ಗಾಂಧೀ ಅನುಯಾಯಿ ಎಲ್.ನರಸಿಂಹಯ್ಯ ಅವರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

ಪ್ರಖರ ಗಾಂಧೀ ಚಿಂತಕರೂ, ಶಿಕ್ಷಣ ವೇತ್ತರೂ ಆಗಿರುವ ಎಲ್. ನರಸಿಂಹಯ್ಯ ತೊಂಡೋಟಿ ಅವರು ಮಂಡ್ಯದ ಗಾಂಧೀ ಭವನ ನೀಡಲಿರುವ ಈ ಸಾಲಿನ ಪ್ರೊ.ಎಂ.ಕರೀ ಮುದ್ದೀನ್ ಸ್ಮಾರಕ ಗಾಂಧೀ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇತ್ತೀಚೆಗೆ ತಮ್ಮ 91 ನೆ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಎಲ್ಲೆನ್ ಅವರು ಕನಕಪುರ ತಾಲ್ಲೂಕು ಹಾರೋಹಳ್ಳಿ ಗ್ರಾಮಾಂತರ ಪ್ರೌಢ ಶಾಲೆಯಲ್ಲಿ ಮೂವತ್ತಕ್ಕೂ ಹೆಚ್ಚು ವರ್ಷಗಳಕಾಲ ಮುಖ್ಯೋಪಾಧ್ಯಾಯರಾಗಿ ಆ ಶಾಲೆಗೆ ಗಾಂಧೀ ಮೌಲ್ಯಗಳ ಚೌಕಟ್ಟು ಹಾಕಿದವರು.
ವಿವಿಧ ಸಾಹಿತ್ಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ತುಮಕೂರು. ಮತ್ತು ರಾಮನಗರ  ಜಿಲ್ಲೆಗಳ  ಶಾಲಾ ಮಕ್ಕಳಿಗೆ ಗಾಂಧೀ ತತ್ವಗಳನ್ನು ಪರಿಚಯಿಸಿದವರು. ಅವರು ರಚಿಸಿದ ಕಥನ ಕವನ  ‘ಗಾಂಧೀ ಗೋವಿನ ಕಥೆ ‘
ಮಕ್ಕಳಿಗೆ ಪ್ರಿಯವಾದ ಪುಸ್ತಿಕೆ.
ಕನ್ನಡ ಸಾಹಿತ್ಯ  ಪರಿಷತ್ ಶ್ರೀಯುತರಿಗೆ 2022 ರ ಎ. ಆರ್. ನಾರಾಯಣ ಘಟ್ಟ – ಸರೋಜಮ್ಮ ಗಾಂಧೀ ಪುದು ವಟ್ಟು ದತ್ತಿ ಪ್ರಶಸ್ತಿ ನೀಡಿ ಗೌರವಿಸಿದೆ.
ಪ್ರೊ. ಎಂ. ಕರೀಮುದ್ದಿನ್  : ಶ್ರೀರಂಗಪಟ್ಟಣ ತಾಲ್ಲೂಕು ಗಂಜಾಂ ನಿವಾಸಿಯಾಗಿದ್ದ ದಿ. ಪ್ರೊ.ಎಂ. ಕರೀಮುದ್ದೀನ್ ಕನ್ನಡ ಪ್ರಾಧ್ಯಾಪಕರೂ,ಭಾಷಾ ತಜ್ಞರೂ, ವಾಗ್ಮಿಗಳೂ ,ಬರಹಗಾರರೂ ಆಗಿ ಪ್ರಸಿದ್ಧರು.ಕನ್ನಡ, ಅರೇಬಿಕ್, ಹಿಂದಿ, ಸಂಸ್ಕೃತ,  ಇಂಗ್ಲಿಷ್ ನಲ್ಲಿ ಪ್ರಾವಿಣ್ಯತೆ ಪಡೆದಿದ್ದರು. ಅನಾಥ ಮುಸ್ಲಿಂ ರು, ಸಂಚಿತ ಚಿಂತನ,ಬಾಳು – ಬದುಕು ಕೃತಿಗಳ ಲೇಖಕರು.ಶ್ರೀಯುತರ ಸಂಸ್ಮರಣೆಯಲ್ಲಿ   ಈ ಗಾಂಧೀ ಸೇವಾ ಪ್ರಶಸ್ತಿಯನ್ನು   ಮಂಡ್ಯದ ಗಾಂಧೀ ಭವನ ದಲ್ಲಿ ಜುಲೈ ಐದರಂದು   ನೀಡಿ ಗೌರವಿಸಲಾಗುತ್ತಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದೆ

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles