BIG NEWS : ಅಭಿನಯ ಸರಸ್ವತಿ ಸರೋಜಾದೇವಿ ಅಸ್ತಂಗತ…!

ಬೆ0ಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತಿಯಾಗಿದ್ದ ಹಿರಿಯ ನಟಿ ಹಿರಿಯ ನಟಿ ಬಿ.ಸರೋಜಾದೇವಿ(87) ಅವರು ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಬಾರದ ಲೋಕಕ್ಕೆ ತೆರಳಿದ್ದಾರೆ.
ಜನವರಿ 7, 1938 ರಲ್ಲಿ ಜನಿಸಿದ ಬಿ. ಸರೋಜಾದೇವಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಲ್ಲೇಶ್ವರದ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು ಎಂದು ತಿಳಿಬಂದಿದ್ದು, ಮೃತದೇಹವನ್ನು ಆಸ್ಪತ್ರೆಯ ಸಮೀಪದ ನಿವಾಸದಲ್ಲಿ ಇರಿಸಲಾಗಿದ್ದು ಪೊಲೀಸರು ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದ್ದಾರೆ.

ಈಗಾಗಲೇ ಹಲವಾರು ಗಣ್ಯರು ನಿವಾಸಕ್ಕೆ ಬಂದು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಬೆಳಿಗ್ಗೆ ಹಿರಿಯ ನಟರುಗಳಾದ ಉಪೇಂದ್ರ ಹಾಗೂ ಜಗ್ಗೇಶ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಎನ್ನಲಾಗಿದೆ.
ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು.
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಕನ್ನಡದ ಮೇರು ನಟ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷಿಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಇತ್ಯಾದಿ ಹಲವು ಚಿತ್ರಗಳಲ್ಲಿ ನಟಿಸಿರುವ ಹೆಮ್ಮೆ ಬಿ.ಸರೋಜಾ ದೇವಿ ಅವರದು…
ಅಂತೆಯೇ, ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿರುವರು. ಹಿಂದಿಯಲ್ಲಿ ಕೂಡಾ ಬಿ. ಸರೋಜಾದೇವಿ ಅವರು ನಟಸಿದ್ದು, ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿರುವರು.

Hot this week

ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 14.08.2026ಶುಕ್ರವಾರ FRIDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ: ದಕ್ಷಿಣಾಯಣ. AYANA:...

ಸ್ವಾನಂದಾಶ್ರಮ: ಭಕ್ತಿ, ಸಂಸ್ಕೃತಿ, ಸೇವೆ ಮತ್ತು ಹೊಯ್ಸಳ ವೈಭವದ ಸಂಗಮ

ಆಗಸ್ಟ್ 16ರಿಂದ ವರದ ಗಣಪತಿ ವ್ರತಾಚರಣೆ ಬೆಂಗಳೂರು: ಕನಕಪುರ ರಸ್ತೆಯ ಅಗರ–ತಾತಗುಣಿಯಲ್ಲಿ(Thathaguni) ನೆಲೆಗೊಂಡಿರುವ...

ಮೇಕೆದಾಟು ಯೋಜನೆಗೆ ವೇಗ ನೀಡಲು ಅಧಿಕಾರಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ನೂತನವಾಗಿ ಜಲಸಂಪನ್ಮೂಲ ಸಚಿವರಾಗಿ(New Minister of Water Resources) ಅಧಿಕಾರ...

ತೇಜಸ್ವಿ ಜನ್ಮದಿನೋತ್ಸವ ಅಂಗವಾಗಿ ‘ಕರ್ವಾಲೊ’ ಕೃತಿ ಆಧಾರಿತ ಡಿಜಿಟಲ್ ಚಿತ್ರಕಲಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಹಾಗೂ ಚಿಂತಕ ಕೆ.ಪಿ. ಪೂರ್ಣಚಂದ್ರ ತೇಜಸ್ವಿ(K.P.Purnachandra...

ಗಣ್ಯರ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ

ಬೆಂಗಳೂರು : ಇಂದು ವಿಧಾನಸಭೆಯ ಅಧಿವೇಶನದಲ್ಲಿ(Legislative Assembly Session) ಇತ್ತೀಚೆಗೆ ನಿಧನರಾದ...

Topics

ಸಚಿವಾಲಯ ಗ್ರಂಥಾಲಯದಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಮಾಸಿಕ ರೂ. 10,900 ಸ್ಟೈಫಂಡ್

ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವಾಲಯ ಗ್ರಂಥಾಲಯದಲ್ಲಿ(Karnataka Government Secretariat Library) 'ಅಪ್ರೆಂಟಿಸ್...

Related Articles