ಹೆಬ್ಬಾಳ ಜಂಕ್ಷನ್‌- ಯುಎಎಸ್ ಕ್ವಾರ್ಟರ್ಸ್ ಸುರಂಗ ಮಾರ್ಗಕ್ಕೆ 28-6-2026 ಭಾನುವಾರ ಭೂಮಿಪೂಜೆ

ಬೆಂಗಳೂರು: ಜೂ. 27 ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಹೆಬ್ಬಾಳ ಜಂಕ್ಷನ್ (Hebbal Junction) ನಿಂದ ಯುಎಎಸ್ ಕ್ವಾರ್ಟರ್ಸ್ (UAS Quarters) ವರೆಗಿನ ಸುರಂಗ ರಸ್ತೆ ನಿರ್ಮಾಣಕ್ಕೆ (Construction of tunnel road) ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ (DK Shivakumar) ಅವರು ಭಾನುವಾರ ಭೂಮಿಪೂಜೆ ನೆರವೇರಿಸಲಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಹೆಬ್ಬಾಳ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಈ ವಿಚಾರ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ 9.30 ಕ್ಕೆ ಹೆಬ್ಬಾಳ ಜಂಕ್ಷನ್ ನಲ್ಲಿ ಮುಖ್ಯಮಂತ್ರಿಗಳು ಯೋಜನೆಗೆ ಚಾಲನೆ ನೀಡಲಿದ್ದಾರೆ.
ಮೇಕ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್ ವರೆಗೆ ಸಾಕಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಇದರಿಂದ ವಿಮಾನ ನಿಲ್ದಾಣ ಸೇರಿದಂತೆ ಇತರೆಡೆಗೆ ಹೋಗುವುದು ಕಷ್ಟವಾಗುತ್ತಿತ್ತು.
ಈ ಸಮಸ್ಯೆ ನಿವಾರಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುರಂಗ ರಸ್ತೆ ನಿರ್ಮಾಣಕ್ಕೆ ನಿರ್ಧರಿಸಿದೆ ಎಂದರು.
ವಿಶೇಷತೆಗಳು
ಸುರ0ಗ ರಸ್ತೆಯ ಉದ್ದ : 2.228 ಕಿಲೋಮೀಟರ್
ಹೆಬ್ಬಾಳ ಜಂಕ್ಷನ್ ನಿಂದ ಯುಎಎಸ್ ಸಿಬ್ಬಂದಿ ಕ್ವಾರ್ಟರ್ಸ್ ವರೆಗೆ.
ಆಳ; ಸುಮಾರು 60 ಅಡಿ
6 ಪಥದ ರಸ್ತೆ
ತಲಾ ಒಂದು ಮಾರ್ಗ ತಲಾ 3.5 ಮೀಟರ್ ಅಗಲ
ಒಟ್ಟು ಅಂದಾಜು ವೆಚ್ಚ: 1139 ಕೋಟಿ ರುಪಾಯಿ
18 ತಿಂಗಳಲ್ಲಿ ಕಾಮಗಾರಿ ಪೂರ್ಣ
ಯಾವುದೇ ಖಾಸಗಿ ಜಾಗದ ಸ್ವಾಧೀನವಿಲ್ಲ
*ನಾಗರಿಕರಿಗೆ ಉಪಯೋಗ*
ಕಟ್ಟುನಿಟ್ಟಾಗಿ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸು ವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಬೈರತಿ ಸುರೇಶ್ ತಿಳಿಸಿದರು.ವಿರೋಧ ಮಾಡಲೆಂದೇ ವಿರೋಧ ಪಕ್ಷದವರು ವಿರೋಧಿಸುತ್ತಾರೆ. ಆದರೆ, ಲಕ್ಷಾಂತರ ಜನರ ಉಪಯೋಗಕ್ಕಾಗಿ ಈ ಯೋಜನೆ ಜಾರಿಗೆ ತರುತ್ತಿದ್ದೇವೆ ಎಂದರು.
ಹೊರೆಯಾಗದ0ತೆ ಬಸ್ ಪ್ರಯಾಣ ದರ ಏರಿಕೆ
ದಿನದಿಂದ ದಿನಕ್ಕೆ ಪೆಟ್ರೋಲ್, ಡೀಸೆಲ್ ದರಗಳು ಹೆಚ್ಚಾಗುತ್ತಿವೆ. ಎಲ್ಲಾ ಸಾರಿಗೆ ನಿಗಮಗಳಿಗೆ ಸುಮಾರು 5 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.
ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆದರೆ, ಸರ್ಕಾರಕ್ಕೆ ಇಲಾಖೆಯಿಂದ ಇದುವರೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದರು.
ಮುಂದಿನ ಸಂಪುಟ ಸಭೆಗಳಲ್ಲಿ ಈ ಬಗ್ಗೆ ಪ್ರಸ್ತಾವನೆ ಮಂಡಿಸಲಾಗುತ್ತದೆ. ಮುಖ್ಯಮಂತ್ರಿಗಳು ಮತ್ತು ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಆದಾಗ್ಯೂ, ಜನ ಸಾಮಾನ್ಯರಿಗೆ ಹೊರೆ ಆಗದ ರೀತಿಯಲ್ಲಿ ಪ್ರಯಾಣ ದರ ಹೆಚ್ಚಳ ಮಾಡುವ ಚರ್ಚೆಗಳು ನಡೆದಿವೆ ಎಂದು ಅವರು ಸ್ಪಷ್ಟಪಡಿಸಿದರು.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles