ಸೆಪ್ಟೆಂಬರ್ 19 ರಂದು “ದೀಪಿಕಾ” ವಿದ್ಯಾರ್ಥಿ ವೇತನ ಉದ್ಘಾಟನಾ ಕಾರ್ಯಕ್ರಮ

Bengaluru : ಉನ್ನತ ಶಿಕ್ಷಣ ಇಲಾಖೆ (Higher Education Department) ಹಾಗೂ ಅಜೀಂ ಪ್ರೇಂಜಿ ಫೌಂಡೇಶನ್ (Azim Premji Foundation) ಸಹಭಾಗಿತ್ವದಲ್ಲಿ ರೂಪಿಸಲಾಗಿರುವ “ದೀಪಿಕಾ” ವಿದ್ಯಾರ್ಥಿ ವೇತನ ಮಹತ್ವದ  ಕಾರ್ಯಕ್ರಮವನ್ನು ಸೆಪ್ಟೆಂಬರ್ 19 ರಂದು ಸಂಜೆ 4.00 ಗಂಟೆಗೆ ಜಿ.ಕೆ.ವಿ.ಕೆಯ ಡಾ.ಬಾಬು ರಾಜೇಂದ್ರ ಪ್ರಸಾದ್ (Dr. Babu Rajendra Prasad) ಅಂತಾರಾಷ್ಟ್ರೀಯ ಸಮಾವೇಶ ಭವನದಲ್ಲಿ ಆಯೋಜಿಸಲಾಗಿದ್ದು,  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ (C M Siddaramaiah) ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಉದ್ಯೋಗ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಭಾಗವಹಿಸಲಿದ್ದು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಬಸವರಾಜ ಎಸ್ ಹೊರಟ್ಟಿ ಹಾಗೂ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಅವರು ಘನ ಉಪಸ್ಥಿತರಿರಲಿದ್ದಾರೆ.
ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು,  ಅಜೀಮ್ ಪ್ರೇಂಜಿ ಫೌಂಡೇಶನ್‍ನ ಅಧ್ಯಕ್ಷರಾದ ಅಜೀಂ ಪ್ರೇಂಜಿ ಅವರು ಪ್ರೇರಣಾತ್ಮಕ ನುಡುಗಳನ್ನಾಡಲಿರುವರು. ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಗಣ್ಯರು, ಉನ್ನತಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿರುವರು.
ದೀಪಿಕಾ – ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನ:
ಪಿಯುಸಿ ತರಗತಿಗಳನ್ನು ಸರ್ಕಾರಿ ಕಾಲೇಜ್ ನಲ್ಲಿ ಕಲಿತು, ಯಾವುದಾದರೂ ಕಾಲೇಜಿಗೆ ಸಾಮಾನ್ಯ ಪದವಿ/ ವೃತ್ತಿಪರ ಪದವಿ ಅಥವಾ ಡಿಪ್ಲೋಮೋ ತರಗತಿಗಳಿಗೆ ದಾಖಲಾದ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30000 ಸಾವಿರ ರೂ. ವಿದಾರ್ಥಿವೇತನ ವನ್ನು 37 ಸಾವಿರ ವಿದ್ಯಾರ್ಥಿನಿಗಳಿಗೆ ನೀಡಲಾಗುತ್ತದೆ. 2025-26 ನೇ ಸಾಲಿನಿಂದ ಈ ವಿದ್ಯಾರ್ಥಿ ವೇತನ ಅನುಟ್ಷನಗೊಳ್ಳಲಿದೆ.
37 ಸಾವಿರಕ್ಕೂ ಹೆಚ್ಚು ವಿದಾರ್ಥಿನಿಯರು ದಾಖಲಾದಲ್ಲಿ ಸರ್ಕಾರದ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. ಈ ಯೋಜನೆಯಡಿ ಸುಮಾರು 2 ಸಾವಿರ ವಿದ್ಯಾರ್ಥಿನಿಯರು “ದೀಪಿಕಾ ವಿದಾರ್ಥಿ ವೇತನ” ಪಡೆಯಲಿರುವರು ಎಂದು ಪ್ರಕಟಣೆ ತಿಳಿಸಿದೆ.

Hot this week

ದೇವನಹಳ್ಳಿ ತಾಲೂಕು ಕಚೇರಿಯಲ್ಲಿ ಆಮೆಗತಿಯ ಮಾಹಿತಿ ಹಕ್ಕು ಪ್ರಕ್ರಿಯೆ:

ದೇವನಹಳ್ಳಿ: ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆ ತರಲು ಜಾರಿಗೆ ಬಂದ ಮಾಹಿತಿ ಕ್ಕು...

ಜನಿವಾರ ತೆಗೆಸಿದ ಕೃತ್ಯ ‘ಪೆಹಲ್ಗಾಂ’ ಮಾದರಿಯ ದಬ್ಬಾಳಿಕೆ:

ಬ್ರಾಹ್ಮಣ ಮಹಾಸಭಾ ತೀವ್ರ ಖಂಡನೆ ​ಇತ್ತೀಚೆಗೆ ನಡೆದ ಸಿಇಟಿ (CET) ಪರೀಕ್ಷಾ ಸಮಯದಲ್ಲಿ...

ಕಾರ್ಮಿಕ ದಿನಾಚರಣೆ: ವಾಯ್ಸ್ ಆಫ್ ಸದಾಶಿವನಗರದಿಂದ 170ಪೌರ ಕಾರ್ಮಿಕರಿಗೆ ಸನ್ಮಾನ*

ಬೆಂಗಳೂರು,ಮೇ.1: ವಿಶ್ವ ಕಾರ್ಮಿಕರ ದಿನಾಚರಣೆ (Vishva Karmikara dinacharane)  ಪ್ರಯುಕ್ತ ಸದಾಶಿವನಗರ...

ರಂಗಪ್ರವೇಶ — ಕುಮಾರಿ ಲಕ್ಷ್ಮಿ ಅನನ್ಯ ತಾಟವರ್ತಿ

ಭಾರತೀಯ ಶಾಸ್ತ್ರೀಯ ನೃತ್ಯದ ಲೋಕದಲ್ಲಿ ರಂಗಪ್ರವೇಶ ಎಂದರೆ ಕೇವಲ ಒಂದು ಪ್ರದರ್ಶನವಲ್ಲ—ಅದು ಒಂದು ಘೋಷಣೆ....

Topics

“ವಿಶ್ವ ನೃತ್ಯ ದಿನಾಚರಣೆ”

ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ ಸಂಸ್ಥಾಪಕಿ ಅಂಬಿಕಾ ಸಿ(Ambika .c)...

ಶ್ರೀ ಶ್ರೀನಿವಾಸ ದೇವರಿಗೆ ಮಹಾಭಿಷೇಕ ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ

ಬೆಂಗಳೂರು : ಪವಮಾನಪುರ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ...

ತ್ಯಾಗರಾಜನಗರ ರಾಯರ ಮಠದಲ್ಲಿ ಶ್ರೀ ನರಸಿಂಹ ಜಯಂತಿ

ಬೆಂಗಳೂರು : ತ್ಯಾಗರಾಜನಗರದ 11ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ...

Related Articles