ಬೈಕ್ ಟ್ಯಾಕ್ಸಿ ಸಂಪೂರ್ಣ ಸ್ಥಗಿತ: ಹೈಕೋರ್ಟ್

ಬೆಂಗಳೂರು: ಓಲಾ, ಉಬರ್, ರ್ಯಾಪಿಡೋ ಸೇರಿದಂತೆ ವಿವಿಧ ಕಂಪನಿಗಳು ನೀಡುತ್ತಿದ್ದ ಬೈಕ್ ಟ್ಯಾಕ್ಸಿ ಸೇವೆ ಇದೇ ಜೂನ್ 16ರ ಸೋಮವಾರದಿಂದ ಸಂಪೂರ್ಣವಾಗಿ ನಿಷೇಧಗೊಳ್ಳಲಿದೆ. ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ಈಗಾಗಲೇ ಏಕಸದಸ್ಯ ಪೀಠದಿಂದ ನೀಡಲಾದ ಬೈಕ್ ಟ್ಯಾಕ್ಸಿ ನಿಷೇಧದ ಆದೇಶವನ್ನು ಎತ್ತಿಹಿಡಿದಿದ್ದು, ಟ್ಯಾಕ್ಸಿ ಒಟ್ಟುಗೂಡಿಸುವ ಕಂಪನಿಗಳ ಅರ್ಜಿಯನ್ನು ತಿರಸ್ಕರಿಸಲಾಗಿದೆ.
ಹೈಕೋರ್ಟ್ನ ಏಕಸದಸ್ಯ ಪೀಠವು ಏಪ್ರಿಲ್ 2, 2025ರಂದು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸುವುದರ ಬಗ್ಗೆ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ತಡೆಯಾಜ್ಞೆ ಕೋರಿ ಓಲಾ, ಉಬರ್, ಮತ್ತು ರ‍್ಯಾಪಿಡೋ ಕಂಪನಿಗಳು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ. ತಡೆಯಾಜ್ಞೆ ನೀಡಲು ನಿರಾಕರಿಸಿದ ಕೋರ್ಟ್, ಜೂನ್ 20ರೊಳಗೆ ಟ್ಯಾಕ್ಸಿ ಅಗ್ರಿಗೇಟರ್‌ಗಳಿಂದ ಉತ್ತರ ಸಲ್ಲಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಜೂ. 24ಕ್ಕೆ ಮುಂದೂಡಿರುವುದಾಗಿ ತಿಳಿದುಬಂದಿದೆ.
ಬೈಕ್ ಟ್ಯಾಕ್ಸಿ ಸೇವೆಗೆ ಸಂಬ0ಧಿಸಿದ ಸ್ಪಷ್ಟ ಕಾನೂನು ಆಗಲೀ, ನೀತಿಯಾಗಲೀ ರೂಪಿಸದಿರುವುದೇ ಈ ನಿಷೇಧಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಸರ್ಕಾರ ಸೂಕ್ತ ನಿಯಮಾವಳಿ ಜಾರಿಗೊಳಿಸುವವರೆಗೆ ಬೈಕ್ ಟ್ಯಾಕ್ಸಿ ಸೇವೆಯ ಮೇಲಿನ ನಿಷೇಧ ಮುಂದುವರಿಯಲಿದೆ ಎಂದು ಕೋರ್ಟ್ ಹೇಳಿದೆ. ಪ್ರಯಾಣಿಕರಿಗೆ ಮತ್ತು ಚಾಲಕರಿಗೆ ಸುರಕ್ಷತೆ ಒದಗಿಸುವುದು ಸವಾಲಿನ ಕೆಲಸವಾಗಿದೆ ಎಂದು ಕೋರ್ಟ್ ಗಮನಿಸಿದ್ದು, ಮಹಾ ನಗರಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಯು ಸಾರ್ವಜನಿಕರಿಂದ ಉತ್ತೇಜನಕಾರಿಯಾಗಿತ್ತು. ಕಡಿಮೆ ವೆಚ್ಚದಲ್ಲಿ, ಟ್ರಾಫಿಕ್‌ನಲ್ಲಿ ಕೆಲವೊಮ್ಮೆ ಅಲ್ಪ ಅವಧಿ ಸಮಯ ತೆಗೆದುಕೊಂಡು ಬೇಕಾದಸ್ಥಾನ ತಲುಪಲು ಈ ಸೇವೆಯು ಅವಶ್ಯವಾಗಿತ್ತು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles