ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ

ಬೆಂಗಳೂರು: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು ‘ರಾಷ್ಟ್ರೀಯ ಲಸಿಕಾ ದಿನ (Pulse Polio)’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ (Department of Health and family welfare)ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.

ಭಾರತವು ಕಳೆದ 14 ವರ್ಷಗಳಿಗೂ ಮೇಲ್ಪಟ್ಟು ಪೋಲಿಯೊ ಮುಕ್ತ ರಾಷ್ಟ್ರವಾಗಿದ್ದರೂ, ಜಗತ್ತಿನ ಕೆಲವು ಭಾಗಗಳಲ್ಲಿ ಹಾಗೂ ಭಾರತದ ನೆರೆ ರಾಷ್ಟ್ರಗಳಲ್ಲಿ ‘ವೈಲ್ಡ್ ಪೋಲಿಯೋ ವೈರಸ್’  (Wild Polio Virus) ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯವಾಗಿದೆ. ಭಾರತ ತಜ್ಞ ಸಲಹಾ ಗುಂಪಿನ ಶಿಫಾರಸ್ಸಿನ ಅನ್ವಯ ಈ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಲಸಿಕೆ ನೀಡಲಾಗುವುದು. ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ. ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ.

ಎಲ್ಲಾ ಇಲಾಖೆಗಳ ಸಹಕಾರಕ್ಕೆ ಮನವಿ:

ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳ ಸಹಕಾರವನ್ನು ಬಯಸಿರುವ ಆರೋಗ್ಯ ಇಲಾಖೆಯು, ಹೆಚ್ಚಿನ ಪ್ರಚಾರ ನೀಡಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು, ಎಲ್ಲಾ ಮಾಧ್ಯಮಗಳು, ಆಕಾಶವಾಣಿ ಹಾಗೂ ಎಫ್.ಎಮ್ ವಾಹಿನಿಗಳಲ್ಲಿ ಜಿಂಗಲ್ಸ್ ಮೂಲಕ ಈ ಅಭಿಯಾನದ ಬಗ್ಗೆ ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಹಾಗೂ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿಗಳನ್ನು ಹಾಕಿಸಿ ಸಹಕರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

Hot this week

ಗೋಸೇವೆಗಾಗಿ ಮಹೇಂದ್ರ ಮುಣೋತ್‌ ಕುಟುಂಬ 56 ಲಕ್ಷ ರೂ. ದೇಣಿಗೆ

ತಮ್ಮ ತಂದೆ ಮೋತಿಲಾಲ್ ಮುಣೋತ್ (Motilal Munnoth) ಅವರ ಸ್ಮರಣಾರ್ಥ ಅವರ...

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಗೌಶುಭಮ್ ಸಹಯೋಗ

ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು...

ಕರ್ನಾಟಕ ರಾಜ್ಯ ಬರಹಗಾರರ ಸಂಘದ ಕಲಾವಿದರಿಗೆ ಕರ್ನಾಟಕ ಕಲಾ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ(Hoovina Hadagali) ರಾಜ್ಯಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ...

ದೆಹಲಿಯ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಕಚೇರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ದೆಹಲಿಯಲ್ಲಿನ ರಾಷ್ಟ್ರೀಯ ಮಹಿಳಾ...

Topics

ತಂತ್ರಜ್ಞಾನ ಚಾಲಿತ ಮತದಾರರ ನೋಂದಣಿ ಕುರಿತು ಒಂದು ದಿನದ ಅಂತಾರಾಷ್ಟ್ರೀಯ ಕಾರ್ಯಗಾರ

ಭಾರತದ ಚುನಾವಣಾ ಆಯೋಗವು, ಭಾರತೀಯ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಮತ್ತು ಚುನಾವಣಾ ನಿರ್ವಹಣಾ...

ನಿತ್ಯ ಪಂಚಾಂಗ 13.06.2026 ಶನಿವಾರ SATURDAY

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 13.06.2026 ಶನಿವಾರ SATURDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಪವಮಾನಪುರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಸಂಗೀತ ಸೇವೆ

ಬೆಂಗಳೂರು ; ಶ್ರೀ ರಾಘವೇಂದ್ರ ಸ್ವಾಮಿಗಳ( Sri Raghavendra Swamy Mutt)...

Related Articles