ಮಹಿಳೆಯರ ಸುರಕ್ಷತೆ, ಮಾದಕ ವ್ಯಸನದ ನಿಯಂತ್ರಣ, ಸೈಬರ್ ಅಪರಾಧಗಳ ತಡೆ ಮತ್ತು ಸಂಚಾರ ನಿರ್ವಹಣೆ ಕುರಿತು ವಿಶೇಷ ಕಾರ್ಯಕ್ರಮ

ಬೆಂಗಳೂರು ನಗರ ಪೊಲೀಸರು, ಬೆಂಗಳೂರು ನಗರದ ನಾಗರೀಕರ ಸುರಕ್ಷತೆ ಮತ್ತು ಭದ್ರತೆಯ ಭಾಗವಾಗಿ ಮಹಿಳೆಯರ ಸುರಕ್ಷತೆ, ಮಾದಕ ವಸ್ತುಗಳು ಮತ್ತು ಸೈಬರ್ ಅಪರಾಧಗಳ ನಿಯಂತ್ರಣ, ಸಂಚಾರ ನಿಯಮಗಳ ಪಾಲನೆ ಮತ್ತು ನಿಯಂತ್ರಣಗಳ ಕುರಿತು ಸಾರ್ವಜನಿಕರಿಂದ ದೂರು, ಸಲಹೆಗಳನ್ನು ಪಡೆದುಕೊಂಡು ಪರಿಹಾರ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ದಿನಾಂಕ:01/12/2025 ರಂದು ಬೆಂಗಳೂರು ನಗರದ ಸುಮಾರು 750 ಪಿ.ಎಸ್.ಐ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳು 1,250 ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ, ಅಂದಾಜು ಸುಮಾರು 2.5 ಲಕ್ಷ ವಿದ್ಯಾರ್ಥಿಗಳಿಗೆ ಕ ಕುರಿತು ಜಾಗೃತಿ ಮೂಡಿಸಲಿದ್ದಾರೆ.
1. ಮಹಿಳಾ ಸುರಕ್ಷತೆಯ ಕ್ರಮಗಳು:

ಮಹಿಳಾ ಸಹಾಯವಾಣಿ-1090, ವ್ಯವಸ್ಥಿತ ನಿಗಾವಣೆ, ಹೊಯ್ಸಳ ವಾಹನಗಳ ಗಸ್ತು ವ್ಯವಸ್ಥೆ, ಸೇಫ್ಟಿ ಐಲ್ಯಾಂಡ್‌ಗಳು ಮತ್ತು KSP ಆ್ಯಪ್ ಮತ್ತು 112 ಸಹಾಯವಾಣಿ ಕರೆಗಳ ಮೂಲಕ ಸುರಕ್ಷತೆಯ ಸಂಪರ್ಕ ವ್ಯವಸ್ಥೆ, ನೆರವು ಕೇಂದ್ರ ಮತ್ತು ಚನ್ನಮ್ಮ ಪಡೆ.

2. ಮಾದಕವಸ್ತುಗಳ ನಿಯಂತ್ರಣ ಮತ್ತು ತಡೆಗಾಗಿ ಕ್ರಮಗಳು:
ಬೆಂಗಳೂರು ನಗರ ಪೊಲೀಸ್ ವತಿಯಿಂದ ಮಾದಕವಸ್ತುಗಳ ವಿರುದ್ದ ಸಮರವನ್ನು ಮುಂದುವರೆಸಿದ್ದು, ಅವುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಯೋಜನಬದ್ದ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ.
• Drug Free Karnataka ಆಪ್‌ನ ಮೂಲಕ ಸಾರ್ವಜನಿಕರು ಮಾದಕ ವಸ್ತುಗಳ ಕುರಿತು ದೂರು ನೀಡುವ ಬಗ್ಗೆ ಅರಿವು ಮೂಡಿಸುವುದು, ಟೋಲ್‌ಫ್ರೀ ನಂಬರ್ 1933 ಮೂಲಕ ದೂರುಗಳನ್ನು ದಾಖಲಿಸುವುದು ಮತ್ತು ಕಾಲೇಜು ಮತ್ತು ಶಾಲೆಗಳಲ್ಲಿ ಮಾದಕವಸ್ತು ನಿಯಂತ್ರಣ ಸಮಿತಿಗಳನ್ನು ಅನುಷ್ಟಾನಗೊಳಿಸುವುದು.

3. ಸಂಚಾರ ವ್ಯವಸ್ಥೆಯ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಕ್ರಮಗಳು:

ನಗರದಲ್ಲಿ ಸುಗಮ ಸಂಚಾರ ವ್ಯಸವಸ್ಥೆಯ ನಿರ್ವಹಣೆ ಮತ್ತು ಅಪಘಾತಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.

• ರಸ್ತೆ ಸುರಕ್ಷತಾ ಸಲಹೆಗಳನ್ನು ಪಡೆಯುವುದು, ಅಪಘಾತ ತಡೆ ಕ್ರಮಗಳು, “ಗೋಲ್ಡನ್ ಅವರ್‌ನ” ಶಿಸ್ತುಪಾಲನೆ, Astram ಆ್ಯಪ್ ಮತ್ತು ಸಂಚಾರ ಪೊಲೀಸ್‌ನ ಸಾಮಾಜಿಕ ಜಾಲತಾಣಗಳ ಅಕೌಂಟ್‌ಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳ ಕುರಿತು ಸಾರ್ವಜನಿಕರಿಂದ ದೂರು ಪಡೆಯುವುದು ಮತ್ತು ಕ್ರಮ ಕೈಗೊಳ್ಳುವುದು.

 

4. ಸೈಬರ್ ಅಪರಾಧಗಳ ನಿಯಂತ್ರಣ ಕ್ರಮಗಳು:

ಬೆಂಗಳೂರು ನಗರ ಸೈಬರ್ ಕ್ರೆöÊಂ ಘಟಕವು ಆನ್‌ಲೈನ್ ವಂಚನೆ, ಹಣಕಾಸಿನ ಅವ್ಯವಹಾರ ಮತ್ತು ಇತರೆ ಡಿಜಿಟಲ್ ಅಪರಾಧಗಳಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಿ ಅಂತವರನ್ನು ಬಂಧಿಸುವ ಕಾರ್ಯಾಚರಣೆಯನ್ನು ಮುಂದುವರೆಸಿರುತ್ತದೆ.
• ಡಿಜಿಟಲ್ ಸುರಕ್ಷತೆ ಮತ್ತು ವಂಚನೆ ತಡೆಗೆ ಹಾಗೂ ಸೈಬರ್ ಅಪರಾಧಗಳ ಕುರಿತು ಜಾಗೃತಿ ಮೂಡಿಸಲು 1930 ಸೈಬರ್ ಸಹಾಯವಾಣಿ, ಆನ್‌ಲೈನ್/ಸೋಷಿಯಲ್ ಮೀಡಿಯಾ ದೂರು ಪೋರ್ಟ್ಲ್‌ಗಳು, ಮಹಿಳೆ-ಮಕ್ಕಳ ಮೇಲಿನ ಲೈಂಗಿಕ ಕಿರುಕುಳ, ಸೈಬರ್ ಸ್ಟಾಲ್ಕಿಂಗ್ ಮತ್ತು ಇತರೆ ಸೈಬರ್ ಅಪರಾಧಗಳ ಕುರಿತು ದೂರು ಸಲ್ಲಿಸಲು ಸೋಷಿಯಲ್ ಮೀಡಿಯಾ ಹ್ಯಾಂಡಲ್‌ಗಳ ಬಳಕೆ.

5. ಎಲ್ಲಾ ರೂಪದ ಅಪರಾಧಗಳ ಕುರಿತು ದೂರು ಸಲ್ಲಿಸಲು ಅಧಿಕೃತ ವ್ಯವಸ್ಥೆಗಳು:
ಸಾರ್ವಜನಿಕರು ಯಾವುದೇ ರೀತಿಯ ದೂರುಗಳನ್ನು ಸಲ್ಲಿಸಲು ಮತ್ತು ಪೊಲೀಸ್ ಸೇವೆಗಳನ್ನು ಬಳಸಿಕೊಳ್ಳಲು ಈ ಕೆಳಕಂಡ ಸಹಾಯ ವಾಣಿ ಅಥವಾ ಸೇವಾ ಸೌಲಭ್ಯಗಳನ್ನು ಬಳಸಿಕೊಳ್ಳಬಹುದಾಗಿದೆ.

ತುರ್ತು ಸಹಾಯವಾಣಿ ಸಂಖ್ಯೆಗಳು:
• 112 –

  • – Emergency Response Support System (ERSS)

• 1930 – ಸೈಬರ್ ವಂಚನೆ ಸಹಾಯವಾಣಿ
• 1933 – ರಾಷ್ಟಿಯ ಮಾದಕವಸ್ತು ಸಹಾಯವಾಣಿ  (MANAS)
• 1908 – ಮಾದಕವಸ್ತು ನಿಯಂತ್ರಣ ಸಹಾಯವಾಣಿ
• 14490 – ರಾಷ್ಟಿಯ ಮಹಿಳಾ ಸಹಾಯವಾಣಿ
• 1098 – ಮಕ್ಕಳ ಸಹಾಯವಾಣಿ

ಸಾರ್ವಜನಿಕ ಸುರಕ್ಷತೆಗೆ ನಮ್ಮ ಬದ್ದತೆ:

ಬೆಂಗಳೂರು ನಗರ ಪೊಲೀಸರು ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದರ ಜೊತೆಗೆ ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ನಾಗರೀಕರ ಸುರಕ್ಷತೆಯನ್ನು ಕಾಪಾಡುವಲ್ಲಿ ತಮ್ಮ ಅಚಲವಾದ ಬದ್ದತೆಯನ್ನು ಪ್ರದರ್ಶಿಸಲಾಗುತ್ತಿದೆ. ನಗರದ ಸಾರ್ವಜನಿಕರು ಈ ಆಧುನಿಕ ತಂತ್ರಜ್ಞಾನ ಆಧಾರಿತ ಸುರಕ್ಷತಾ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸುರಕ್ಷಿತ ಸಮಾಜ ನಿರ್ಮಾಣಕ್ಕಾಗಿ ಬೆಂಗಳೂರು ನಗರ ಪೊಲೀಸರೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles