ಕಾಂಗ್ರೆಸ್ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಭ್ರಮೆ

* ರೈತರಿಗೆ ಬಿಜೆಪಿ ಪರಿಹಾರ ನೀಡಿದಂತೆ ಕಾಂಗ್ರೆಸ್ ನೀಡಲಿ
* ಸಂಪೂರ್ಣವಾಗಿ ಹದಗೆಟ್ಟ ರಾಜ್ಯದ ಹಣಕಾಸಿನ ಸ್ಥಿತಿ
* ಗ್ಯಾರಂಟಿ ಸಮಿತಿಗಳಿಗೆ ಜನರ ತೆರಿಗೆ ಹಣ ಬಳಕೆ ಸರಿಯಲ್ಲ
* ಕಾರ್ಯಕರ್ತರ ಖುಷಿಪಡಿಸಲು ಜನರ ದುಡ್ಡು ಬಳಸದಿರಿ
* ಅರಾಜಕತೆ ಸೃಷ್ಟಿಸಲು ಮುಂದಾಗಿರುವ ರಾಹುಲ್ ಗಾಂಧಿ
* ಶಿಕಾರಿಪುರದಲ್ಲಿ ಕಾಂಗ್ರೆಸ್ ಗೆದ್ದು ತೋರಿಸಲಿ

ಬೆಂಗಳೂರು: ಮನುಷ್ಯತ್ವವೇ ಇಲ್ಲದ ರಾಜ್ಯದ ಕಾಂಗ್ರೆಸ್ ಸರ್ಕಾರ ಬರದಿಂದ ಸಂಕಷ್ಟದಲ್ಲಿರುವ ಅನ್ನದಾತರಿಗೆ ಭಿಕ್ಷುಕರಿಗೆ ನೀಡಿದಂತೆ ಕನಿಷ್ಠ ಮೊತ್ತವಾದ ಎರಡೂವರೆ ಸಾವಿರ ಪರಿಹಾರ ಘೋಷಣೆ ಮಾಡಿ ಕೈಕಟ್ಟಿ ಕೂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸರ್ಕಾರವು ರೈತರ ಬದುಕಿನಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ. ದಿವಾಳಿಯಾಗಿರುವ ಸರ್ಕಾರ ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಲಿ ಆಗ್ರಹಿಸಿದರು. ತೀವ್ರ ಬರದಿಂದ ಕಂಗೆಟ್ಟಿರುವ ರೈತರಿಗೆ ಆತ್ಮಸ್ಥೈರ್ಯ ತುಂಬಬೇಕಾದ ಸರ್ಕಾರ, ನಿರ್ಲಕ್ಷ್ಯ ಮಾಡಿತು. ಅನ್ನದಾತರು ಇಂದು ಆತ್ಮಹತ್ಯೆಯ ದಾರಿ ಹಿಡಿದಿದ್ದಾರೆ ಎಂದರು.

ಸಿಎಂ ಉಡಾಫೆಯ ಉತ್ತರ…

ಕಸ್ತೂರಿರಂಗನ್ ವರದಿ ಹಾಗೂ ಬರಗಾಲದ ಕುರಿತು ಚರ್ಚಿಸಲು ಇತ್ತೀಚೆಗೆ ಮುಖ್ಯಮಂತ್ರಿಗಳು ವಿಶೇಷ ಅಧಿವೇಶನ ಕರೆದಿದ್ದರು. ನಾಡಿನ ರೈತರ ಸಂಕಷ್ಟಕ್ಕೆ ಸಿಎಂ ಪರಿಹಾರ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಇತರ ಮುಖ್ಯಮಂತ್ರಿಗಳು ಪರಿಹಾರ ನೀಡಿದ್ದನ್ನು ವಿವರಿಸಿದೆವು. ಹೆಕ್ಟೇರ್‍ಗೆ ಐವತ್ತು ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದೆವು. ಮಹಾರಾಷ್ಟ್ರದ ಎನ್‍ಡಿಎ ಸರ್ಕಾರ ಹೇಗೆ ರೈತರ ಸಾಲ ಮನ್ನಾ ಮಾಡಿತು ಎಂಬುದನ್ನು ತಿಳಿಸಿದೆವು. ರಾಜ್ಯದ ಅನ್ನದಾತರಿಗೆ ಸಿಎಂ ಸೂಕ್ತ ಪರಿಹಾರ ಕೊಡದೆ ಉಡಾಫೆ ಮಾತುಗಳನ್ನಾಡಿ ಕೇವಲ ಎರಡೂವರೆ ಸಾವಿರ ಘೋಷಣೆ ಮಾಡಿ ಕೈಚೆಲ್ಲಿ ಕೂತಿದ್ದಾರೆ. ಸರ್ಕಾರದ ಇಂತಹ ಧೋರಣೆಯನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಹಣಕಾಸಿನ ಸ್ಥಿತಿಗತಿ ಶ್ವೇತಪತ್ರ ಹೊರಡಿಸಲಿ…

ಚುನಾವಣೆಗೆ ಮೊದಲು ಗ್ಯಾರಂಟಿಗಳು ಉಚಿತ ಉಚಿತ ಎಂದು ಹೇಳಿಕೊಂಡಿದ್ದರು. ಆದರೆ ಈಗ ಗ್ಯಾರಂಟಿಗಳಿಂದ ಸರ್ಕಾರ ನಡೆಸಲು ಕಷ್ಟವಾಗಿದೆ, ಹಣಕಾಸಿನ ತೊಂದರೆ ಎದುರಾಗಿದೆ ಎಂದು ಸ್ವತಂ ಸಿಎಂ ಮತ್ತು ಹಲವು ಸಚಿವರು ಹೇಳಿಕೊಂಡಿದ್ದಾರೆ. ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ ಸಾವಿರಾರು ಕೋಟಿ ಬಾಕಿ ಇದೆ ಎಂದು ಸಚಿವರೇ ಬಾಯಿ ಬಿಟ್ಟಿದ್ದಾರೆ. ಸಿಎಂ ನೋಡಿಕೊಳ್ಳುವ ಆರ್ಥಿಕ ಇಲಾಖೆ ಪತ್ರ ಸಹ ಇತ್ತೀಚೆಗೆ ಬಹಿರಂಗವಾಗಿದೆ. ರಾಜ್ಯದ ಹಣಕಾಸಿನ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆ. ಹಣಕಾಸಿನ ಸ್ಥಿತಿಗತಿ ಬಗ್ಗೆ ಸಿಎಂ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.
ನಾವು ಶ್ವೇತಪತ್ರದ ಬಗೆಗೆ ಹಲವು ಬಾರಿ ಆಗ್ರಹಿಸಿದ್ರೂ ಸರ್ಕಾರ ಹಗುರವಾಗಿ ಪರಿಗಣಿಸಿದೆ. ಆರ್ಥಿಕ ಸ್ಥಿತಿ ಸದೃಢವಾಗಿದೆ, ಬಿಜೆಪಿಯವರಿಗೆ ಬೇರೆ ಕೆಲಸ ಇಲ್ಲ ಎಂದು ಹೇಳುತ್ತಾರೆ ಎಂದು ಆರೋಪಿಸಿದರು.

ತೆರಿಗೆದಾರರ ಹಣ ಕಾರ್ಯಕರ್ತರ ಸಾಕಲು ಬಳಕೆ….

ವಿಶೇಷಚೇತನರಿಗೆ, ವೃದ್ಧರಿಗೆ ಮಾಸಾಶನ ಕೊಡಲು ಈ ಸರ್ಕಾರಕ್ಕೆ ಆಗ್ತ ಇಲ್ಲ. ಬಡವರಿಗೆ ಮನೆ ಕೊಟ್ಟಿಲ್ಲ. ಗಂಗಾ ಕಲ್ಯಾಣ ಯೋಜನೆ ನೀಡಿಲ್ಲ. ಆ ಮಟ್ಟಿಗೆ ಆರ್ಥಿಕ ಸ್ಥಿತಿ ಬಂದು ತಲುಪಿದೆ. ಆದರೆ ಗ್ಯಾರಂಟಿ ಅನುμÁ್ಠನ ಸಮಿತಿ ಅಧ್ಯಕ್ಷರಿಗೆ ಕೋಟ್ಯಂತರ ಹಣ ವೆಚ್ಚ ಮಾಡಲಾಗುತ್ತಿದೆ. ಅವರ ಕಚೇರಿ, ಸಾರಿಗೆಗೆ ಸಹ ಹಣ ವ್ಯಯಿಸಲಾಗುತ್ತಿದೆ. ತೆರಿಗೆದಾರರ ಹಣವನ್ನು ಪಕ್ಷದ ಕಾರ್ಯಕರ್ತರನ್ನು ಸಾಕಲು ಬಳಸುತಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪಿಸಿದರು.

ಭಾರತ್ ಜೋಡೊ ಸಂಘಗಳಿಗೆ ಸಹ ತೆರಿಗೆದಾರರ ಹಣವನ್ನು ಲೂಟಿ ಮಾಡುತ್ತಿದ್ದಾರೆ. ಈ ಸಂಘಗಳಿಗೆ ಗ್ಯಾರಂಟಿ ಸಮಿತಿ ಅಧ್ಯಕ್ಷರು ನೀಡುವ ಕಾಂಗ್ರೆಸ್ ಕಾರ್ಯಕರ್ತರನ್ನು ಸದಸ್ಯರನ್ನಾಗಿ ಮಾಡಿ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರು ಜಿಲ್ಲಾಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ. ಸಾರ್ವಜನಿಕರು ಸದಸ್ಯರ ಪಟ್ಟಿ ನೀಡಿದರೆ ಪರಿಗಣಿಸಬೇಡಿ ಎಂದೂ ಹೇಳಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕಾರ್ಯಕರ್ತರನ್ನು ಖುಷಿಪಡಿಸಲು ಜನರ ತೆರಿಗೆ ಹಣವನ್ನು ಬಳಸಲು ಮುಂದಾಗಿದ್ದಾರೆ ಎಂದು ದೂರಿದರು.
ಭೀಕರ ಬರದಲ್ಲಿ ತ್ರಿಫೇಸ್ ವಿದ್ಯುತ್ ಅನ್ನು ಸರ್ಕಾರ ನೀಡಿಲ್ಲ. ವಿದ್ಯುತ್ ಖರೀದಿ ಸಹ ಮಾಡಿಲ್ಲ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಗ್ಯಾರಂಟಿ ಸಮಿತಿ ಅಧ್ಯಕ್ಷರಿಗೆ ಜನರ ತೆರಿಗೆ ಹಣವನ್ನು ಬಳಸಬಾರದು ಎಂದರು.

ಬೂತ್ ವಿಜಯ ಸಂಕಲ್ಪ ಯಾತ್ರೆ…
ಮೋದಿ ಜೀ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಸ್ಮರಿಸಲು ದೇಶದಾದ್ಯಂತ ಸೇವಾ ಸಂಕಲ್ಪ ನಡೆಯುತ್ತಿದೆ. ರಾಜ್ಯದ ವಿವಿಧ ಕ್ಷೇತ್ರಗಳಿಗೆ ಪ್ರವಾಸ ಮಾಡಲಾಗುತ್ತಿದೆ. ಸೇವಾ ಸಂಕಲ್ಪ ಅಭಿಯಾನದ ಜೊತೆಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಬೂತ್ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ. ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರಿಗೆ ತಿಳಿಸಲಾಗುವುದು. ಕಾರ್ಯಕರ್ತರನ್ನು ಸಜ್ಜುಗೊಳಿಸಲು ರಾಜ್ಯದ ಎಲ್ಲಾ ಕ್ಷೇತ್ರಗಳಿಗೆ ಮೂರು ತಿಂಗಳಲ್ಲಿ ಭೇಟಿ ನೀಡಲಾಗುವುದು ಎಂದು ಬಿ.ವೈ. ವಿಜಯೇಂದ್ರ ಅವರು ವಿವರಿಸಿದರು.

ಅರಾಜಕತೆ ಸೃಷ್ಟಿಗೆ ಕಾಂಗ್ರೆಸ್ ಯತ್ನ…

ಸತತ ಸೋಲು ಕಾಣುತ್ತಿರುವ ರಾಹುಲ್ ಗಾಂಧಿ ಹಾಗೂ ದೇಶದ ಜನರ ವಿಶ್ವಾಸ ಗಳಿಸಲು ವಿಫಲವಾಗಿರುವ ಕಾಂಗ್ರೆಸ್ ಪಕ್ಷ ಅರಾಜಕತೆ ಸೃಷ್ಟಿ ಮಾಡಲು ಕೈ ಹಾಕಿದೆ. ಚುನಾವಣಾ ಆಯೋಗ ಮತ್ತು ಮುಖ್ಯ ಚುನಾವಣಾ ಆಯುಕ್ತ(ಸಿಇಸಿ) ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಮೋದಿ ಅವರ ತಾಳಕ್ಕೆ ಸಿಇಸಿ ಕುಣಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಎಂ ಮತ್ತು ಕಾಂಗ್ರೆಸ್ ಯಾಕೆ ಇಂತಹ ಹತಾಶ ಭಾವನೆ ಎಂದು ತಿಳಿಯುತ್ತಿಲ್ಲ. ಪಂಜಾಬ್, ಕೇರಳ, ತಮಿಳುನಾಡು, ಹಿಮಾಚಲ ಪ್ರದೇಶದಲ್ಲಿ ಬೇರೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದಿವೆ. ಅಲ್ಲದೆ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿವೆ. ಆಗ ಇವರು ಆರೋಪ ಮಾಡುವುದಿಲ್ಲ ಎಂದು ಟೀಕಿಸಿದರು.

ಅಧಿಕಾರಕ್ಕೆ ಬರುವುದು ಕಾಂಗ್ರೆಸ್ ಭ್ರಮೆ…

ಸಾಂವಿಧಾನಿಕ ಸಂಸ್ಥೆಗಳ ಮೇಲೂ ರಾಹುಲ್ ಗಾಂಧಿ ಆರೋಪ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಹಾಳು ಮಾಡುವ, ಸಾಂವಿಧಾನಿಕ ಸಂಸ್ಥೆಗಳ ವರ್ಚಸ್ಸಿಗೆ ಮಸಿ ಬಳಿಯುವ ದುಸ್ಸಾಹಸಕ್ಕೆ ಕೈ ಹಾಕಬೇಡಿ. ತಾಖತ್ ಇದ್ದರೆ ಜನರ ವಿಶ್ವಾಸ ಗಳಿಸಿ. ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದು ಕಾಂಗ್ರೆಸ್‍ಗೆ ಭ್ರಮೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರಿಗೆ ಗುರಿ ಇರುವುದು ಚುನಾವಣಾ ಆಯೋಗ ಅಲ್ಲ. ಮೋದಿ ಜೀ ಅವರ ಗುರಿಯಾಗಿದೆ. ಮೋದಿ ಜೀ ಅವರು ಇಷ್ಟು ವರ್ಷ ಕಳಂಕರಹಿತವಾಗಿ ಕೆಲಸ ಮಾಡುತ್ತಿದ್ದಾರೆ. ಅದನ್ನು ಕಾಂಗ್ರೆಸ್‍ಗೆ ಸಹಿಸಲು ಆಗುತ್ತಿಲ್ಲ. ಕಾಂಗ್ರೆಸ್‍ನವರು ಮುಠ್ಠಾಳರು ಎಂದು ಜನರಿಗೆ ತಿಳಿದಿದೆ ಎಂದು ಹೇಳಿದರು.

ಬಿ.ಕೆ.ಹರಿಪ್ರಸಾದ್ ಅವರಿಗೆ ಸ್ವಾಗತ…

ಬಳ್ಳಾರಿ ಚಲೋ ಪಾದಯಾತ್ರೆಯಿಂದ ಪ್ರೇರಣೆ ಪಡೆದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು, ಶಿಕಾರಿಪುರದಿಂದ ಪಾದಯಾತ್ರೆ ಆರಂಭಿಸಲು ಮುಂದಾಗಿದ್ದಾರೆ. ಅವರಿಗೆ ಸ್ವಾಗತ ಮಾಡುವೆ. ಶಿಕಾರಿಪುರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯವನ್ನು ಹರಿಪ್ರಸಾದ್ ಅವರು ನೋಡಿಕೊಂಡು ಹೋಗಲಿ. ಅವರ ಪಕ್ಷದ ಮಾಜಿ ಅಧ್ಯಕ್ಷರ ಕ್ಷೇತ್ರಗಳ ಬಗ್ಗೆಯೂ ತಿಳಿಯಲಿ. ಶಿಕಾರಿಪುರ ಯಡಿಯೂರಪ್ಪ ಅವರ ಹೋರಾಟದ ನೆಲ ಎಂದು ಹೇಳಿದರು.

ಸವಾಲು ಸ್ವೀಕರಿಸಿದ್ದೇನೆ…

ಶಿಕಾರಿಪುರದಲ್ಲಿ ಕಾಂಗ್ರೆಸ್ ಗೆಲುವಿಗೆ ಮುಂದಾಗಿದೆ. ಈ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಬಿ.ಕೆ.ಹರಿಪ್ರಸಾದ್ ಅವರು ಜೀವನದಲ್ಲಿ ಒಂದೂ ಚುನಾವಣೆ ಗೆದ್ದಿಲ್ಲ. ಅವರ ಹಿನ್ನೆಲೆ ತಿಳಿದಿದೆ. ಅವರಿಗೆ ಪ್ರಜಾಪ್ರಭುತ್ವದ ಬಗ್ಗೆ ಅವರಿಗೆ ವಿಶ್ವಾಸ ಇಲ್ಲ. ಅವರು ಶಿಕಾರಿಪುರಕ್ಕೆ ಬರಲಿ. ಯಶಸ್ಸು ಸಿಗಲಿ ಎಂದು ಹಾರೈಸಿದರು.

ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಬಿ.ಎ. ಬಸವರಾಜ, ಸಂಸದ ಪಿ.ಸಿ. ಮೋಹನ್, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಉಪಸ್ಥಿತರಿದ್ದರು.

 

Hot this week

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

ಹೆಜ್ಜೆಯಲ್ಲಿ ಶಾಸ್ತ್ರ, ಭಾವದಲ್ಲಿ ಭಕ್ತಿ: ‘ಸಮರ್ಪಣ್’ನಲ್ಲಿ ಶೀತಲ್ ಹೇಮಂತ್ ನೃತ್ಯ

ಅ. 3ರಂದು ವಿದುಷಿ ಶೀತಲ್ ಹೇಮಂತ್ ಅವರಿಂದ ವಿಶೇಷ ಭರತನಾಟ್ಯ ನೃತ್ಯ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

Topics

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

ಅಭಿನಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಸದಾ ಬ್ಯುಸಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Ex.CM.Siddaramayya) ಈಗ ನಟನೆಯಲ್ಲಿ(Acting) ತೊಡಗಿಕೊಂಡಿದ್ದಾರೆ. ಪತ್ರಕರ್ತರಾಗಿ...

ವಿ.ಕುಮಾರ್ ನಿರ್ದೇಶನದ ಹದಿನೆಂಟು ಎಕರೆ ಸಿನಿಮಾ ಲಕ್ಕಪ್ಪ

ಈ ಹಿಂದೆ ಗಾಯಿತ್ರಿ, ಪ್ರೀತಿಯ ಹುಚ್ಚ ಚಿತ್ರಗಳನ್ನು ನಿರ್ದೇಶಿಸಿದ್ದ ವಿ.ಕುಮಾರ್ (ರಾಘವ...

Related Articles