“ಹಮಾರಾ ಸಂವಿಧಾನ – ಹಮಾರಾ ಸ್ವಾಭಿಮಾನ” (ನಮ್ಮ ಸಂವಿಧಾನ – ನಮ್ಮ ಸ್ವಾಭಿಮಾನ) ಎಂಬ ಧ್ಯೇಯವಾಕ್ಯದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ.
ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಗಳಾದ ಗೌರವಾನ್ವಿತ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು “ದಿ ಲಿವಿಂಗ್ ಕಾನ್‍ಸ್ಟಿಟ್ಯೂಷನ್: ಎ ಜರ್ನಿ ಆಫ್ ಎವಲ್ಯೂಷನ್, ಇಂಟರ್‍ಪ್ರಿಟೇಶನ್ ಅಂಡ್ ಟ್ರಾನ್ಸ್‍ಫರ್ಮೇಶನ್” ಎಂಬ ವಿಷಯದ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ. ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕೆಎಸ್‍ಎಲ್‍ಎಸ್‍ಎ ಮುಖ್ಯಸ್ಥರಾದ ಗೌರವಾನ್ವಿತ ನ್ಯಾಯಮೂರ್ತಿ ವಿಭು ಬಖ್ರು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕೆಎಸ್‍ಎಲ್‍ಎಸ್‍ಎ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ಹೈಕೋರ್ಟ್ ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್. ದೇವದಾಸ್ ಅವರು ಉಪಸ್ಥಿತರಿರಲಿದ್ದಾರೆ.
ರಾಜ್ಯ ಮಟ್ಟದ ಅರಣ್ಯೀಕರಣ ಸಮಿತಿಯ ಅಧ್ಯಕ್ಷರು ಹಾಗೂ ನಿವೃತ್ತ ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ರಾಜ್ಯ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ರಾಜಣ್ಣ ಆರ್. ಹಾಗೂ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ನ್ಯಾಯಮೂರ್ತಿ ಅನು ಶಿವರಾಮನ್ ಅವರು ಸಂವಿಧಾನದ ಪೀಠಿಕೆಯನ್ನು ಬೋಧಿಸಲಿದ್ದು, ಮಾಜಿ ಸಿಜೆಐ ಸಂಜೀವ್ ಖನ್ನಾ ಅವರು ರಾಜ್ಯದಲ್ಲಿ ಅರಣ್ಯೀಕರಣ ಮತ್ತು ಕೆರೆಗಳ ಪುನಶ್ಚೇತನಕ್ಕೆ ಸಂಬಂಧಿಸಿದ “ವನಧಾರ” (VANADHARA) ಆನ್‍ಲೈನ್ ಪೋರ್ಟಲ್‍ಗೆ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

