ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕಠಿಣ ಷರತ್ತು ಸಡಿಲಿಸಲು ಕೆಯುಡಬ್ಲೂೃಜೆ ಆಗ್ರಹ

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಬಸ್‌ಪಾಸ್ (Bangalore Rural Journalists BusPass) ಯೋಜನೆ ಜಾರಿಗೆ ಅಡ್ಡಿಯಾಗಿರುವ ಕಠಿಣ ಷರತ್ತುಗಳನ್ನು ಸಡಿಲಿಸಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯಡಬ್ಲೂೃಜೆ) (KUWJ) ಒತ್ತಾಯಿಸಿದೆ.
ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಮೊದಲ ಹಂತದಲ್ಲಿ 5,500 ಪತ್ರಕರ್ತರಿಗೆ ಉಚಿತ ಬಸ್‌ಪಾಸ್ ನೀಡಬೇಕಾಗಿತ್ತು. ಆದರೆ ಈ ತನಕ ಕನಿಷ್ಠ 200 ಜನ ಪತ್ರಕರ್ತರಿಗೂ ಬಸ್‌ಪಾಸ್ ನೀಡದೆ ಇರುವುದು ಅತ್ಯಂತ ವಿಷಾದದ ಸಂಗತಿ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಬಸ್‌ಪಾಸ್‌ಗೆ ವಿಧಿಸಿರುವ ಕೆಲ ಕಠಿಣ ಷರತ್ತುಗಳನ್ನು ಸಡಿಲಿಸಬೇಕೆಂದು ಕೆಯುಡಬ್ಲ್ಯು ಜೆ ಈ ಹಿಂದೆಯೇ ಹಲವು ಬಾರಿ ಪತ್ರ ಬರೆದು ವಿನಂತಿಸಿತ್ತು. ಆದರೂ ಸರ್ಕಾರ ಈ ಬಗ್ಗೆ ಗಮನಹರಿಸಿಲ್ಲ ಎಂದು ಹೇಳಿದ್ದಾರೆ.
ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಪಡೆಯಲು ಜಿಲ್ಲಾ ಮತ್ತು ತಾಲ್ಲೂಕು .ಹಾಗೂ ಹೋಬಳಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಗ್ರಾಮೀಣ ಭಾಗದ ಪತ್ರಕರ್ತರಿಗೆ ಪೂರ್ಣಾವಧಿ ನೇಮಕಾತಿ ಇರುವುದಿಲ್ಲ. ಆದುದರಿಂದ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಪತ್ರಿಕಾ ಸಂಸ್ಥೆಗಳು/ಸಂಪಾದಕರು ನೀಡುವ ದೃಢೀಕರಣ ಆಧರಿಸಿ ಬಸ್‌ಪಾಸ್ ನೀಡಬೇಕೆಂದು ಅವರು ಕೋರಿದ್ದಾರೆ.
ಮಾನ್ಯತೆ ಪಡೆದ ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ತಾಲ್ಲೂಕು ಮಟ್ಟದಿಂದ ವರದಿಗಾರರಾಗಿರುವ ಎಲ್ಲ ಪತ್ರಕರ್ತರಿಗೆ ಬಸ್‌ಪಾಸ್ ನೀಡಬೇಕು. ಹೋಬಳಿ ಹಂತದಲ್ಲಿಯೂ ಹಲವು ಪತ್ರಿಕೆಗಳಿಗೆ ವರದಿಗಾರರು ಇರುವುದರಿಂದ ಅವರಿಗೂ ಬಸ್‌ಪಾಸ್ ಸೌಲಭ್ಯವನ್ನು ವಿಸ್ತರಿಸಬೇಕು ಎಂದು ಸಂಘವು ಒತ್ತಾಯಿಸಿದೆ.

Hot this week

ಹಾಸನ ಮಹಾರಾಜ ಪಾರ್ಕಿನಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾಯನೋತ್ಸವ

ಹಾಸನ: ನಗರದ ಮಹಾರಾಜ ಪಾರ್ಕಿನಲ್ಲಿ (Hassan - Maharaj Park) ಭಾನುವಾರ...

ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಬೆಂಗಳೂರು ನಗರದ ದಕ್ಷಿಣ ಅಂಚಿನ ಕನಕಪುರ ರಸ್ತೆಯ (Agara) ಅಗರ(K–ತಾತಗುಣಿಯಲ್ಲಿ ನೆಲೆಗೊಂಡಿರುವ...

ಪ್ರೊ. ಕೆ.ಟಿ. ಪಾಂಡುರಂಗಿ ಹಾಗೂ ಪಂಡಿತ ಗುರುರಾಜಾಚಾರ್ಯ ಪಾಂಡುರಂಗಿ ಅವರ ಶತಮಾನೋತ್ಸವ ಸಂಭ್ರಮ

ಬೆಂಗಳೂರಿನಲ್ಲಿ ಎರಡು ದಿನಗಳ ವೈಭವದ ಜ್ಞಾನ-ಭಕ್ತಿ ಮಹೋತ್ಸವ ಭಾರತೀಯ ತತ್ತ್ವಶಾಸ್ತ್ರ, ದ್ವೈತ ವೇದಾಂತ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಜಯ ನಿವೃತ್ತ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ

ಬೆಂಗಳೂರು: ಪ್ರತಿಭೆ, ಪರಿಶ್ರಮ ಹಾಗೂ ಶೈಕ್ಷಣಿಕ ಸಾಧನೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವಿಜಯ...

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಬಿಜೆಪಿ ವತಿಯಿಂದ ಸ್ವಚ್ಛತಾ ಕಾರ್ಯ

ಬೆಂಗಳೂರು: ನಗರದ ಮೈಸೂರು ಬ್ಯಾಂಕ್ ವೃತ್ತದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ...

Topics

ವಿಕಸಿತ ಭಾರತ ಸಂಕಲ್ಪ ಸಮಾವೇಶ – ನಿರ್ಮಲಾ ಸೀತಾರಾಮನ್

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಯವರ ಸರ್ಕಾರವು 12...

ಆಯುರ್ವೇದ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಮಹತ್ವ ಹೆಚ್ಚುತ್ತಿದೆ: ರಾಜ್ಯಪಾಲ ಗೆಹ್ಲೋಟ್

ದಾವಣಗೆರೆ / Davanagere: ಜೀವನಶೈಲಿ ಸಂಬಂಧಿತ ರೋಗಗಳು, ಮಾನಸಿಕ ಒತ್ತಡ ಮತ್ತು...

ಸಂಪುಟ ಸೇರಲು ಮ್ಯಾನೇಜ್ ಮೆಂಟ್ ಕೋಟ -ಪೇಮೆಂಟ್ ಕೋಟ: BY ವಿಜಯೇಂದ್ರ

ಗ್ಯಾರಂಟಿ ಫಲಾನುಭವಿಗಳ ಸಂಖ್ಯೆ ಇಳಿಸುವ ದುಸ್ಸಾಹಸಕ್ಕೆ ಮುಂದಾದ ಕಾಂಗ್ರೆಸ್ ಸರಕಾರ: ವಿಜಯೇಂದ್ರ...

Related Articles