ಮಲ್ಲೇಶ್ವರ: ಚಿನ್ನದ ಸರಗಳ್ಳತನ ಮಾಡಿದ್ದ ಮೂವರ ಬಂಧನ- ಚಿನ್ನದ ಸರ, ದ್ವಿ-ಚಕ್ರ ವಾಹನಗಳ ವಶ

ಮಲ್ಲೇಶ್ವರ: ಚಿನ್ನದ ಸರಗಳ್ಳತನ ಮಾಡಿದ್ದ ಮೂವರು ವ್ಯಕ್ತಿಗಳ ಬಂಧನ
22 ಗ್ರಾಂನ 01 ಚಿನ್ನದ ಸರ ಹಾಗೂ 02 ದ್ವಿ-ಚಕ್ರ ವಾಹನಗಳ ವಶ, ಮೌಲ್ಯ ₹ 2.50 ಲಕ್ಷ

Bengaluru : ಮಲ್ಲೇಶ್ವರಂ ವ್ಯಾಪ್ತಿಯ 8/06/2026ರ ರಾತ್ರಿ ಸ್ನೇಹಿತರೊಂದಿಗೆ ಮಲ್ಲೇಶ್ವರಂ, 2ನೇ ಕ್ರಾಸ್‌ನ ನಂದಿನಿ ಬೂತ್ ಹತ್ತಿರದ ಸರ್ಕಲ್‌ನಲ್ಲಿ ಇಬ್ಬರು ಅಪರಿಚತ ವ್ಯಕ್ತಿಗಳು ದ್ವಿ-ಚಕ್ರ ವಾಹನದಲ್ಲಿ ಬಂದು ಪರ‍್ಯಾದುದಾರರ ಕೊರಳಿನಲ್ಲಿದ್ದ 22 ಗ್ರಾಂನ 01 ಚಿನ್ನದ ಸರ ಕಿತ್ತುಕೊಂಡು ದ್ವಿ-ಚಕ್ರ ವಾಹನದಲ್ಲಿ ಪರಾರಿಯಾಗಿರುತ್ತಾರೆ. ಈ ಕುರಿತು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ತನಿಖೆಕೈಗೊಂಡು, ಬಾತ್ಮೀದಾರರಿಂದ ಖಚಿತ ಮಾಹಿತಿ ಕಲೆಹಾಕಿ, 12/06/2026 ರಂದು ಓರ್ವ ವ್ಯಕ್ತಿಯನ್ನು ಅಗ್ರಹಾರ ದಾಸರಹಳ್ಳಿಯಲ್ಲಿರುವ ಆತನ ವಾಸದ ಮನೆಯಿಂದ ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಲಾಗಿ, ಈತನು ಇಬ್ಬರು ಸಹಚರರೊಂದಿಗೆ ಸೇರಿಕೊಂಡು ಚಿನ್ನದ ಸರವನ್ನು ಅಪಹರಣ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ. ಹಾಗೂ ಅದೇ ದಿನ ಮತ್ತಿಬ್ಬರು ಸಹಚರರನ್ನು ನಂದಿನಿಲೇಔಟ್ ಜೈಮಾರುತಿ ನಗರದ ಆವರ ವಾಸದ ಮನೆಯಿಂದ ವಶಕ್ಕೆ ಪಡೆದುಕೊಂಡು, ವಿಚಾರಣೆಗೊಳಪಡಿಸಲಾಗಿ, ಸರ ಅಪಹರಣ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾರೆ.
13/06/2026 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 05 ದಿನಗಳ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಗಳನ್ನು ಸುಧೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ ಅಪಹರಣ ಮಾಡಿದ್ದ ಚಿನ್ನದ ಸರವನ್ನು ಬಸವೇಶ್ವರ ನಗರದಲ್ಲಿರುವ ಗೋಲ್ಡ್ ಲೋನ್ ಕಂಪನಿಯಲ್ಲಿ ಅಡಮಾನವಿಟ್ಟಿರುವುದಾಗಿ ಹಾಗೂ ಕೃತ್ಯಕ್ಕೆ ಬಳಸಿದ 02 ದ್ವಿ-ಚಕ್ರ ವಾಹನಗಳನ್ನು ನಂದಿನಿ ಲೇಔಟ್‌ನ ಜೈ ಮಾರುತಿ ನಗರದ ಆರೋಪಿಯ ವಾಸದ ಮನೆಯ ಬಳಿ ನಿಲ್ಲಿಸಿರುವುದಾಗಿ ತಿಳಸಿರುತ್ತಾರೆ.
15/06/2026ರಂದು ಆರೋಪಿಗಳು ನೀಡಿದ ಮಾಹಿತಿಯ ಮೇರೆಗೆ ಬಸವೇಶ್ವರನಗರದ ಗೋಲ್ಡ್ ಲೋನ್ ಕಂಪನಿಯಿAದ 22 ಗ್ರಾಂನ 01 ಚಿನ್ನದ ಸರವನ್ನು ಹಾಗೂ ಕೃತ್ಯಕ್ಕೆ ಬಳಸಿದ 02 ದ್ವಿ-ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ ₹ 2,50,000/- (ಎರಡು ಲಕ್ಷದ ಐವತ್ತು ಸಾವಿರ ರೂಪಾಯಿಗಳು).
17/06/2026 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಬಿ.ಎಸ್.ನೇಮಗೌಡ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಮಲ್ಲೇಶ್ವರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಮತಿ ಪ್ರಭಾವತಿ ಪಾಂಡುರAಗ ರವರ ನೇತೃತ್ವದಲ್ಲಿ, ಮಲ್ಲೇಶ್ವರಂ ಪೊಲೀಸ್ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಶ್ರೀಮತಿ.ಭಾಗ್ಯವತಿ ಬಂತಿ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

Hot this week

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

Topics

ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಜುಲೈ 1 ರಂದು ಪತ್ರಿಕಾ ದಿನಾಚರಣೆ ಹಾಗೂ ವಿಚಾರ ಸಂಕಿರಣ

ಬೆಂಗಳೂರು, ಜೂನ್ 29 (ಕರ್ನಾಟಕ ವಾರ್ತೆ) :ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ...

ಶ್ರೀ ಕೃಷ್ಣ ರುಕ್ಷ್ಮಿಣಿ ಕಾನೂನು ಮಹಾವಿದ್ಯಾಲಯದಲ್ಲಿ ಮೌಲ್ಯೋತ್ಸವ

ಬೆಂಗಳೂರು: ಚಿಕ್ಕಜಾಲದ ಚೊಕ್ಕನಹಳ್ಳಿಯಲ್ಲಿರುವ ಶ್ರೀ ರೇವಣ ಸಿದ್ದೇಶ್ವರ ಎಜುಕೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ...

ಸಂಗೀತಾಸಕ್ತರನ್ನು ರಂಜಿಸಿದ “ನಾದ ನಮನ” ಸಂಗೀತ ಸಂಜೆ

ಬೆಂಗಳೂರು, ಜೂ.27: ಸಾಕಿ ಚಾರಿಟೇಬಲ್ ಟ್ರಸ್ಟ್(Saki Charitable Trust) ನಿಂದ ನಗರದ...

ಎಪಿಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾಗಿ ಸಿ.ಎ ಡಾ. ವಿಷ್ಣು ಭರತ್ ಆಲಂಪಳ್ಳಿ ಪುನರಾಯ್ಕೆ

ಬೆಂಗಳೂರು,ಜೂ.29: ನಗರದ 91 ವರ್ಷಗಳ ಹಳೆಯ ಎಪಿಎಸ್ ಶಿಕ್ಷಣ ಸಂಸ್ಥೆಗಳಿಗೆ ನೂತನ...

ಶ್ರೀರಾಮ ಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ, ಅದು ಜಗತ್ತಿನಾದ್ಯಂತ...

ರೋಟರಿ ಜಿಲ್ಲೆ 3191ರ ಜಿಲ್ಲಾ ಗವರ್ನರ್ ಆಗಿ ಡಾ. ಅನಿಲ್ ಗುಪ್ತ ಪದಗ್ರಹಣ (Dr. Anil Gupta sworn in as District Governor of Rotary District 3191)

ಬೆಂಗಳೂರು, ಜೂ29: ಉದ್ಯಮಿ ಹಾಗೂ ದೀರ್ಘಕಾಲದ ರೋಟೇರಿಯನ್ ಡಾ. ಅನಿಲ್ ಗುಪ್ತ...

ಶ್ರೀರಾಮಮಂದಿರದ ಹುಂಡಿ ಹಣ ದುರುಪಯೋಗ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಿ !

ಅಯೋಧ್ಯೆಯ ಶ್ರೀರಾಮ ಮಂದಿರವು(Ayodhya Sree Ram Temple) ಕೇವಲ ಒಂದು ಧಾರ್ಮಿಕ...

Related Articles