
ಡಾ. ಡಿ.ಆರ್. ವಿಜಯಸಾರಥಿ ಮಾತನಾಡಿ, ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಭವಿಷ್ಯ ನಿರ್ಮಾಣದ ಅತ್ಯಂತ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಜೀವನದ ದಿಕ್ಕನ್ನು ನಿರ್ಧರಿಸುತ್ತವೆ. ಹದಿಹರೆಯದ ವಯಸ್ಸಿನಲ್ಲಿ ಅನೇಕ ಆಕರ್ಷಣೆಗಳು ಮತ್ತು ಸವಾಲುಗಳು ಎದುರಾಗುವುದು ಸಹಜ.
ಆದರೆ ವಿದ್ಯಾರ್ಥಿಗಳು ತಮ್ಮ ಪೋಷಕರ ಕನಸು, ಕುಟುಂಬದ ನಿರೀಕ್ಷೆಗಳು ಹಾಗೂ ತಮ್ಮ ಭವಿಷ್ಯದ ಗುರಿಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣದ ಕಡೆ ಹೆಚ್ಚಿನ ಗಮನ ಹರಿಸಬೇಕು. ಶಿಸ್ತು, ಪರಿಶ್ರಮ ಮತ್ತು ದೃಢಸಂಕಲ್ಪವೇ ಯಶಸ್ಸಿನ ಗುಟ್ಟು ಪ್ರತಿಯೊಬ್ಬ ವಿದ್ಯಾರ್ಥಿಯ ಯಶಸ್ಸಿನ ಹಿಂದೆ ತಂದೆ-ತಾಯಿ ಮತ್ತು ಶಿಕ್ಷಕರ ತ್ಯಾಗ, ಮಾರ್ಗದರ್ಶನ ಹಾಗೂ ಆಶೀರ್ವಾದ ಅಡಗಿದೆ. ಸಮಯ ಸದುಪಯೋಗಪಡಿಸಿಕೊಂಡು ಗುರಿ ಸಾಧನೆಯತ್ತ ಮುನ್ನಡೆಯಬೇಕಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಿರ್ದೇಶಕ ಗುರುಪ್ರಸಾದ್ ಮಾತನಾಡಿ, “ಕಾಲೇಜು ಜೀವನ ಕೇವಲ ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತವಾಗಿಲ್ಲ. ಅದು ವ್ಯಕ್ತಿತ್ವ ರೂಪಿಸುವ ಹಂತವಾಗಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಗುರುತಿಸಿಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವ ನಾಗರಿಕರಾಗಿ ಬೆಳೆಯಬೇಕು” ಎಂದು ಹೇಳಿದರು.
ನಟಿ ರದ್ಯಾ ರಾಜ್ ಮಾತನಾಡಿ, “ನಿಮ್ಮ ಜೀವನದ ಕಥೆಯ ನಿಜವಾದ ನಾಯಕ-ನಾಯಕಿಯರು ನೀವೇ. ನಿಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಕನಸುಗಳನ್ನು ಗುರಿಯಾಗಿಸಿಕೊಂಡು ಶ್ರಮಿಸಿದರೆ ಯಶಸ್ಸು ನಿಮ್ಮನ್ನು ಹುಡುಕಿಕೊಂಡು ಬರುತ್ತದೆ” ಎಂದು ಪ್ರೇರಣಾದಾಯಕ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀ ವಾಸವಿ ಇಂಟರ್ನ್ಯಾಷನಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ ಅಶ್ವಿನಿ ಹೆಚ್.ಸಿ., ಪ್ರಾಂಶುಪಾಲರಾದ ಡಾ. ರಂಗಸ್ವಾಮಿ, ಪದ್ಮ, ಸೌಭಾಗ್ಯ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು, ಸಿಬ್ಬಂದಿ ಭಾಗವಹಿಸಿದ್ದರು.

