ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀfಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದರು.

ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹೈಯರ್ ಪೆನ್ಷನ್ ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ ಇತ್ಯರ್ಥ ಕಾಣದೆ ಪತ್ರಕರ್ತರು ಅದರಲ್ಲೂ ನಿವೃತ್ತ ನೌಕರರು ತೀವ್ರ ಆರ್ಥಿಕ ಸಮಸ್ಯೆಗೆ ತುತ್ತಾಗಿರುವ ಸಂಗತಿಯನ್ನು ನಿಯೋಗ ಸಚಿವರ ಗಮನಕ್ಕೆ ತಂದಿತು. ಅನೇಕ ಪತ್ರಕರ್ತರು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ಬಂದ ಡಿಮ್ಯಾಂಡ್ ನೋಟ್ ಅನುಸಾರ ಹೆಚ್ಚುವರಿ ಮೊತ್ತವನ್ನು ಜನವರಿ ತಿಂಗಳಲ್ಲೇ ಪಾವತಿ ಮಾಡಿದ್ದಾರೆ, ಇದುವರೆವಿಗೂ ಇದು ಇತ್ಯರ್ಥವಾಗಿಲ್ಲ. ಆರು ತಿಂಗಳಿನಿಂದ ಕಟ್ಟಿದ ದುಡ್ಡಿಗೆ ಬಡ್ಡಿಯೂ ಇಲ್ಲ ಹೆಚ್ಚಿನ ಪೆನ್ಷನ್ನೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ನಿಯೋಗ ವಾಸ್ತವ ಚಿತ್ರಣವನ್ನು ಸಚಿವರ ಮುಂದೆ ತೆರೆದಿಟ್ಟಿತು. ಈ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ , ಈಗಾಗಲೇ ಡಿಮಾಂಡ್ ನೋಟ್ ವಿತರಿಸಿ ಹಣ ಕಟ್ಟಿಸಿಕೊಂಡ ಉದ್ಯೋಗಿಗಳ ಅರ್ಜಿಯನ್ನು ಕೂಡಲೇ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ಕೆಲವು ಸಂಸ್ಥೆಗಳ ಭವಿಷ್ಯ ನಿಧಿಯನ್ನು ಆಯಾ ಸಂಸ್ಥೆಗಳ ಟ್ರಸ್ಟ್ ಗಳೇ ನಡೆಸುತ್ತಿದ್ದು ತಾಂತ್ರಿಕ ಕಾರಣದ ಮೇಲೆ ಇಂಥ ಅರ್ಜಿಗಳು ತಿರಸ್ಕಾರ ಗೊಂಡಿರುವ ಸಂಗತಿಯನ್ನು ಸಚಿವರ ಗಮನಕ್ಕೆ ತರಲಾಯಿತು. ಈ ವಿಷಯ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆಯಲ್ಲಿದ್ದು ಅತಿ ಶೀಘ್ರದಲ್ಲೇ ಪರಿಹಾರ ಹುಡುಕುವ ಭರವಸೆ ನೀಡಿದರು.
ನಿಯೋಗದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರ, ಹಿರಿಯ ಪತ್ರಕರ್ತರಾದ , ಶ್ರೀವತ್ಸ ನಾಡಿಗ್, ನೆತ್ತನಕೆರೆ ಉದಯಶಂಕರ, ಎಂ ನಾಗರಾಜ, ,ಬಿ ಎನ್ ರಾಘವೇಂದ್ರ, ವಾದಿರಾಜ ದೇಸಾಯಿ, ಚಂದ್ರಶೇಖರ ಮತ್ತು ಹನುಮೇಶ್ ಕೆ ಯಾವಗಲ್ ಇದ್ದರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles