ಸೋಲಿನ ಭಯದಿಂದ GBA ಚುನಾವಣೆ ಮುಂದೂಡುವ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಗ್ರೇಟರ್ ಬೆಂಗಳೂರು (ಜಿಬಿಎ) GBA ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಗೆಲ್ಲುವ ಭರವಸೆ ಇಲ್ಲದ ಕಾರಣ ಪದೇ ಪದೇ ಚುನಾವಣೆಯನ್ನು ಮುಂದಕ್ಕೆ ಹಾಕುವ ನಾಟಕವಾಡುತ್ತಿದೆ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Naryanaswamy) ಅವರು ಟೀಕಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ಚುನಾವಣೆಗೆ 2 ತಿಂಗಳು ಕಾಲಾವಕಾಶವನ್ನು ಸುಪ್ರೀಂ ಕೋರ್ಟ್ (Supreme Court) ನೀಡಿದೆ.

ಮೂರು ತಿಂಗಳು ಕಾಲಾವಕಾಶವನ್ನು ಸರ್ಕಾರ ಕೇಳಿತ್ತು. ಆದರೆ ಎರಡು ತಿಂಗಳು ಮಾತ್ರ ನೀಡಿದೆ. ಚುನಾವಣೆಯ ಬಗ್ಗೆ ಸಮೀಕ್ಷೆ ಮಾಡಿಸಿದ್ದಾರೆ. ಆದರೆ ಅವರಿಗೆ ಗೆಲುವಿನ ವರದಿ ಸಿಕ್ಕಿಲ್ಲ. ಆದ್ದರಿಂದ ಹೇಗಾದರೂ ಮಾಡಿ ಚುನಾವಣೆಯನ್ನು ಮುಂದಕ್ಕೆ ಹಾಕಲು ನೋಡಿದ್ದರು ಎಂದು ದೂರಿದರು.
ಈಗಾಗಲೇ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಸೂಚನೆ ಇತ್ತು. ಆದರೂ ಇವರು ಕೋರ್ಟ್ ಮೊರೆ ಹೋಗಿದ್ದರು. ಮತ್ತೆ ಮತ್ತೆ ಮನವಿ ಸಲ್ಲಿಸಿ ಮುಂದಕ್ಕೆ ಹಾಕಲು ನೋಡಿದ್ದರು ಎಂದು ಟೀಕಿಸಿದರು.
ಸೋಲು- ಗೆಲುವು ರಾಜಕೀಯದಲ್ಲಿ ಇದ್ದಿದ್ದೇ. ಒಂದು ಸಾರಿ ನಾವು ಗೆಲ್ಲಬಹುದು. ಇನ್ನೊಂದು ಬಾರಿ ಬೇರೆಯವರು ಗೆಲ್ಲಬಹುದು. ಆದರೆ ಯಾರೂ ವ್ಯವಸ್ಥೆಯನ್ನು ಕೆಡಿಸುವ ಕೆಲಸವನ್ನು ಮಾಡಬಾರದು. ಆದ್ದರಿಂದ ಕೋರ್ಟ್ ಆದೇಶವನ್ನು ಗೌರವಿಸಬೇಕು. ಇಲ್ಲದೇ ಹೋದರೆ ಮತ್ತಷ್ಟು ಸೋಲು ಕಾಂಗ್ರೆಸ್‍ಗೆ ಕಟ್ಟಿಟ್ಟ ಬುತ್ತಿ ಎಂದು ಹೇಳಿದರು.

ಕರ್ನಾಟಕವನ್ನೇ ತೆಗೆದು ಬೆಂಗಳೂರು ಮಾಡಿ…
ರಾಮನಗರವನ್ನು ಬೆಂಗಳೂರು ದಕ್ಷಿಣ ಮಾಡಿದರು. ಕೋಲಾರ ಮತ್ತು ಚಿಕ್ಕಬಳ್ಳಾಪುರವನ್ನೂ ಬೆಂಗಳೂರಿಗೆ ಸೇರಿಸುವ ಮಾತು ನಡೆಯುತ್ತಿದೆ. ಈಗ ತುಮಕೂರನ್ನು ಬೆಂಗಳೂರಿಗೆ ಸೇರಿಸಲು ಸರ್ಕಾರ ಹುನ್ನಾರ ನಡೆಸಿದೆ. ನಾಡಪ್ರಭು ಕೆಂಪೇಗೌಡ ಅವರ ನಿರ್ಮಿಸಿದ ಬೆಂಗಳೂರನ್ನು ಐದು ತುಂಡು ಮಾಡಿದ್ದೀರಿ. ಈ ರೀತಿ ಎಲ್ಲವನ್ನೂ ಬದಲಾಯಿಸುವ ಬದಲು ಇಡೀ ಕರ್ನಾಟಕವನ್ನೇ ತೆಗೆದು ಬೆಂಗಳೂರು ಅಂತ ಮಾಡಿದರೆ ಒಳ್ಳೆಯದು. ಆಗ ಯಾವುದನ್ನೂ ಯಾವುದಕ್ಕೆ ಸೇರಿಸುವ ಪ್ರಮೇಯವೇ ಇರುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಅಖಂಡ ಕರ್ನಾಟಕ ಎಂಬುದು ನಮ್ಮ ಅಸ್ಮಿತೆ. ಅದರಲ್ಲಿ ಜಿಲ್ಲೆಯ ಹೆಸರುಗಳು, ತಾಲೂಕುಗಳು ಸಹಜವಾಗಿ ಇರುತ್ತವೆ. ಅದನ್ನು ಒಪ್ಪಿಕೊಳ್ಳುವುದನ್ನು ಬಿಟ್ಟು ಅದನ್ನು ಇದನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಲ್ಲಾ ಯಾಕೆ. ಇದೆಲ್ಲ ಮೂಗಿಗೆ ತುಪ್ಪ ಸವರುವ ಕೆಲಸ ಎಂದು ಕೇಳಿದರು.
ಬೆಂಗಳೂರನ್ನು ವಿಸ್ತಾರವಾಗಿ ಬೆಳೆಸುವ ಬದಲು ತುಮಕೂರು, ಕೋಲಾರ ಮೈಸೂರನ್ನು ಬೆಳೆಸಲು ಮೂಲಸೌಕರ್ಯ ಮತ್ತು ಸೌಲಭ್ಯ ನೀಡಿ. ಆನೇಕಲ್‍ನಲ್ಲಿ ರೈತರ ಫಲವತ್ತಾದ ಜಮೀನನ್ನು ಗೃಹ ಮಂಡಳಿ ಹೆಸರಲ್ಲಿ ಕ್ರಿಕೆಟ್ ಸ್ಟೇಡಿಯಂ ಮಾಡ್ತಾ ಇದ್ದಾರೆ. ಮನೆಗಳನ್ನು ನಿರ್ಮಿಸಲು ರೈತರಿಂದ ಜಮೀನು ಪಡೆದು ಬೇರೆ ಉದ್ದೇಶಕ್ಕೆ ಬಳಸುತ್ತಿದ್ದಾರೆ. ಇದು ಲೂಟಿಗಾಗಿ ಮಾಡುತ್ತಿರುವುದೇ ಹೊರತು ಬೆಂಗಳೂರಿನ ಅಭಿವೃದ್ಧಿಗಾಗಿ ಅಲ್ಲ. ದೂರ ಇರುವ ತುಮಕೂರು ಬೆಳೆಸುವ ಬದಲು ಹತ್ತಿರದ ಪಟ್ಟಣಗಳನ್ನು ಬೆಳೆಸಿ. ಎಲ್ಲಕ್ಕೂ ಬೆಂಗಳೂರು ಹೆಸರು ಕೊಡುವುದು ಹಾಸ್ಯಾಸ್ಪದ ಎಂದು ಗೇಲಿ ಮಾಡಿದರು.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles