ಶ್ರೇಷ್ಠ ತೋಟಗಾರಿಕಾ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2026ರ ಡಿಸೆಂಬರ್ 23 ರಿಂದ 25 ರವರೆಗೆ “ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ” (Sustainable Horticulture Amidst Extreme Weather Conditions) ಎಂಬ ಪ್ರಮುಖ ಧ್ಯೇಯದೊಂದಿಗೆ ತೋಟಗಾರಿಕೆ ಮೇಳ (Agricultural Mela) ವನ್ನು ಹಮ್ಮಿಕೊಂಡಿದೆ.

ಈ ಮೇಳದ ಅಂಗವಾಗಿ ರಾಜ್ಯದ 25 ಜಿಲ್ಲೆಗಳಿಂದ ತಲಾ ಒಬ್ಬರಂತೆ ಸಾಧನೆ ಮಾಡಿರುವ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು 2026 ನೇ ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ.

ಆಸಕ್ತ ರೈತರು ವಿಶ್ವವಿದ್ಯಾಲಯದ ಅಧಿಕೃತ ವೆಬ್‍ಸೈಟ್ www.uhsbagalkot.karnataka.gov.in ಮೂಲಕ ಅರ್ಜಿ ನಮೂನೆಯನ್ನು (ಅನುಬಂಧ-1) ಡೌನ್‍ಲೋಡ್ ಮಾಡಿಕೊಳ್ಳಬಹುದು ಅಥವಾ ಆಯಾ ಜಿಲ್ಲೆಗಳಿಗೆ ಸಂಬಂಧಿಸಿದ ವಿಶ್ವವಿದ್ಯಾಲಯದ ತೋಟಗಾರಿಕೆ ಮಹಾವಿದ್ಯಾಲಯಗಳು / ಸಂಶೋಧನಾ ಕೇಂದ್ರಗಳ ಅಧಿಕಾರಿಗಳಿಂದ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 30, 2026 ರೊಳಗೆ ಆಯಾ ವಿಳಾಸಗಳಿಗೆ ತಲುಪಿಸಬೇಕು.

ಅರ್ಹತಾ ನಿಯಮಗಳು ಮತ್ತು ನಿಬಂಧನೆಗಳು:

ಅರ್ಜಿದಾರರು ಅಥವಾ ಅವರ ಕುಟುಂಬದ ಯಾವುದೇ ಸದಸ್ಯರು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕ ಸರ್ಕಾರದ ಯಾವುದೇ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಅಥವಾ ಐಸಿಎಆರ್ ಪ್ರಶಸ್ತಿಗಳನ್ನು ಪಡೆದಿರಬಾರದು. ಸಲ್ಲಿಕೆಯಾದ ಅರ್ಜಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ ಕಿರುಪಟ್ಟಿ ಮಾಡಲಾಗುವ ಮೂರು ಕ್ಷೇತ್ರಗಳಿಗೆ ಮಾತ್ರ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ. ಅಂತಿಮ ಆಯ್ಕೆಯು ವಿಶ್ವವಿದ್ಯಾಲಯದ ನಿಯಮ ಹಾಗೂ ಆಯ್ಕೆ ಸಮಿತಿಯ ತೀರ್ಮಾನಕ್ಕೆ ಬದ್ಧವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಡಾ. ವೆಂಕಟೇಶಲು, ವಿಸ್ತರಣಾ ನಿರ್ದೇಶಕರು, ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ ದೂರವಾಣಿ ಸಂಖ್ಯೆ: 9480696381 / 08354-230101, ಡಾ.ದೀಪಾ ತೇರದಾಳ ಸಹಾಯಕ ಪ್ರಾಧ್ಯಾಪಕರು ಮೊ.ಸಂ. 7899285785, ಶ್ರೀಪಾದ ವಿ, ಸಹಾಯಕ ಪ್ರಾಧ್ಯಾಪಕರು ಮೊ.ಸಂ. 9448344103, ಎಂ.ಎ.ವಾಸೀಮ್ ಸಹಾಯಕ ಪ್ರಾಧ್ಯಾಪಕರು ಮೊ.ಸಂ. 7259793847, ಡಾ.ಶಶಿಧರ ದೊಡ್ಡಮನಿ ಸಹಾಯಕ ಪ್ರಾಧ್ಯಾಪಕರು ಮೊ.ಸಂ. 7795674153 ಮತ್ತು ಪಿ.ಬಿ.ದೇಸೂರ, ಸಹಾಯಕ ಆಡಳಿತಾಧಿಕಾರಿ ಮೊ.ಸಂ. 8884612692 ಹಾಗೂ ವಿಶ್ವವಿದ್ಯಾಲಯದ ಇತರ ನೋಂದಾಯಿತ ಸಹಾಯಕ ಪ್ರಾಧ್ಯಾಪಕರನ್ನು ಅಥವಾ ಆಯಾ ಜಿಲ್ಲೆಯ ತೋಟಗಾರಿಕೆ ಮಹಾವಿದ್ಯಾಲಯದ ಹಿರಿಯ ವಿಜ್ಞಾನಿಗಳು, ಮುಖ್ಯಸ್ಥರು ಅಥವಾ ತೋಟಗಾರಿಕಾ ಉಪನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

ಪ್ರತಿಭಾವಂತ ಹಾಗೂ ನಾವೀನ್ಯತೆ ಅಳವಡಿಸಿಕೊಂಡ ತೋಟಗಾರಿಕಾ ರೈತರು ಈ ಸುವರ್ಣ ಅವಕಾಶವನ್ನು ಬಳಸಿಕೊಂಡು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆ ಬಾಗಲಕೋಟ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

Topics

ಬೆಂಗಳೂರಿನಲ್ಲಿ ೧೫ ರಂದು `ಜೋಳರಾಜನ ಕಥೆ’ ಕೃತಿ ಜನಾರ್ಪಣೆ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ...

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನವನ್ನು ಅಧಿಕೃತವಾಗಿ ಅಂತ್ಯಗೊಳಿಸದೆ ದಾಖಲೆಯ 88 ದಿನಗಳ...

ಬೆಂಗಳೂರು: ಕರ್ನಾಟಕ ಸರ್ಕಾರವು(Karnataka Government) ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ  ನವೆಂಬರ್...

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಕೃಷಿ ನಾವಿನ್ಯತೆಗಳು ಹಾಗೂ ಬರ...

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಭಾರತದ ಪ್ರಥಮ ಶಿಕ್ಷಣ ಸಚಿವರಾದ...

ಇ-20 ಎಥನಾಲ್ ಪ್ರಮಾಣ ಪರೀಕ್ಷೆ – ಕರ್ನಾಟಕ ಸರ್ಕಾರವು ಗ್ರಾಹಕರ ಹಿತರಕ್ಷಣೆಗೆ ಬದ್ಧ : ಸಚಿವ ರಿಜ್ವಾನ್ ಅರ್ಷದ್ 

ಬೆಂಗಳೂರು: ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣಕ್ಕೆ (E20) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪರೀಕ್ಷಾ...

ಬೆಂಗಳೂರು: ಭಾರತದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ಕಾಮನ್ವೆಲ್ತ್ ಮಹಿಳಾ ಸಂಸದೀಯರ ಭಾರತ...

ನ್ಯೂಜಿಲೆಂಡ್ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮೇಲೆ ಟೀಂ ಇಂಡಿಯಾ ಕಣ್ಣು: ಹ್ಯಾಮಿಲ್ಟನ್ ಪಂದ್ಯಕ್ಕೆ ಮಳೆ ಭೀತಿ!

ಹ್ಯಾಮಿಲ್ಟನ್: ನ್ಯೂಜಿಲೆಂಡ್(New Zealand) ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡ(Cricket Team) ಇದೀಗ...

Related Articles