ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ (Department of Women and Child Development)ಬೆಂಗಳೂರು ರಾಜ್ಯ ಯೋಜನೆಯಡಿ, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಒಟ್ಟು 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 56 ಸಹಾಯಕಿಯರ (Assitant Posts) ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕದಲ್ಲಿ (Notice Board) ಪ್ರಕಟಿಸಲಾಗಿದೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಆಕ್ಷೇಪಣೆಗಳನ್ನು ಹೊಂದಿದ್ದಲ್ಲಿ, ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ತಮ್ಮ ಆಕ್ಷೇಪಣೆಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ರಾಜ್ಯ ಯೋಜನೆ, 1ನೇ ಮಹಡಿ, ಬಿಬಿಎಂಪಿ ಕಟ್ಟಡ, ಎನ್.ಆರ್. ಕಾಲೋನಿ, ಬೆಂಗಳೂರು – 560004 ಈ ವಿಳಾಸಕ್ಕೆ 2026ರ ಜೂನ್ 19, ಸಂಜೆ 5.30 ರೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.

