ಈರುಳ್ಳಿ ಕೈಗೆಟುಕುವ ಬೆಲೆಗೆ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ

*ಈರುಳ್ಳಿ ಸಂಗ್ರಹ, ಕ್ರಯ-ವಿಕ್ರಯದ ಮೇಲೆ ಕೇಂದ್ರ ಕಣ್ಣು*

* ಆಹಾರ ಸಚಿವ ಪ್ರಲ್ಹಾದ ಜೋಶಿ ಸಮ್ಮುಖದಲ್ಲಿ ಸಭೆ, ಚರ್ಚೆ
* ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಈರುಳ್ಳಿ ಸುಲಭ ಲಭ್ಯತೆಗೆ ಕ್ರಮ

ನವದೆಹಲಿ: ದೇಶದಲ್ಲಿ ಪ್ರಸ್ತುತ ಸಾಲು ಸಾಲು ಹಬ್ಬಗಳಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ʼಈರುಳ್ಳಿʼ ಸಂಗ್ರಹಣೆ ಮತ್ತು ಕ್ರಯ-ವಿಕ್ರಯದ ಮೇಲೆ ಕಣ್ಣಿಟ್ಟಿದೆ. ಜನಸಾಮಾನ್ಯರಿಗೆ ತೊಂದರೆ-ತೊಡಕುಗಳು ಎದುರಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ.

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ದೆಹಲಿಯಲ್ಲಿ ಶುಕ್ರವಾರ ಈ ಸಂಬಂಧ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ.

ಸೆಪ್ಟೆಂಬರ್‌, ಅಕ್ಟೋಬರ್‌ ಮಾಹೆ ಹಾಗೂ ಮುಂದಿನ ದಿನಗಳಲ್ಲಿ ಸಾಲು ಸಾಲು ಹಬ್ಬಹರಿದಿನಗಳು ಇರುವುದರಿಂದ ಜನಸಾಮಾನ್ಯರಿಗೆ ʼಈರುಳ್ಳಿʼ ಕೈಗೆಟುಕುವ ಬೆಲೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅಧಿಕಾರಿಗಳಿಗೆ ನಿರ್ದೇಶನ ಸಹ ನೀಡಿದ್ದಾರೆ.

*ಈರುಳ್ಳಿ ಕ್ರಯ-ವಿಕ್ರಯ ಸುಗಮಕ್ಕೆ ಮಾರ್ಗಸೂಚಿ:* ದೇಶದೆಲ್ಲೆಡೆ ಈರುಳ್ಳಿ ಸುಗಮ ಕ್ರಯ-ವಿಕ್ರಯಕ್ಕೆ ಮಾರ್ಗಸೂಚಿ ಹೊರಡಿಸುವಂತೆ ಸೂಚಿಸಿದ ಸಚಿವರು, ಉತ್ತಮ ಗುಣಮಟ್ಟದ ಈರುಳ್ಳಿ ಖರೀದಿ, ಸಂಗ್ರಹಣೆ ಖಚಿತಪಡಿಸಿಕೊಳ್ಳಲು ಅಧಿಕಾರಿಗಳ ತಂಡ ಎಲ್ಲಾ FPOಗಳು ಮತ್ತು FPCಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದು ಆದೇಶಿಸಿದರು.

ಈರುಳ್ಳಿ ಖರೀದಿಯಲ್ಲಿ ಪಾರದರ್ಶಕ ಮತ್ತು ಪರಿಣಾಮಕಾರಿ ಸಂಗ್ರಹಣೆ ಕುರಿತಂತೆ DOCAಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರಲ್ಲದೆ, ಈರುಳ್ಳಿ ಖರೀದಿ ಪ್ರಕ್ರಿಯೆ ಸುಗಮಗೊಳಿಸಲು ಮತ್ತು ವೈಜ್ಞಾನಿಕವಾಗಿ ಸಂಗ್ರಹಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

*ಪ್ರಾಥಮಿಕ ವರದಿ ಸಲ್ಲಿಕೆ:* ಪ್ರಸ್ತುತದಲ್ಲಿ ಈರುಳ್ಳಿ ಖರೀದಿ ಸ್ಥಿತಿಗತಿ ಪರಿಶೀಲನೆ, ಖರೀದಿ ಕೇಂದ್ರಗಳು ಮತ್ತು FPO/FPCಗಳ ಸಂಗ್ರಹಣಾ ಕೇಂದ್ರಗಳಿಗೆ ಪರಿಶೀಲನಾ ತಂಡಗಳು ಭೇಟಿ ನೀಡಿ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ ಎಂದಿರುವ ಸಚಿವರು, ಎಲ್ಲೆಡೆಯೂ ಗ್ರಾಹಕರಿಗೆ ಈರುಳ್ಳಿ ಸುಗಮವಾಗಿ ಲಭ್ಯವಾಗುವಂತೆ ಕಟ್ಟೆಚ್ಚರ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

*ಮುನ್ನೆಚ್ಚರಿಕೆ ವಹಿಸಲು ಸಲಹೆ:*
ಹಬ್ಬಳಗಳು ಇರುವುದರಿಂದ ಹಾಗೂ ಎಲ್ಲೆಡೆ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಳಿತ ಆಗುತ್ತಿರುತ್ತದೆ. ಅಲ್ಲದೇ, ಕೆಲ ವರ್ತಕರು ಅಗತ್ಯಕ್ಕಿಂತ ಹೆಚ್ಚು ದಾಸ್ತಾನು ಇರಿಸಿಕೊಳ್ಳುತ್ತಾರೆ. ಇದರಿಂದ ಸಹಜವಾಗಿ ಕೃತಕ ಅಭಾವ ಎದುರಾಗುತ್ತದೆ. ಹಾಗಾಗಿ ಅಧಿಕಾರಿಗಳ ತಂಡ ಇದೆಲ್ಲದರ ಮೇಲೆ ನಿಗಾ ವಹಿಸಬೇಕು, ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಸಲಹೆ ನೀಡಿದರು.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles