮುದಾಯದ ಆಧಾರಿತ ತರಬೇತಿ ಯೋಜನೆ, ವ್ಯಾಪಾ/ಉದ್ಯಮಗಳಿಗೆ ನೇರಸಾಲ ಯೋಜನೆ , ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಸಂತ್ವಾನ ಯೋಜನೆಗಳಡಿ ಸಾಲ ಸೌಲಭ್ಯ (Loans) ಪಡೆಯಲು ಅಲ್ಪಸಂಖ್ಯಾತರ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ  ಆನ್ ಲೈನ್  (Online) ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆರ್ಹ ಅಭ್ಯರ್ಥಿಗಳು ಅರ್ಜಿಗಳನ್ನು kmdconline.karnataka.gov.in ವೆಬ್ ಸೈಟ್ ಮೂಲಕ ಸೆಪ್ಟೆಂಬರ್ 17 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ಕೇಂದ್ರೀಯ ವಿಭಾಗ, ಕರ್ನಾಟಕ ಅಲ್ಪಸಂಖ್ಯಾಂತರ ಅಭಿವೃದ್ದಿ ನಿಗಮದ  ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ  ಆಗಸ್ಟ್ 27 ( ಕರ್ನಾಟಕ ವಾರ್ತೆ) : ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ   2026-27ನೇ ಸಾಲಿನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಅಭ್ಯರ್ಥಿಗಳಿಂದ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಶಿಷ್ಯವೇತನ ಅರ್ಜಿಗಳನ್ನು ಅಕಾಡೆಮಿಯ (facebook.com/karnatakasangeetanrutyaacdemy) ಪೇಸ್ ಬುಕ್  ಮೂಲಕ ಮಾಹಿತಿ ಪಡೆದು   ( sangeetanrityaacademy.karnataka.gov.in )  ವೆಬ್ ಸೈಟ್  ನ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ ಅಥವಾ ಅರ್ಜಿಯನ್ನು ಆಯಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ  ಪಡೆಯಬಹುದಾಗಿದೆ.

ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿರುವ ಪಠ್ಯ ಕ್ರಮದಂತೆ ತಮ್ಮ ಕಲಾ ಪ್ರದರ್ಶನವನ್ನು ಮೊಬೈಲ್/ವಿಡಿಯೋ ಮೂಲಕ ಚಿತ್ರೀಕರಿಸಿ, ಪೆನ್‌ಡ್ರೈವ್‌ನಲ್ಲಿ ಅಳವಡಿಸಬೇಕು. ಭರ್ತಿ ಮಾಡಿದ ಅರ್ಜಿ ಹಾಗೂ ಪೆನ್‌ಡ್ರೈವ್ ಅನ್ನು ನೋಂದಣಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು–560002 ಕಚೇರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸೆಪ್ಟೆಂಬರ್ 15 ರೊಳಗಾಗಿ  ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22215072 , karnatakasangeeta@gmail.com ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ ಆಗಸ್ಟ್ 27 (ಕರ್ನಾಟಕ ವಾರ್ತೆ) :  ಕರ್ನಾಟಕ ಜಾನಪದ  ಅಕಾಡೆಮಿ  ವತಿಯಿಂದ ಗಿರಿಜನ ಉಪಯೋಜನೆಯಡಿ ರಾಜ್ಯದ ನಾಲ್ಕು ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರಗಳ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು  16ರಿಂದ 40 ವರ್ಷ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು  https://janappada.karnataka.gov.in ಇಲ್ಲಿ ಪಡೆದು  ಭರ್ತಿ ಮಾಡಿದ ಅರ್ಜಿ ನಮೂನೆಯನ್ನು  ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು–560002 ಇಲ್ಲಿ  ಸೆಪ್ಟೆಂಬರ್ 16, 2026 ರೊಳಗೆ ತಲುಪುವಂತೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಜಾನಪದ ಅಕಾಡೆಮಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಮಾಹಿತಿಗಾಗಿ ದೂರವಾಣಿ  080-22215509 ಅಥವಾ ಆಕಾಡೆಮಿಯ  registrar.janapada@gmail.com  ಇ-ಮೇಲ್  ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿ.ಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ ಆಗಸ್ಟ್ 27 (ಕರ್ನಾಟಕ ವಾರ್ತೆ) :  ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆ ವತಿಯಿಂದ 2026 -27 ನೇ ಸಾಲಿನ PHD ಸಂಶೋಧನೆ ಕೈಗೊಳ್ಳುತ್ತಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ (ಜೆ.ಆರ್.ಎಫ್ ಮಾದರಿ ) ಪಿ.ಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆರ್ಹ ಅಭ್ಯರ್ಥಿಗಳು https://sevasindhu.karnataka.gov.in/sevasindhu/DepartmentServices   ಲಿಂಕ್ ನ ಮೂಲಕ ಅರ್ಜಿಗಳನ್ನು ಸೆಪ್ಟೆಂಬರ್ 31 2026 ರೊಳಗಾಗಿ  ಸಲ್ಲಿಸಬಹುದು. ಮಾಹಿತಿಗಾಗಿ ಜಿಲ್ಲೆಯ MIC ಹಾಗೂ ಜಿಲ್ಲಾ ಕಛೇರಿಯನ್ನು ಮತ್ತು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ ಸೈಟ್ https://dom.karnataka.gov.in  ಅಥವಾ ದೂರವಾಣಿ ಸಂಖ್ಯೆ 080-22866718 ಅನ್ನು ಸಂಪರ್ಕಿಸಬಹುದು ಎಂದು   ಬೆಂಗಳೂರು ನಗರ ಜಿಲ್ಲೆಯ ಅಲ್ಪಸಂಖ್ಯಾಂತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

Topics

ನೃತ್ಯ ಭಾರತೀಯ ಸಂಸ್ಕೃತಿಯ ಜೀವಂತ ಅಭಿವ್ಯಕ್ತಿ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಬೆಂಗಳೂರು: ಭರತನಾಟ್ಯವು (Bharathanatyam) ಕೇವಲ ಮನರಂಜನೆಯ (Entertainment) ಕಲೆಯಲ್ಲ, ಅದು ಭಾರತೀಯ...

ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 30.08.2026 SUNDAY.ಭಾನುವಾರ ಸಂವತ್ಸರ: ಪರಭಾವ SAMVATSARA : PARABHAVA. ಆಯಣ: ದಕ್ಷಿಣಾಯನ AYANA:...

ಜಕ್ಕೂರಿನ ರೈತ ಸಂತೆ ಮಾರ್ಗದಲ್ಲಿ ಮೆಗಾ ಸ್ವಚ್ಛತಾ ಅಭಿಯಾನ – 800ಕ್ಕೂ ಅಧಿಕ ವಿದ್ಯಾರ್ಥಿಗಳು

ಸ್ವಚ್ಛತೆ, ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆ ಹಾಗೂ ಸುಸ್ಥಿರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ...

ಗ್ರಾಮೀಣ ಜಲ ಆಸ್ತಿ ನಿರ್ವಹಣೆ: ಮೊಬೈಲ್, ವೆಬ್ ಆಪ್ ಲೋಕಾರ್ಪಣೆ

 ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ (Duplicate...

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ (Nepal) ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ (Flas Floods)ದಿಢೀರ್ ಪ್ರವಾಹ...

ನಿತ್ಯ ಪಂಚಾಂಗ 28.08.2026 FRIDAY ಶುಕ್ರವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 28.08.2026 FRIDAY.ಶುಕ್ರವಾರ ಸಂವತ್ಸರ: ಪರಾಭವ SAMVATSARA : PARABHAVA. ಆಯಣ:ದಕ್ಷಿಣಾಯನ AYANA: DAKSHINAYANA. ಋತು:...

ಸಹೋದರ – ಸಹೋದರಿಯ ಉತ್ತಮ ಸಂಬಂಧ ನಿರ್ಮಾಣ ಮಾಡುವ ರಕ್ಷಾ ಬಂಧನ

ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ನಿರ್ಮಾಣ ಮಾಡುವ ರಕ್ಷಾ ಬಂಧನ "ರಕ್ಷಾಬಂಧನದ...

ಕರ್ನಾಟಕ ರಾಜ್ಯ ಬರಹಗಾರರ ಸಂಘ: ಮೈಸೂರಿನಲ್ಲಿ ರಂಗ ಕಲರವ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ), ಹೂವಿನಹಡಗಲಿ (Hoovina Hadagali) ವತಿಯಿಂದ...

Related Articles