ವಿದ್ಯಾರ್ಥಿಗಳಿಗೆ ಟಿಸಿ ಕೊಡದ ಶಾಲೆ ವಿರುದ್ಧ ಶಿಕ್ಷಣ ಇಲಾಖೆಯಿಂದ ದೂರು ದಾಖಲು 

ನ್ಯಾಯಾಲಯ ಮತ್ತು ಸರ್ಕಾರದ ಆದೇಶ ಪಾಲಿಸದ ಶಾಲೆಯ  ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಿದ  ಶಿಕ್ಷಣ ಇಲಾಖೆ 
ಬೆಂಗಳೂರು: ಮಾನ್ಯತೆ ರದ್ದುಪಡಿಸಿ ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟವಾಗಿ ಆದೇಶ ಹೊರಡಿಸಿರುವ ಜೊತೆಗೆ ಹೈಕೋರ್ಟ್ (High Court) ಆದೇಶ ಉಲ್ಲಂಘಿಸಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವರ್ಗಾವಣೆ ಪತ್ರ – ಟಿಸಿ (Transfer Certificate) ವಿತರಿಸದೇ ಕಾನೂನು ಉಲ್ಲಂಘಿಸುತ್ತಿರುವ ಧಣಿಸಂದ್ರದ ಸಾಮರ ಇಂಟರ್  ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ನ ಮುಖ್ಯ ಆಡಳಿತಾಧಿಕಾರಿ ಖಾಲಿದ್ ಮುಷ್ರಫ್ ವಿರುದ್ಧ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ (Bangalore South) ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ರಾಘವೇಂದ್ರ ಸ್ವಾಮಿ ಅವರು ಕೊತ್ತನೂರು ಪೊಲೀಸ್ ಠಾಣೆಯಲ್ಲಿ (Kothanur Police Station) ದೂರು ದಾಖಲಿಸಿದ್ದಾರೆ.
ಹೈಕೋರ್ಟ್ ಆದೇಶ ಪರಿಪಾಲಿಸದ ಹಾಗೂ ಸರ್ಕಾರದ ಸೂಚನೆಗೆ ಕವಡೆ ಕಾಸಿನ ಕಿಮ್ಮತ್ತು ನೀಡದ ಆಡಳಿತ ಮಂಡಳಿ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ಪೊಲೀಸ್ ಮೊರೆ ಹೊಗಿದೆ.
Complaint filed with the education department against the school for not giving TCs to students
ಬುಧವಾರ ಈ ಕುರಿತು ದೂರು ನೀಡಿ, ತಕ್ಷಣವೇ ಸಾಮರ ಇಂಟರ್  ನ್ಯಾಷನಲ್ ಇಸ್ಲಾಮಿಕ್ ಸ್ಕೂಲ್ ನ ದಾಖಲೆಗಳನ್ನು ಥಣಿಸಂದ್ರದ ಸರ್ಕಾರಿ ಫ್ರೌಢ ಶಾಲೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ. ಇದೇ ಜನವರಿಯಲ್ಲಿ ಶಾಲೆ ಆಡಳಿತಾಧಿಕಾರಿ ಖಾಲಿದ್ ಮುಷ್ರಫ್ ವಿರುದ್ಧ ಕೊತ್ತನೂರು ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು.
ಶಾಲೆಯ ಮಾನ್ಯತೆ ರದ್ದಾದ ಮತ್ತು ಶಿಕ್ಷಣ ಇಲಾಖೆಯ ಸೂಚನೆ ಮೇರೆಗೆ 350 ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಟಿಸಿ ವಿತರಿಸಿದ್ದು, ಉಳಿದವರಿಗೆ ವರ್ಗಾವಣೆ ಪತ್ರ ನೀಡದೇ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆಡಳಿತಾಧಿಕಾರಿ ಮಾರಕವಾಗಿ ಪರಿಣಮಿಸಿದ್ದಾರೆ.
ಫ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು ಏಪ್ರಿಲ್ 10 ಮತ್ತು ಮೇ 15, 30 ರಂದು ಪೋಷಕರ ಸಭೆ ಆಯೋಜಿಸಿ ಶಾಲೆಯ ಮಾನ್ಯತೆ ಹಿಂಪಡೆದು ನೋಂದಣಿಯನ್ನು ರದ್ದುಪಡಿಸಿರುವ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದರು. ಇದೇ ಸಂದರ್ಭದಲ್ಲಿ  ಸಂಬಂಧಪಟ್ಟ ಶೈಕ್ಷಣಿಕ ದಾಖಲೆಗಳನ್ನು ಸರ್ಕಾರಿ ಪ್ರೌಢಶಾಲೆಗೆ ಹಸ್ತಾಂತರಿಸುವಂತೆ ಆದೇಶಿಸಿದ್ದು,  ನಿರ್ದೇಶನಗಳನ್ನು ಶಾಲಾ ಆಡಳಿತ ಮಂಡಳಿ ಈವರೆಗೆ ಪಾಲಿಸಿಲ್ಲ.
ಇಷ್ಟಾದರೂ ನಕಲಿ ಎಜುಕೇಷನ್ ಸೊಸೈಟಿ ಹೆಸರಿನಲ್ಲಿ 2026-2027 ನೇ ಸಾಲಿಗೆ ಜಾಮೀಯ ಮಹಮ್ಮದೀಯ ಮಂಸೂರ ಹೆಸರಿನಲ್ಲಿ ರಾಜ್ಯ ಪಠ್ಯಕ್ರಮ ಶಾಲೆ ಎಂದು ಜಾಹಿರಾತು ನೀಡಿ ದಾಖಲಾತಿ ಪ್ರಕ್ರಿಯೆ ಪ್ರಾರಂಭಿಸಿರುವುದು ಕಂಡುಬಂದಿದೆ. ಆದರೆ ಮುಖ್ಯ ಆಡಳಿತಾಧಿಕಾರಿ  ಖಾಲೀದ್ ಮುಷರಫ್ ಮತ್ತಿತರರ ಶಾಲಾ ಆಡಳಿತ ಮಂಡಳಿಯವರು  ಸಹ ಶಾಲೆಯಲ್ಲಿ ಹಾಜರಿರದೇ ಸಂಪರ್ಕಕ್ಕೆ ಸಿಗದೆ ಸ್ಪಂದಿಸದೆ ಇರುವುದರಿಂದ ಇಲಾಖಾ ಆದೇಶಗಳನ್ನು ಅನುಷ್ಟಾನಗೊಳಸಲು ಸಾಧ್ಯವಾಗಿಲ್ಲ.
ನಕಲಿ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಮುಷರಫ್ ವಿರುದ್ಧ ಈಗಾಗಲೇ ತಮ್ಮ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.  ಹೀಗಾಗಿ ಸಾಮರ್ ಇಂಟರ್ ನ್ಯಾಷನಲ್ ಸ್ಕೂಲ್ ದಾಖಲೆಗಳನ್ನು ಥಣಿಸಂದ್ರದ ಸರ್ಕಾರಿ ಪ್ರೌಢಶಾಲೆಗೆ ಹಸ್ತಾಂತರಿಸಲು ತಮ್ಮ ಹಂತದಲ್ಲಿ ಕ್ರಮ ಕೈಗೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿಯವರು ಕೋರಿದ್ದಾರೆ.

Hot this week

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

Topics

BIG NEWS :MUMBAI TOLL : ಮುಂಬೈ ಟೋಲ್ ದರಗಳಲ್ಲಿ ಶೇ.20ರಷ್ಟು ಏರಿಕೆ

ಮುಂಬೈ (Mumbai) ನಗರದ ಐದು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಅಕ್ಟೋಬರ್ 1,...

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ

9ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ತೆರಿಗೆ ಪದ್ಧತಿ ಪಾಠ: ಪರಿಷ್ಕೃತ NCERT...

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ

NEET PG 2026: ಉತ್ತರ ಕೀ, ಸ್ಕೋರ್‌ಕಾರ್ಡ್ ಬಿಡುಗಡೆಗೆ ಸಿದ್ಧತೆ; MCC...

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ: ವಿದೇಶಿ ಹೂಡಿಕೆದಾರರ ಮಾರಾಟದ ಒತ್ತಡ

ಭಾರತೀಯ ಷೇರು ಮಾರುಕಟ್ಟೆಗಳು(Share Market) ಸತತ ಕುಸಿತದ ಒತ್ತಡಕ್ಕೆ ಸಿಲುಕಿದ್ದು, ಕಳೆದ...

“ಚರಕ ಕಾರ್ಯಾಗಾರ”

157ನೇ ಗಾಂಧಿ ಜಯಂತಿ(157th Gandhi Jayanthi) ಅಂಗವಾಗಿ ಆರ್ಟ್ ಕಲ್ಚರಲ್ ಎಜುಕೇಶನಲ್ ...

ರಾಮರಸದಲ್ಲಿ ಆದಾಶರ್ಮಾ ದುರ್ಗಿ ರೋಲ್

ಗುರುದೇಶಪಾಂಡೆ ಒಡೆತನದ ’ಜಿ ಅಕಾಡೆಮಿ’ಯಲ್ಲಿ(Zee Academy) ನಟನೆ ಕಲಿತಿರುವ ಪ್ರತಿಭೆಗಳಿಗೆ ಅವಕಾಶ...

Related Articles