ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯು 2026-27ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ವಿದ್ಯಾಲಯಗಳಲ್ಲಿ ಬಿ.ಎಫ್.ಎ ಅಥವಾ ಎಂ.ಎಫ್.ಎ ವ್ಯಾಸಂಗ ಮಾಡುತ್ತಿರುವ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಚಿತ್ರಕಲಾ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಆರ್ಥಿಕ ನೆರವನ್ನು ಶೈಕ್ಷಣಿಕ ವಿದ್ಯಾಭ್ಯಾಸದ ಅವಧಿಯಲ್ಲಿ ಒಂದು ಬಾರಿ ಮಾತ್ರ ನೀಡಲಾಗುತ್ತದೆ.
ಅರ್ಜಿದಾರರು ಕಡ್ಡಾಯವಾಗಿ ಕರ್ನಾಟಕದವರಾಗಿರಬೇಕು. ಅರ್ಜಿಯನ್ನು ಕಡ್ಡಾಯವಾಗಿ ಕನ್ನಡದಲ್ಲೇ ಭರ್ತಿ ಮಾಡಬೇಕು. ಅಭ್ಯರ್ಥಿಗಳು ಈ ಹಿಂದೆ ಅಕಾಡೆಮಿಯಿಂದ ಯಾವುದೇ ವಿದ್ಯಾರ್ಥಿ ವೇತನ ಪಡೆದಿಲ್ಲ ಎಂಬುದರ ಕುರಿತು ಸಂಬಂಧಪಟ್ಟ ಕಲಾ ವಿದ್ಯಾಲಯದ ಮುಖ್ಯಸ್ಥರು ಅಥವಾ ಪ್ರಾಚಾರ್ಯರಿಂದ ದೃಢೀಕರಣ ಪತ್ರವನ್ನು ಲಗತ್ತಿಸುವುದು ಕಡ್ಡಾಯವಾಗಿದೆ.
ಇತ್ತೀಚಿನ 02 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಅಭ್ಯರ್ಥಿಯ 02 ಚಿತ್ರ ಕಲಾಕೃತಿಗಳ ಛಾಯಾಚಿತ್ರಗಳು (5*6 ಅಳತೆಯದು), ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಹಿಂದಿನ ವರ್ಷದ ಕೋರ್ಸ್ನಲ್ಲಿ ಪಡೆದ ಅಂಕಗಳ ದೃಢೀಕೃತ ಅಂಕಪಟ್ಟಿ ಹಾಗೂ ಪ್ರಾಚಾರ್ಯರಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಸ್ವ-ವಿವರ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.
ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ 2026 ರ ಜೂನ್ 30 ರ ಒಳಗಾಗಿ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು – 560 002 ಈ ವಿಳಾಸಕ್ಕೆ ಕಳುಹಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22480297, ಇ-ಮೇಲ್: kla.karnataka@gmail.com ಹಾಗೂ ವೆಬ್ಸೈಟ್ https://lalitkala.karnataka.
ಕಲಾಶಿಬಿರ, ತರಬೇತಿ ಕಾರ್ಯಾಗಾರ ಹಾಗೂ ಕಮ್ಮಟಗಳಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ
ಕರ್ನಾಟಕ ಲಲಿತಕಲಾ ಅಕಾಡೆಮಿಯು ಚಿತ್ರಕಲೆಯನ್ನು ಉತ್ತೇಜಿಸುವ ಉದ್ದೇಶದಿಂದ 2026-27ನೇ ಸಾಲಿನ ಗಿರಿಜನ ಉಪಯೋಜನೆಯಡಿಯಲ್ಲಿ (ಪರಿಶಿಷ್ಟ ಪಂಗಡ) ಚಿತ್ರಕಲಾ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ಕಲಾಶಿಬಿರ, ತರಬೇತಿ ಕಾರ್ಯಾಗಾರ ಹಾಗೂ ಕಮ್ಮಟಗಳಲ್ಲಿ ಪಾಲ್ಗೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ.
ಕರ್ನಾಟಕದ ಅಂಗೀಕೃತಗೊಂಡ ಚಿತ್ರಕಲಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ, 18 ವರ್ಷ ಮೇಲ್ಪಟ್ಟ ಪರಿಶಿಷ್ಟ ಪಂಗಡದ ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಕಡ್ಡಾಯವಾಗಿ ಕರ್ನಾಟಕದವರಾಗಿದ್ದು, 18 ವರ್ಷ ಮೇಲ್ಪಟ್ಟವರಾಗಿರಬೇಕು ಮತ್ತು ಅಂಗೀಕೃತ ಕಾಲೇಜಿನಲ್ಲಿ ಚಿತ್ರಕಲಾ ವ್ಯಾಸಂಗ ಮಾಡುತ್ತಿರಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.
ಅರ್ಜಿಯೊಂದಿಗೆ ಇತ್ತೀಚಿನ 2 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, 04 ಚಿತ್ರಕಲಾಕೃತಿಗಳ (5×6 ಅಳತೆಯ) ಛಾಯಾಚಿತ್ರಗಳು/ಪೋಟೋಗಳು, ಸ್ವ-ವಿವರ, ಆರ್ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಗಳು, ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿರಬೇಕು. ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಚಾರ್ಯರಿಂದ ಪಡೆದ ವ್ಯಾಸಂಗ ಪ್ರಮಾಣ ಪತ್ರ, ಹಿಂದಿನ ವರ್ಷದ ಕೋರ್ಸಿನಲ್ಲಿ ಪಡೆದ ಅಂಕಪಟ್ಟಿ (ದೃಢೀಕೃತ ಜೆರಾಕ್ಸ್ ಪ್ರತಿ) ಲಗತ್ತಿಸಿ, ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು – 560 002 ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಅಕಾಡೆಮಿಯ ಇ-ಮೇಲ್ kla.karnataka@gmail.com ಅಥವಾ ದೂರವಾಣಿ ಸಂಖ್ಯೆ: 080-22480297 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಲಲಿತಕಲಾ ಅಕಾಡೆಮಿಯ ರಿಜಿಸ್ಟ್ರಾರ್ ಎನ್. ನಮ್ರತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

