ಬೆಂಗಳೂರು: ಚಿತ್ರರಂಗಾಸಕ್ತ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ 2026 ನೇ ನವೆಂಬರ್ 14 ರಿಂದ 16 ರವರೆಗೆ ಮೂರು ದಿನಗಳ ಕಾಲ ‘ಚಲನಚಿತ್ರ ನಿರ್ಮಾಣ ತರಬೇತಿ ಕಾರ್ಯಾಗಾರ’ವನ್ನು(Film Production Training Workshop) ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿರುವ ಪ್ರೆಸಿಡೆನ್ಸಿ ಶಾಲೆ ಪಕ್ಕ(Beside Presidency School) ಕರ್ನಾಟಕ ಚಲನಚಿತ್ರ ಅಕಾಡೆಮಿಯ ಆವರಣದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಾಗಾರದ ಉದ್ಘಾಟನೆಯನ್ನು ನವೆಂಬರ್ 14 ರಂದು ಬೆಳಿಗ್ಗೆ 10.30 ಗಂಟೆಗೆ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಇದೇ ವೇಳೆ, ಅಕಾಡೆಮಿಯ ಮಹತ್ವದ ಯೋಜನೆಯಾದ ಕನ್ನಡ ಚಿತ್ರರಂಗ ಕೇಂದ್ರಿತ ಸಿನಿಮಾ ಆರ್ಕೈವ್ ವೆಬ್ ಪೋರ್ಟಲ್ ‘ಸಿನಿಯಾನ’ ಕೂಡ ಲೋಕಾರ್ಪಣೆಗೊಳ್ಳಲಿದೆ.
ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಕೆ. ಗೋಪಾಲಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ರಾಜ್ಯ ಸಚಿವರಾದ ಕುಮಾರಿ ಶೋಭಾ ಕರಾಂದ್ಲಾಜೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಬಮುಲ್ ಅಧ್ಯಕ್ಷರಾದ ಶ್ರೀ ಡಿ.ಕೆ. ಸುರೇಶ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದಲ್ ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಡಾ. ಸಾಧು ಕೋಕಿಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀ ಮಂಜುನಾಥ್ ಜೆ. ಐ.ಎ.ಎಸ್. ಹಾಗೂ ಆಯುಕ್ತರಾದ ಶ್ರೀ ಅನುಚೇತ್ ಎಂ.ಎನ್. ಐ.ಪಿ.ಎಸ್ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಸದಸ್ಯರು ಉಪಸ್ಥಿತಿರಿರುವರು.
ಕರ್ನಾಟಕ ಚಲನಚಿತ್ರ ಅಕಾಡೆಮಿಯ ರಿಜಿಸ್ಟ್ರಾರ್ ಶ್ರೀ ವಿನೋದ್ ಚಂದ್ರ ಅವರು ಸ್ವಾಗತಿಸಲಿರುವರು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

