ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಲೋಕಭವನದಲ್ಲಿ ನಡೆದ ‘ನಶಾ ಮುಕ್ತ ಭಾರತ ಸಾಂಸ್ಕೃತಿಕ ಉತ್ಸವ’ದಲ್ಲಿ ಭಾಗವಹಿಸಿದರು
ಬೆಂಗಳೂರು, ಜೂನ್ 27, 2026: ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಕೃಷ್ಣನ್ ಹಾಗೂ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಶನಿವಾರ ಲೋಕಭವನದಲ್ಲಿ ಆಯೋಜಿಸಲಾದ ‘ನಶಾ ಮುಕ್ತ ಭಾರತ ಸಾಂಸ್ಕೃತಿಕ ಉತ್ಸವ’ದಲ್ಲಿ ಭಾಗವಹಿಸಿದರು.

ದಿಶಾಬೋಧ್ ಫೌಂಡೇಶನ್, ಮಾದಕ ವಸ್ತು ನಿಯಂತ್ರಣ ಬ್ಯೂರೋ (NCB) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಕಲಾತಂಡಗಳ ಕಲಾವಿದರು ದೇಶಭಕ್ತಿ, ಭಾರತೀಯ ಸಂಸ್ಕೃತಿ ಹಾಗೂ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಸಂದೇಶ ಸಾರುವ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

