ಬೆಂಗಳೂರಿಗೆ ಆಗಮಿಸಿದ ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ವತಿಯಿಂದ ಇಂದು ದಿನಾಂಕ 27-06-2026 ರಂದು ಬೆಂಗಳೂರು ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ನಾಡಪ್ರಭು ಕೆಂಪೇಗೌಡ ಅವರ 517 ನೇ ಜಯಂತಿ ಕಾರ್ಯಕ್ರಮ ಹಾಗೂ ದಿನಾಂಕ: 28-06-2026 ರಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ಬೆಂಗಳೂರಿನ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 30ನೇ ಸಂಸ್ಥಾಪನಾ ದಿನಾಚರಣೆ ಮತ್ತು ನಶಾ ಮುಕ್ತ ಭಾರತ್ ಕಾನ್ ಕ್ಲೇವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಇಂದು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ಭಾರತದ ಉಪರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ.ಖಾದರ್ ಫರೀದ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕಾಂತರಾಜು.ಪಿ.ಎಸ್ ಸೇರಿದಂತೆ ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

