ರಾಜ್ಯದಲ್ಲಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ: ಸುರ್ಜೇವಾಲ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ. ಶಾಸಕರ ಜತೆಗಿನ ಮುಖಾಮುಖಿ ಸಭೆಯಲ್ಲೂ ಈ ವಿಚಾರ ಚರ್ಚೆಯಾಗುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರೊಂದಿಗಿನ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ಆಡಳಿತ ಕುರಿತ ವೈಯಕ್ತಿಕ ಅಭಿಪ್ರಾಯವನ್ನಷ್ಟೇ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.ಕಳೆದೆರಡು ದಿನಗಳಲ್ಲಿ ಮೈಸೂರು ಮತ್ತು ಬೆಂಗಳೂರು ವಿಭಾಗದ ಶಾಸಕರ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಮುಂದಿನ ಸೋಮವಾರದಿಂದ ಇತರ ಭಾಗದ ಶಾಸಕರನ್ನು ಕರೆದು ಮಾತನಾಡುತ್ತೇನೆ. ನಂತರದಲ್ಲಿ ಸಂಸದರು, ಮಾಜಿ ಸಂಸದರನ್ನು ಭೇಟಿ ಮಾಡಲಾಗುವುದು. ಈ ಸಭೆಗಳಲ್ಲಿ ಕಳೆದೆರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಶಾಸಕರಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಜಿಲ್ಲಾ ಮತ್ತು ಬ್ಲಾಕ್‌ ಕಾಂಗ್ರೆಸ್‌ ಸೇರಿ ಇತರ ವಿಭಾಗಗಳ ಚಟುವಟಿಕೆ ಕುರಿತು ಮಾಹಿತಿ ಪಡೆಯಲಾಗುವುದು ಎಂದರು.

ಬಹಿರಂಗ ಹೇಳಿಕೆ ಸರಿಯಲ್ಲ

ಸರ್ಕಾರದ ಕುರಿತು ಶಾಸಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ಯಾರೇ ಆಗಲಿ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಬೇಕು. ಎಷ್ಟೇ ಅಸಮಾಧಾನವಿದ್ದರೂ ಅದನ್ನು ಬಹಿರಂಗಪಡಿಸಲು ವೇದಿಕೆಯಿದೆ. ಬಹಿರಂಗವಾಗಿ ಮಾತನಾಡಲು ಅವಕಾಶವಿಲ್ಲ. ನನ್ನೊಂದಿಗೆ ಶಾಸಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎಂದರು.ಮುಖಾಮುಖಿ ಸಭೆಯಲ್ಲಿ ಶಾಸಕರ ರಿಪೋರ್ಟ್‌ ಕಾರ್ಡ್‌ ಪಡೆಯುತ್ತಿದ್ದೇನೆ. ಶಾಸಕರ ಆಕಾಂಕ್ಷೆಗಳು, ಬೇಡಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇನೆ. ಅದನ್ನು ರಾಜ್ಯ ಸರ್ಕಾರದ ಗಮನಕ್ಕೂ ತರುತ್ತೇನೆ. ಪಂಚ ಗ್ಯಾರಂಟಿಗಳ ಅನುಷ್ಠಾನದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ಇನ್ನೂ ಐದಾರು ದಿನ ಇಲ್ಲೇ ಇರುತ್ತೇನೆ. ಎಲ್ಲ ಶಾಸಕರು, ಸಂಸದರನ್ನು ಭೇಟಿ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.

Hot this week

ಯಾಕೂಬ್ ಅಲಿಖಾನ್ ಎಂಬ ನಮ್ಮೂರಿನ ರಸಿಕ ಕಲಾವಿದ

ನನ್ನ ಕಾಲಘಟ್ಟದ ಯಾರೇ ನಮ್ಮೂರಿನ ರಸಿಕರನ್ನು ಚಿತ್ರಿಸಲು ಹೊರಟರೆ, ಅದರಲ್ಲಿ ಮರೆಯದೆ...

ವಸತಿ ಸಂಕಿರಣಗಳಿಗೆ ಸಂಬಂಧಿಸಿದ ಕಾನೂನು ಸುಧಾರಣೆ

ಬೆಂಗಳೂರು: ವಸತಿ ಸಂಕಿರಣಗಳಿಗೆ ಸಂಬಂಧಿಸಿದ  ಕಾನೂನು ಸುಧಾರಣೆಗಳಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಬಿಡಿಎ...

ಎಲ್‌ಪಿಜಿ ಬೆಲೆ ಏರಿಕೆ

ಬೆಂಗಳೂರು:- ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿರುವಾಗ...

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

Topics

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Related Articles