ಬಹುಭಾಷಾ ನಟ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಡುತ್ತಿಲ್ಲ: ಪ್ರಕಾಶ್ ರೈಗೆ ಕುಟುಕಿದ ಎಂಬಿ ಪಾಟೀಲ್‌

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ   ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಆದ್ದರಿಂದ ಅವರು ಬೇರೆಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌  ಕುಟುಕಿದ್ದಾರೆ.

ಮಂಗಳವಾರ ಇಲ್ಲಿನ‌ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1,282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ. ಪಕ್ಕದ ಆಂಧ್ರ ಪ್ರದೇಶದಲ್ಲಿ  ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೇ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ. ಅಲ್ಲದ, ಆಂಧ್ರದಲ್ಲಿ ಬೇರೆಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಪ್ರಕಾಶ್ ರೈಗೆ ಇವೆಲ್ಲ ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿ ಕಿಡಿಕಾರಿದರು.

ಇತ್ತ ತಮಿಳುನಾಡಿನ  ಹೊಸೂರು ನಮ್ಮಿಂದ ಕೇವಲ 50 ಕಿ.ಮೀ. ದೂರದಲ್ಲಿದೆ. ಅಲ್ಲಿನ ಸರ್ಕಾರ ಈಗ ಆ ಪ್ರದೇಶವನ್ನು ಕೇಂದ್ರೀಕರಿಸಿ ಕೈಗಾರಿಕಾ ಬೆಳವಣಿಗೆಯನ್ನು ವಿಸ್ತರಿಸುತ್ತಿದೆ. ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ನಿರ್ಮಿಸಲು ಮುಂದಾಗಿದೆ. ಇದಕ್ಕೆಲ್ಲ ಅದೂ ಸಹ ಅಗ್ಗದ ದರದಲ್ಲಿ ಭೂಮಿ ಕೊಡುತ್ತಿದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ ಉದ್ಯಮ ನಡೆಸುತ್ತಿರುವವರಿಗೆ ಬೆಂಗಳೂರು ಬರೀ ಆಶ್ರಯತಾಣವಾಗಿ ಕಾಣುತ್ತಿದೆ. ಆಂಧ್ರದ ಯೋಜನೆ ಗೆದ್ದರೆ, ನಮ್ಮ ರಕ್ಷಣಾ ಮತ್ತು ಏರೋಸ್ಪೇಸ್ ಕಂಪನಿಗಳು ಅಲ್ಲಿಗೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಆಗುವ ನಷ್ಟವನ್ನು ಅಂದಾಜು ಮಾಡಲೂ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕವು  ದೇಶದ ರಕ್ಷಣೆ ಮತ್ತು ವೈಮಾಂತರಿಕ್ಷ ವಹಿವಾಟಿನಲ್ಲಿ ಶೇಕಡ 65ರಷ್ಟು ಪಾಲು ಹೊಂದಿದ್ದು, ಈ ವಲಯದಲ್ಲಿನ ನಮ್ಮ ಕಾರ್ಯ ಪರಿಸರವು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿದೆ. ನಮ್ಮಲ್ಲಿ ಈ ವಲಯದ ಎಚ್ಎಎಲ್, ಸ್ಯಾಫ್ರಾನ್, ಬೋಯಿಂಗ್, ಏರ್ ಬಸ್, ಕಾಲಿನ್ಸ್, ಲಾಕ್ ಹೀಡ್ ಮಾರ್ಟಿನ್ ಮುಂತಾದ ದೈತ್ಯ ಕಂಪನಿಗಳಿವೆ. ದೇವನಹಳ್ಳಿಯಲ್ಲಿರುವ ವಿಮಾನ ನಿಲ್ದಾಣದ ಪಕ್ಕದಲ್ಲೇ ಏರೋಸ್ಪೇಸ್ ಪಾರ್ಕ್ ಇದೆ. ಇದಕ್ಕೆ ಮತ್ತಷ್ಟು ಬಲ ತುಂಬಲೆಂದೇ ಈಗ ಅದರ ಸನಿಹದಲ್ಲೇ ಉದ್ದೇಶಿತ ಪಾರ್ಕ್ ಸ್ಥಾಪಿಸುವ ಚಿಂತನೆ ಇದೆ. ಸಂತ್ರಸ್ತ ರೈತರಿಗೆ 2013ರ ಭೂಸ್ವಾಧೀನ ಕಾಯ್ದೆಯ ಪ್ರಕಾರವೇ ನ್ಯಾಯಯುತ ಪರಿಹಾರ ಕೊಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles