ವೈದ್ಯರು ಕಣ್ಣಿಗೆ ಕಾಣುವ ದೇವರು, ಜನರ ನಂಬಿಕೆ ಉಳಿಸಿಕೊಳ್ಳಿ : ಡಿ.ಕೆ. ಶಿವಕುಮಾರ್

ವೈದ್ಯರು ಕಣ್ಣಿಗೆ ಕಾಣುವ ದೇವರು. (Doctors are Gods) ಕಷ್ಟ ಇದ್ದರೂ ಬಹಳ ನಂಬಿಕೆ ಹಾಗೂ ವಿಶ್ವಾಸದಿಂದ ವೈದ್ಯರ ಬಳಿ ಹೋಗುತ್ತಾರೆ. ನೀವು ಅವರ ನಂಬಿಕೆ ಉಳಿಸಿಕೊಂಡು ಸೇವೆ ಮಾಡಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar)  ಅವರು ವೈದ್ಯ ಪದವೀಧರರಿಗೆ ಕಿವಿಮಾತು ಹೇಳಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ವಾರ್ಷಿಕ ಘಟಿಕೋತ್ಸವದಲ್ಲಿ (Convication) ಶಿವಕುಮಾರ್ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಜ್ಯಪಾಲರ (Governor) ಜತೆ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು
ಈ ವೃತ್ತಿಯಲ್ಲಿ ನಿಮಗೆ ನಿತ್ಯ ಸವಾಲು ಎದುರಾಗುತ್ತದೆ. ನಿಮ್ಮ ಮುಂದೆ ದೊಡ್ಡ ಸ್ಪರ್ಧೆ ಇದೆ. ನಾನು ಬೇರೆ ದೇಶಗಳಲ್ಲಿ ಪ್ರವಾಸ ಮಾಡಿದ್ದೇನೆ. ಅಲ್ಲಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಭಾರತೀಯರು ಅದರಲ್ಲೂ ಕರ್ನಾಟಕದ ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. ಇಲ್ಲಿರುವ ಗುಣಮಟ್ಟ ಭಾರತ ಮಾತ್ರವಲ್ಲ, ವಿಶ್ವದಲ್ಲೇ ಎಲ್ಲೂ ಇಲ್ಲ. ಇಲ್ಲಿ ತಯಾರಾದ ವೈದ್ಯರ ಪ್ರತಿಭೆ, ಗುಣಮಟ್ಟ, ಸೇವೆ ಹಾಗೂ ಬದ್ಧತೆಗೆ ಸರಿಸಾಟಿ ಯಾರೂ ಇಲ್ಲ” ಎಂದರು.
ಭಾರತ ಈಗ ಸಾಮಾಜಿಕ ಹಾಗೂ ತಂತ್ರಜ್ಞಾನ ಪರಿವರ್ತನೆಯ ತಿರುವಿನಲ್ಲಿದೆ. ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಅತ್ಯಾಧುನಿಕ ಆವಿಷ್ಕಾರ ಕಂಡಿದೆ. ನೀವು ಕೇವಲ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವುದರ ಬಗ್ಗೆ ಮಾತ್ರ ಗಮನ ಹರಿಸಬಾರದು. ಗ್ರಾಮೀಣ ಪ್ರದೇಶದಲ್ಲೂ ಆರೋಗ್ಯ ಸೇವೆ ಒದಗಿಸುವತ್ತ ಗಮನಹರಿಸಬೇಕು” ಎಂದು ಕರೆ ನೀಡಿದರು.
ನಶೆ ಮುಕ್ತ ಭಾರತ, ನಶೆ ಮುಕ್ತ ಕರ್ನಾಟಕ, ನಶೆ ಮುಕ್ತ ಕ್ಯಾಂಪಸ್ ಮಾಡುವ ಅಭಿಯಾನ ಯಶಸ್ವಿಯಾಗಲಿ. ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ವೈದ್ಯರಾಗಿದ್ದು, ಬಹಳ ಆಸಕ್ತಿಯಿಂದ ಈ ಕ್ಷೇತ್ರದಲ್ಲಿ ಸೇವೆ ಸಲ್ಲಿಸಬೇಕು ಎಂದು ಈ ಖಾತೆ ಜವಾಬ್ದಾರಿ ಹೊತ್ತಿದ್ದಾರೆ. ಅವರ ಅವಧಿಯಲ್ಲಿ ಇಲಾಖೆಯನ್ನು ಬಹಳ ಶಿಸ್ತಿನಿಂದ ನಡೆಸುತ್ತಿದ್ದು, ಇಷ್ಟು ಶಿಸ್ತನ್ನು ನಾನು ಕಳೆದ 30 ವರ್ಷಗಳಲ್ಲಿ ನೋಡಿರಲಿಲ್ಲ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಯಾವುದೇ ಒಂದು ವಿವಿಯ ಶಕ್ತಿ ಎಂದರೆ ಅಲ್ಲಿನ ವಿದ್ಯಾರ್ಥಿಗಳ ಸಂಖ್ಯೆಯಲ್ಲ, ಪದವಿಗಳ ಸಂಖ್ಯೆಯೂ ಅಲ್ಲ. ಅಲ್ಲಿರುವ ಗುಣಮಟ್ಟದ ಶಿಕ್ಷಕರು. ಶಿಕ್ಷಕರು ವಿದ್ಯಾರ್ಥಿಗಳ ಮಾರ್ಗದರ್ಶಕರಾಗಬೇಕು, ಸಂಶೋಧನೆಗೆ ಪೂರಕವಾಗಿ ವಿದ್ಯಾರ್ಥಿಗಳಿಗೆ ರೋಲ್ ಮಾಡೆಲ್ ಗಳಾಗಿರಬೇಕು. ಎಲ್ಲರೂ ಜತೆಯಾಗಿ ಕೆಲಸ ಮಾಡೋಣ. ಮುಂದೆ ನಾವು ನೀವೆಲ್ಲರೂ ರಾಮನಗರದ ಕ್ಯಾಂಪಸ್ ನಲ್ಲಿ ಸಿಗೋಣ. ಕರ್ನಾಟಕ ಸರ್ಕಾರ ಈ ವಿವಿಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲು ಬದ್ಧವಾಗಿದೆ” ಎಂದು ತಿಳಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ನಾನು ಮಾಡುತ್ತಿರುವ ಮೊದಲ ಭಾಷಣವಿದು. ನಾನುಹುಟ್ಟುತ್ತಾ ಕೃಷಿಕ, ವೃತ್ತಿಯಲ್ಲಿ ಉದ್ಯಮಿ, ಆಯ್ಕೆಯಲ್ಲಿ ಶಿಕ್ಷಣತಜ್ಞ, ಆಸಕ್ತಿಯಲ್ಲಿ ರಾಜಕಾರಣಿ. ರಾಜೀವ್ ಗಾಂಧಿ ವಿವಿ ದೇಶದ ಅತಿದೊಡ್ಡ ಆರೋಗ್ಯ ವಿವಿಗಳಲ್ಲಿ ಒಂದಾಗಿದೆ. 1044 ಅಫಿಲಿಯೇಟೆಡ್ ಕಾಲೇಜುಗಳಿವೆ. ಲಕ್ಷಾಂತರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಮ್ಮ ರಾಜ್ಯ ಪ್ರತಿ ವರ್ಷ 72 ಸಾವಿರ ಪದವೀಧರರನ್ನು ತಯಾರಿಸುತ್ತಿದೆ. ವರ್ಷಕ್ಕೆ 13,940 ವೈದ್ಯರನ್ನು ಕೊಡುಗೆಯಾಗಿ ನೀಡುತ್ತಿದ್ದು, ಜಗತ್ತಿನಲ್ಲೇ ಅತಿ ಹೆಚ್ಚು ವೈದ್ಯರನ್ನು ನೀಡುತ್ತಿರುವುದು ನಮ್ಮ ರಾಜ್ಯ. ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಶಂಕುಸ್ಥಾಪನೆಗೆ ಬಂದಾಗ, ವಿಶ್ವದ ನಾಯಕರು ಮೊದಲು ದೆಹಲಿಗೆ ಬಂದು, ನಂತರ ದೇಶದ ಇತರೆ ಭಾಗಗಳಿಗೆ ಹೋಗುತ್ತಿದ್ದರು. ಈಗ ಕಾಲ ಬದಲಾಗುತ್ತಿದೆ. ಮೊದಲು ಬೆಂಗಳೂರಿಗೆ ಬಂದು ನಂತರ ದೇಶದ ಇತರೆ ಭಾಗಗಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು.

ನಮ್ಮ ರಾಜ್ಯ ಕೇವಲ ಐಟಿ ಕ್ಷೇತ್ರ ಮಾತ್ರವಲ್ಲ ಇತರೆ ಕ್ಷೇತ್ರಗಳಲ್ಲಿ ಪ್ರತಿಭಾವಂತ ಮಾನವ ಸಂಪನ್ಮೂಲವನ್ನು ಹೊಂದಿದೆ. ಬೆಂಗಳೂರಿನಲ್ಲಿ 26 ಲಕ್ಷ ಐಟಿ ವೃತ್ತಿಪರರಿದ್ದಾರೆ. California ದಲ್ಲಿ 13 ಲಕ್ಷ ಐಟಿ ವೃತ್ತಿಪರರಿದ್ದಾರೆ. ನಮ್ಮ ರಾಜ್ಯದಲ್ಲೇ ಅತಿ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. 72 ವೈದ್ಯಕೀಯ ಕಾಲೇಜುಗಳಿದ್ದು, ದೇಶದ ಬೇರೆ ಯಾವುದೇ ರಾಜ್ಯಗಳಲ್ಲಿ ಇಲ್ಲ. ಇದು ನಮ್ಮ ಶಕ್ತಿ. ಇಲ್ಲಿ ತಯಾರಾದ ಅತ್ಯುತ್ತಮ ವೈದ್ಯರು, ನರ್ಸ್ ಗಳು ವಿಶ್ವದಾದ್ಯಂತ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವಿವರಿಸಿದರು.
ರಾಜೀವ್ ಗಾಂಧಿ ವಿವಿ ಇದಕ್ಕೆಲ್ಲಾ ಆಧಾರಸ್ತಂಭವಾಗಿ ನಿಂತಿದೆ. ಈ ವಿವಿಗೆ ನಮ್ಮ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿದೆ. ಅವರು ಶಿಕ್ಷಣವು ಸಮಾಜದಲ್ಲಿ ಸಮಾನತೆ ತರುವ ಸಾಧನ ಎಂದು ಹೇಳಿದವರು.

ಈ ವಿವಿ ಕಳೆದ 3 ದಶಕಗಳಲ್ಲಿ 8 ಲಕ್ಷ ಪದವೀಧರರನ್ನು ತಯಾರು ಮಾಡಿದೆ. ಸಮಾಜದ ಎಲ್ಲಾ ವರ್ಗಕ್ಕೆ ಆರೋಗ್ಯ ಸೇವೆ ನೀಡಿ ಕಾಪಾಡುವುದು ಈ ವಿವಿಯ ಮೂಲ ಉದ್ದೇಶ ಎಂದರು.


ನಾನು ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಪ್ರವೇಶಿಸಿದ ಕಾರಣ ಪದವಿ ಪಡೆಯಲು ಆಗಿರಲಿಲ್ಲ. ನಾನು 2008ರಲ್ಲಿ 47 ವರ್ಷವಾದಾಗ ಮೈಸೂರು ವಿವಿಯಲ್ಲಿ ಪದವಿ ಪಡೆದೆ. ನಾನು ಬಂಗಾರಪ್ಪ, ಎಸ್.ಎಂ ಕೃಷ್ಣ ಅವರ ಸರ್ಕಾರದಲ್ಲಿ ಸಚಿವನಾಗಿದ್ದೆ. ಆದರೆ ಪದವಿ ಪಡೆದಾಗ ಆದಾಗ ಆದ ಸಂತೋಷ ಬೇರೆ ಯಾವಾಗಲೂ ಆಗಿರಲಿಲ್ಲ. ಇಂದು ದೇವರ ಕೃಪೆಯಿಂದ ನಾನು ನಿಮ್ಮೆಲ್ಲರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇತಿಹಾಸ ಮರುಕಳಿಸುತ್ತದೆ. ನೀವು ಇಂದು ಪದವೀಧರರಾಗಿದ್ದೀರಿ. ನಿಮ್ಮ ಮುಂದೆ ಉತ್ತಮ ಭವಿಷ್ಯವಿದೆ. ಇಡೀ ವಿಶ್ವ ನಮ್ಮತ್ತ ಮುಖ ಮಾಡಿದೆ. ನೀವು ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಧನ್ಯವಾದಗಳು. ನೀವು ಬದುಕಿನಲ್ಲಿ ಆದರ್ಶ, ಗುರಿ ಇಟ್ಟುಕೊಂಡು ಸಾಧನೆ ಮಾಡಲು ಹೊರಟಿದ್ದೀರಿ. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

Hot this week

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ

ಬೆಂಗಳೂರು: ಕೃಷಿ ಮಾಡಿದವರಿಗೆ ಮಾತ್ರ ರೈತರ ಕಷ್ಟ ತಿಳಿಯುತ್ತೆ ಹೊರತು ಬಂಡೆ...

ಪದ್ಮನಾಭನಗರದಲ್ಲಿ ಧಾರ್ಮಿಕ ಜಾಗೃತಿ ಮೆರವಣಿಗೆ

ಬೆಂಗಳೂರು: ಸುರಭಾರತಿ ಸಾಂಸ್ಕೃತಿಕ ಪ್ರತಿಷ್ಠಾನ, (SuraBharathi Cultural Prathistana) ಹೊರಮಾವು (Horamavu)...

ವೈದ್ಯಕೀಯ ವೃತ್ತಿಯಲ್ಲಿ ನೈತಿಕತೆ, ಕರುಣೆ, ಸೇವಾ ಮನೋಭಾವ ಅತ್ಯಗತ್ಯ: ರಾಜ್ಯಪಾಲ ಗೆಹ್ಲೋಟ್

ವೈದ್ಯಕೀಯ ವೃತ್ತಿಯು ಕೇವಲ ಉದ್ಯೋಗವಲ್ಲ, ಅದು ಸೇವೆ ಮತ್ತು ಕರುಣೆಯ ಕ್ಷೇತ್ರವಾಗಿದ್ದು,...

ಕುಡಿತಿನಿ ಪ್ರದೇಶದ ಭೂಸ್ವಾಧಿನದಲ್ಲಿ ಭಾರೀ ಮೋಸ: ಜೂ. 18 – ಬಳ್ಳಾರಿ ಸಂಪೂರ್ಣ ಬಂದ್

Bellary : ಭಾರೀ ಕೈಗಾರಿಕೆಗಳ ಸ್ಥಾಪನೆಯ ಉದ್ದೇಶಕ್ಕೆಂದು ಬಳ್ಳಾರಿ ಜಿಲ್ಲೆಯ ಕುಡಿತಿನಿ...

Topics

ಬಂಡೆ ಒಡೆಯೋರಿಗೆ ರೈತರ ಕಷ್ಟ ತಿಳಿಯಲ್ಲ

ಬೆಂಗಳೂರು: ಕೃಷಿ ಮಾಡಿದವರಿಗೆ ಮಾತ್ರ ರೈತರ ಕಷ್ಟ ತಿಳಿಯುತ್ತೆ ಹೊರತು ಬಂಡೆ...

ಪದ್ಮನಾಭನಗರದಲ್ಲಿ ಧಾರ್ಮಿಕ ಜಾಗೃತಿ ಮೆರವಣಿಗೆ

ಬೆಂಗಳೂರು: ಸುರಭಾರತಿ ಸಾಂಸ್ಕೃತಿಕ ಪ್ರತಿಷ್ಠಾನ, (SuraBharathi Cultural Prathistana) ಹೊರಮಾವು (Horamavu)...

ವೈದ್ಯಕೀಯ ವೃತ್ತಿಯಲ್ಲಿ ನೈತಿಕತೆ, ಕರುಣೆ, ಸೇವಾ ಮನೋಭಾವ ಅತ್ಯಗತ್ಯ: ರಾಜ್ಯಪಾಲ ಗೆಹ್ಲೋಟ್

ವೈದ್ಯಕೀಯ ವೃತ್ತಿಯು ಕೇವಲ ಉದ್ಯೋಗವಲ್ಲ, ಅದು ಸೇವೆ ಮತ್ತು ಕರುಣೆಯ ಕ್ಷೇತ್ರವಾಗಿದ್ದು,...

ಕುಡಿತಿನಿ ಪ್ರದೇಶದ ಭೂಸ್ವಾಧಿನದಲ್ಲಿ ಭಾರೀ ಮೋಸ: ಜೂ. 18 – ಬಳ್ಳಾರಿ ಸಂಪೂರ್ಣ ಬಂದ್

Bellary : ಭಾರೀ ಕೈಗಾರಿಕೆಗಳ ಸ್ಥಾಪನೆಯ ಉದ್ದೇಶಕ್ಕೆಂದು ಬಳ್ಳಾರಿ ಜಿಲ್ಲೆಯ ಕುಡಿತಿನಿ...

ನಿತ್ಯ ಪಂಚಾಂಗ 17.06.2026 ಬುಧವಾರ WEDNESDAY.

ಸೂರ್ಯಸಿದ್ಧಾಂತ ನಿತ್ಯ ಪಂಚಾಂಗ 17.06.2026 ಬುಧವಾರ WEDNESDAY. ಸಂವತ್ಸರ: ಪರಾಭವ. SAMVATSARA : PARABHAVA. ಆಯಣ:...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ...

ವಿವಿಧ ದೇಶಗಳ ಗೌರವಾನ್ವಿತ ರಾಯಭಾರಿಗಳ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಿರಣ್ ಮಜುಂದಾರ್ ಶಾ, ಸುರೇಶ್, ಗೀತಾಂಜಲಿ...

Related Articles