ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ ಇಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಬೆಂಗಳೂರಿನ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ಮತದಾನ ನಡೆಯಲಿದೆ.
ಮತದಾನ ಪ್ರಕ್ರಿಯೆ ಮುಗಿದ ನಂತರ ಸಂಜೆ 5.00 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ.
ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೂಚನೆಗಳನ್ನು ಹಾಗೂ ಸುತ್ತೋಲೆಯನ್ನು ಈಗಾಗಲೇ ವಿಧಾನಸಭೆಯ ಎಲ್ಲಾ ಗೌರವಾನ್ವಿತ ಸದಸ್ಯರುಗಳಿಗೆ ಪ್ರತ್ಯೇಕವಾಗಿ ಕಳುಹಿಸಿಕೊಡಲಾಗಿದೆ ಎಂದು ಚುನಾವಣಾಧಿಕಾರಿ ಕರ್ನಾಟಕ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ -2026 ಹಾಗೂ ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಗಳಾದ ಎಂ.ಕೆ. ವಿಶಾಲಾಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

