ರಾಹುಲ್‌ ಗಾಂಧಿ – ಸಿದ್ದರಾಮಯ್ಯನವರ ರಿಮೋಟ್‌ ನಿಂದ ನಡೆಯುವ ಸರ್ಕಾರ, ಸಿಎಂ ಡಿ.ಕೆ.ಶಿ.ಗೆ ಸ್ವಾತಂತ್ರ್ಯವಿಲ್ಲ: ಆರ್‌.ಅಶೋಕ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (C.M. D.K. Shivakumar) ಅವರ ನೇತೃತ್ವದಲ್ಲಿ ರಚನೆಯಾದ ಹೊಸ ಸರ್ಕಾರ, ರಾಹುಲ್‌ ಗಾಂಧಿ (Rahul Gandhi) ಮತ್ತು ಸಿದ್ದರಾಮಯ್ಯನವರ ರಿಮೋಟ್‌ ಕಂಟ್ರೋಲ್‌ನಿಂದ ನಡೆಯಲಿದೆ. ಇದರಿಂದ ಜನರಿಗೆ ಏನೂ ಹೊಸತು ಸಿಕ್ಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashok) ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗಿರುವುದು ಹಳೆ ಸಿನಿಮಾದ ಪೋಸ್ಟರ್‌ ಬದಲಾದಂತಿದೆ. ಮುಖ್ಯಮಂತ್ರಿ ನಿವಾಸದ ಮುಂಭಾಗದ ಫಲಕದಲ್ಲಿ ಹೆಸರು ಬದಲಾಗಿದೆಯೇ ಹೊರತು ಜನರ ಕಷ್ಟಗಳು ನೀಗಿಲ್ಲ. ರಾಜ್ಯಕ್ಕೆ ಹೊಸ ಸಚಿವರು ಸಿಗುತ್ತಾರೆ ಎಂಬ ನಿರೀಕ್ಷೆ ಇದ್ದರೂ, ಹೊಸ ಮುಖಗಳು ಕಂಡಿಲ್ಲ. ಸಿದ್ದರಾಮಯ್ಯನವರ ಮಗ ಯತೀಂದ್ರ ಸಚಿವರಾಗಿ ಬಂದಿದ್ದಾರೆಯೇ ಹೊರತು ಹೊಸದೇನೂ ಇಲ್ಲ ಎಂದರು.

ಮಳೆಯಿಂದಾಗಿ ಬೆಳೆಹಾನಿಯಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿದೆ. ಐಪಿಎಲ್‌ ಸಂಭ್ರಮಾಚರಣೆಯಲ್ಲಿ ಹನ್ನೊಂದು ಅಮಾಯಕರ ಹತ್ಯೆಯಾಯಿತು. ಭ್ರಷ್ಟಾಚಾರದ ನೋವಿನಿಂದ ಅಧಿಕಾರಿಗಳ ಸಾವು, ಸರ್ಕಾರದ ನಿರ್ಲಕ್ಷ್ಯದಿಂದ ಬಾಣಂತಿಯರ ಸಾವು, ಮೈಕ್ರೋ ಫೈನಾನ್ಸ್‌ ಒತ್ತಡದಿಂದ ಜನರ ಸಾವು, ಸಂಬಳ ಸಿಗದೆ ನೌಕರರ ಸಾವು, ಆಸ್ಪತ್ರೆ ಗೋಡೆ ಕುಸಿದು ಬೀದಿ ಬದಿ ವ್ಯಾಪಾರಿಗಳ ಸಾವು, ಬೆಂಗಳೂರು ಸೇರಿದಂತೆ ಎಲ್ಲ ಕಡೆ ರಸ್ತೆಗಳಲ್ಲಿ ಗುಂಡಿಗಳ ಹಾವಳಿ ಹೀಗೆ ಅನೇಕ ಸಮಸ್ಯೆಗಳು ಇನ್ನೂ ಇದೆ. ಜನರು ಉತ್ತಮ ಆಡಳಿತ ಕೇಳಿದರೆ, ಕಾಂಗ್ರೆಸ್‌ ಪಕ್ಷ ಕುರ್ಚಿಯ ಬದಲಾವಣೆ ಮಾತ್ರ ಮಾಡಿದೆ ಎಂದರು.

ಬೆಂಗಳೂರಿನಲ್ಲಿ ನೂರಾರು ಕಟೌಟ್‌ಗಳನ್ನು ಅಳವಡಿಸಲಾಗಿದೆ. ಫಲಕ ಹಾಕಬೇಡಿ ಎಂದು ಸಿಎಂ
ಹೇಳಿದರೂ ಅವುಗಳನ್ನು ಅಳವಡಿಸಲಾಗಿದೆ. ಅಂದರೆ ಮುಖ್ಯಮಂತ್ರಿ ಏನೇ ಹೇಳಿದರೂ ಅದು ಅನುಷ್ಠಾನವಾಗುವುದಿಲ್ಲ ಎಂಬುದು ಸಾಬೀತಾಗಿದೆ.

ಮಹಿಳಾ ವಿರೋಧಿ ಕಾಂಗ್ರೆಸ್

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್‌ ವಿರೋಧಿಸಿದೆ. ನಿನ್ನೆ ನಡೆದ ಪದಗ್ರಹಣ ಸಮಾರಂಭದಲ್ಲಿ ಒಬ್ಬರೇ ಒಬ್ಬ ಮಹಿಳೆಗೆ ಅವಕಾಶ ನೀಡಿಲ್ಲ. ಕಾಂಗ್ರೆಸ್‌ ಮಹಿಳೆಯರಿಗೆ ಮೋಸ ಮಾಡಿದೆ ಎಂದರು.

ಸಂವಿಧಾನದ ಪುಸ್ತಕ ಏಕೆ?

ಪ್ರಮಾಣವಚನದ ವೇಳೆ ಸಿಎಂ ಡಿ.ಕೆ.ಶಿವಕುಮಾರ್‌ ಸಂವಿಧಾನದ ಪುಸ್ತಕ ಹಿಡಿದುಕೊಂಡಿದ್ದರು. ಬಾಬಾ ಸಾಹೇಬ್‌ ಅಂಬೇಡ್ಕರ್‌ (Babasaheb Ambedkar)ಅವರು ಸಿಎಂಗೆ ಎಲ್ಲ ಅಧಿಕಾರ ನೀಡಿದ್ದಾರೆ. ಆದರೆ ಸಚಿವ ಸಂಪುಟದಲ್ಲಿ ಡಿ.ಕೆ.ಶಿ ಕಡೆಗಿನ ಯಾವುದೇ ಶಾಸಕರು ಇಲ್ಲ. ಅಂದರೆ ಎಲ್ಲವನ್ನೂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್‌ ತೀರ್ಮಾನ ಮಾಡಿದೆ. ಡಿ.ಕೆ.ಶಿ ಅವರಿಗೆ ಯಾವುದೇ ಸ್ವಾತಂತ್ರ್ಯ ಸಿಕ್ಕಿಲ್ಲ ಎಂದು ಲೇವಡಿ ಮಾಡಿದರು.

ಬೆಂಗಳೂರಿನಲ್ಲಿ ಈಗಾಗಲೇ ಇ-ಖಾತಾ ಹೆಸರಲ್ಲಿ ದಂಧೆ ನಡೆಯುತ್ತಿದೆ. ಇದನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಿದರೆ ಇನ್ನಷ್ಟು ದಂಧೆ ನಡೆಯುತ್ತದೆ. ಸರ್ವರ್‌ ಡೌನ್‌ ಎಂದು ಹೇಳಿ ಜನರನ್ನು ವಂಚಿಸಲಾಗುತ್ತಿದೆ. ಲಂಚ ಕೊಟ್ಟರೆ ಮಾತ್ರ ಸರ್ವರ್‌ ಕೆಲಸ ಮಾಡುತ್ತದೆ ಎಂದು ಹರಿಹಾಯ್ದರು.

ನೇಮಕದ ಬಗ್ಗೆ ಸುಳ್ಳು ಭರವಸೆ

56,000 ಹುದ್ದೆಗಳ ಸರ್ಕಾರಿ ನೇಮಕಾತಿ ಬಗ್ಗೆಯೂ ಸುಳ್ಳು ಹೇಳಲಾಗಿದೆ. ಈ ಹಿಂದೆಯೇ ಇದರ ಬಗ್ಗೆ ತೀರ್ಮಾನವಾಗಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ. ಇಷ್ಟೊಂದು ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಲ್ಲಿ ಹಣಕಾಸು ಕೊರತೆ ಇದೆ. ಇಂತಹ ಸ್ಥಿತಿಯಲ್ಲಿ ಹೊಸ ನೇಮಕಾತಿ ಮಾಡಲು ಸಾಧ್ಯವೇ ಇಲ್ಲ ಎಂದರು.

ಕಾಂಗ್ರೆಸ್ ನಿರಾಶ್ರಿತರಿಗೆ ಭಾರತ್ ಜೋಡೊ ಸಂಘಟನೆ*

ಭಾರತ್‌ ಜೋಡೋಗೂ ಸರ್ಕಾರಕ್ಕೂ ಏನು ಸಂಬಂಧವಿದೆ? ಇದರಿಂದ ಕಾಂಗ್ರೆಸ್‌ನ ನಿರಾಶ್ರಿತರಿಗೆ ಪ್ರಯೋಜನವಾಗಲಿದೆಯೇ ಹೊರತು ಯುವಜನರಿಗೆ ಉಪಯೋಗವಿಲ್ಲ. ಈಗಾಗಲೇ ಗುತ್ತಿಗೆದಾರರಿಗೆ ಬಾಕಿ ಕೊಡಬೇಕಿದೆ. ಆ ಹಣವನ್ನು ಕೊಟ್ಟರೆ ಸಾಕಿತ್ತು. ಉತ್ತರ ಕರ್ನಾಟಕದಲ್ಲಿ ಮಕ್ಕಳು ಶಾಲೆಯ ಒಳಗೆ ಹೋಗದಂತಹ ಸ್ಥಿತಿ ಇದೆ. ಇಂತಹ ಶಾಲೆಗಳನ್ನು ಅಭಿವೃದ್ಧಿ ಮಾಡಿದರೆ ಸಾಕಾಗಿದೆ. ಸುಖಾಸುಮ್ಮನೆ ಘೋಷಣೆಗಳನ್ನು ಮಾಡಿದರೆ ಸಾಲುವುದಿಲ್ಲ. ಅಬಕಾರಿ ಬಿಟ್ಟರೆ ಎಲ್ಲ ಇಲಾಖೆಗಳಲ್ಲಿ ಆದಾಯ ಕಡಿಮೆಯಾಗಿದೆ. ಯೋಜನೆಗಳನ್ನು ಘೋಷಣೆ ಮಾಡಿ, ಅದನ್ನು ಜಾರಿ ಮಾಡದೆ ನಂತರ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಆರೋಪ ಮಾಡುತ್ತಾರೆ ಎಂದು ದೂರಿದರು.

ಹಣಕಾಸು ಶ್ವೇತಪತ್ರ ಮಂಡಿಸಿ

ಕೇರಳಂನ ನೂತನ ಮುಖ್ಯಮಂತ್ರಿ ವಿ.ಡಿ.ಸತೀಶನ್‌ ಅವರು ತಮ್ಮ ರಾಜ್ಯದ ಆರ್ಥಿಕ ಸ್ಥಿತಿ- ಗತಿಯ ನೈಜ ಚಿತ್ರಣವನ್ನು ಜನರ ಮುಂದಿಡುವ ಉದ್ದೇಶದಿಂದ ಹಣಕಾಸು ಶ್ವೇತಪತ್ರ ಮಂಡಿಸಿರುವುದು ಸ್ವಾಗತಾರ್ಹ. ಅದೇ ಮಾದರಿಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೂಡ ರಾಜ್ಯದ ಹಣಕಾಸಿನ ಸ್ಥಿತಿಗತಿಯ ಕುರಿತು ಶ್ವೇತಪತ್ರ ಮಂಡಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಈ ಕುರಿತು ಅಶೋಕ್ ಅವರು ಟ್ವೀಟ್‌ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಬಿಟ್ಟುಹೋಗಿರುವ ಆರ್ಥಿಕ ಬಳುವಳಿ ಏನು ಎಂಬುದನ್ನು ತಿಳಿದುಕೊಳ್ಳುವ ಹಕ್ಕು ರಾಜ್ಯದ ಜನರಿಗಿದೆ. ರಾಜ್ಯದ ಸಾಲ ಎಷ್ಟು ಹೆಚ್ಚಾಗಿದೆ? ಸರ್ಕಾರದ ಖಜಾನೆಯ ನಿಜವಾದ ಸ್ಥಿತಿಗತಿ ಏನು? ಅವೈಜ್ಞಾನಿಕ ಯೋಜನೆಗಳು, ಮತಬ್ಯಾಂಕ್ ರಾಜಕಾರಣ ಮತ್ತು ದುಂದುವೆಚ್ಚಗಳಿಂದ ರಾಜ್ಯದ ಆರ್ಥಿಕತೆಗೆ ಎಷ್ಟು ಹಾನಿಯಾಗಿದೆ? ಮುಂದಿನ ಪೀಳಿಗೆಯ ಹೆಗಲ ಮೇಲೆ ಎಷ್ಟು ಸಾಲದ ಹೊರೆ ಹಾಕಲಾಗಿದೆ ಎಂದು ತಿಳಿಯಬೇಕಿದೆ. ಮುಚ್ಚಿಡಲು, ಮರೆಮಾಚಲು ಏನೂ ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರ ತಕ್ಷಣವೇ ವಿಧಾನಸಭೆಯಲ್ಲಿ ಹಣಕಾಸು ಶ್ವೇತಪತ್ರ ಮಂಡಿಸಬೇಕು. ಸತ್ಯವನ್ನು ಹೊರಗೆ ಬರಲು ಬಿಡಬೇಕು. ಕರ್ನಾಟಕಕ್ಕೆ ಪಾರದರ್ಶಕತೆ ಬೇಕು. ಕನ್ನಡಿಗರಿಗೆ ಉತ್ತರದಾಯಿತ್ವ ಬೇಕು. ಎಲ್ಲಕ್ಕಿಂತ ಮುಖ್ಯವಾಗಿ, ಸಿದ್ದರಾಮಯ್ಯ ಸರ್ಕಾರ ರಾಜ್ಯಕ್ಕೆ ಬಿಟ್ಟುಹೋಗಿರುವ ನಿಜವಾದ “ಸಾಕ್ಷಿಗುಡ್ಡೆ” ಏನು ಎಂಬುದು ಜನರಿಗೆ ತಿಳಿಯಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Hot this week

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

Topics

ಬಾಲಕನ ಶ್ವಾಸಕೋಶದಿಂದ ಪಿನ್ ಹೊರ ತೆಗೆದು ಜೀವ ಉಳಿಸಿದ ವೈದ್ಯರು

ಬೆಂಗಳೂರು: ಭಾರತದಲ್ಲಿ ಅತಿಹೆಚ್ಚು ಆಸ್ತಮಾ ರೋಗಿಗಳು ಇರುವ ನಗರಗಳಲ್ಲಿ ಬೆಂಗಳೂರು ಕೂಡಾ...

ಅರ್ಥರ್ ಓಸ್ ಬರ್ನ್ ಅವರ ನಂಬಲಸಾಧ್ಯವಾದ ಸಾಯಿಬಾಬಾ

ಹಾಸನ:ಗೊರೂರು ಅನಂತ ರಾಜು(Gorur AnanthaRaju) ಯಾರೊಡನೆಯೂ ಮಾತನಾಡದೆ, ದಾಪುಗಾಲು ಹಾಕುತ್ತಾ ರಸ್ತೆಯಲ್ಲಿ...

ಶ್ರೀಲಂಕಾದ ಉಪ ಹೈಕಮಿಷನರ್-ರಾಜ್ಯಪಾಲರ ಸೌಹಾರ್ದಯುತ ಭೇಟಿ

ಶ್ರೀ ಡಾ. ಗಣೇಶನಾಥನ್ ಗೀತೀಶ್ವರನ್,(Shri Dr. Ganesanathan Geathiswaran) ಶ್ರೀಲಂಕಾದ ಉಪ...

ನಿಯೋ ಫ್ರೆಶ್ ಸೂಪರ್ ಮಾರ್ಕೆಟ್‌ಗೆ ನಂಜಾವಧೂತ ಮಹಾಸ್ವಾಮೀಜಿ ಚಾಲನೆ

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ...

ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 09.06.2026 TUESDAY.ಮಂಗಳವಾರ*ಸಂವತ್ಸರ:ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA: UTTARAYANA. ಋತು:...

ಲಲಿತಕಲಾ ಅಕಾಡೆಮಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ (Information Dept.) ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ...

ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 07.06.2026 SUNDAY.ಭಾನುವಾರ*ಸಂವತ್ಸರ: ಪರಾಭವ SAMVATSARA : PARABHAVA. ಆಯಣ: ಉತ್ತರಾಯಣ AYANA:...

Related Articles