ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತದಲ್ಲಿ ರಿಯಾಯಿತಿ

ರಾಜ್ಯದ ವಾಹನ ಸವಾರರಿಗೆ ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆಗೆ (Traffic Rule Violation)  ಸಂಬಂಧಿಸಿದಂತೆ ಬಾಕಿ ಉಳಿಸಿಕೊಂಡಿರುವ ಇ-ಚಲನ್ ದಂಡದ ಮೊತ್ತ ಪಾವತಿಸಲು ಸರ್ಕಾರವು ಮತ್ತೊಮ್ಮೆ ಶೇಕಡ 50 (50% discount) ರಷ್ಟು ರಿಯಾಯಿತಿಯನ್ನು ಘೋಷಿಸಿದೆ.

ಮೇ 2026 ರ ಮೊದಲಿನ ಅವಧಿಯವರೆಗೆ ಪೊಲೀಸ್ ಇಲಾಖೆಯಲ್ಲಿ ದಾಖಲಾಗಿರುವ ಇ-ಚಲನ್ ಪ್ರಕರಣಗಳ ಬಾಕಿ ದಂಡದ ಮೊತ್ತಕ್ಕೆ ಈ ರಿಯಾಯಿತಿ ಅನ್ವಯವಾಗಲಿದೆ.
ಬಾಕಿ ಇರುವ ದಂಡದ ಮೊತ್ತವನ್ನು ಶೇ. 50 ರಷ್ಟು ರಿಯಾಯಿತಿಯೊಂದಿಗೆ ಪಾವತಿಸಲು ನಿಯಮಿತ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಈ ಸೌಲಭ್ಯವು 2026 ರ  ಜೂನ್ 21 ರಿಂದ ಜುಲೈ 10 ರವರೆಗೆ ಜಾರಿಯಲ್ಲಿರುತ್ತದೆ.

ಸಾರ್ವಜನಿಕರು ಈ ನಿಗದಿತ ಅವಧಿಯೊಳಗೆ ಶೇ. 50 ರಷ್ಟು ದಂಡವನ್ನು ಮಾತ್ರ ಪಾವತಿಸುವ ಮೂಲಕ ತಮ್ಮ ವಾಹನಗಳ ಮೇಲಿರುವ ಸಂಚಾರ ನಿಯಮ ಉಲ್ಲಂಘನೆಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ವಾಹನಗಳ ಮೇಲೆ ಬಾಕಿ ಇರುವ ದಂಡದ ವಿವರಗಳನ್ನು ಪರಿಶೀಲಿಸಲು ಮತ್ತು ಹಣ ಪಾವತಿ ಮಾಡಲು ಕರ್ನಾಟಕ ಸ್ಟೇಟ್ ಪೊಲೀಸ್ (ಕೆಎಸ್‍ಪಿ) ಆ್ಯಪ್, ಬಿಟಿಪಿ-ಅಸ್ತ್ರಂ ಆ್ಯಪ್, ಹತ್ತಿರದ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ ಮತ್ತು ಕರ್ನಾಟಕ ಒನ್ / ಬೆಂಗಳೂರು ಒನ್ ವೆಬ್‍ಸೈಟ್‍ಗಳಲ್ಲಿ ಪರಿಶೀಲಿಸಿ, ಪಾವತಿಸಬಹುದಾಗಿದೆ.

ಸಾರ್ವಜನಿಕರು ಸರ್ಕಾರ ನೀಡಿರುವ ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಎಂದು ಬೆಂಗಳೂರಿನ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‍ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles